ಈ ಬಾರಿ ಗಾಂಧಿ ಜಯಂತಿ ವಿನೂತನ ಆಚರಣೆ

ಅ. 2ರಿಂದ 31ರ ವರೆಗೆ ಗ್ರಾಪಂ ಮಟ್ಟದಲ್ಲೂ ಸ್ವತ್ಛತಾ ಕಾರ್ಯಕ್ರಮ: ಜಿಲ್ಲಾಧಿಕಾರಿ

Team Udayavani, Sep 24, 2019, 9:19 AM IST

dg-tdy-1

ದಾವಣಗೆರೆ: ನಗರದ 45 ವಾರ್ಡ್‌ಗಳಲ್ಲಿ ಮತ್ತು ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಅಕ್ಟೋಬರ್‌ 2 ರಿಂದ 31ರ ವರೆಗೆ ಪ್ರತಿದಿನ ಬೆಳಿಗ್ಗೆ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳುವ ಮೂಲಕ ಈ ಬಾರಿ ಗಾಂಧಿ  ಜಯಂತಿ ಅರ್ಥಪೂರ್ಣವಾಗಿ ಆಚರಿಸಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಜಿ. ಬೀಳಗಿ ತಿಳಿಸಿದ್ದಾರೆ.

ತಮ್ಮ ಕಚೇರಿ ಸಭಾಂಗಣದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್‌ ಬಹಾದ್ದೂರ ಶಾಸ್ತ್ರಿ ಅವರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,  ಸ್ವಚ್ಛ ಮೇವ ಜಯತೇ ಹಾಗೂಸ್ವಚ್ಛತಾ ಸೇವಾ ಕಾರ್ಯಕ್ರಮಗಳಿಗೆ ಅರ್ಥ ಬರಬೇಕೆಂದರೆ ಸ್ವತ್ಛತಾ ಕಾರ್ಯ ನಮ್ಮಿಂದಲೇಆರಂಭವಾಗಬೇಕು.

ಬೇರೆಯವರಲ್ಲಿ ಬದಲಾವಣೆ ಬಯಸುವ ಮೊದಲು ನಾವು ಬದಲಾಗಬೇಕು. ಈ ಹಿನ್ನೆಲೆಯಲ್ಲಿ ಈ ಬಾರಿ ಆಚರಿಸುವ ಗಾಂಧಿ  ಜಯಂತಿ ಅರ್ಥಪೂರ್ಣವಾಗಿರಬೇಕು. ಈ ಸ್ವಚ್ಛತಾ ಕಾರ್ಯಕ್ಕೆ ತಂಡ ರಚಿಸಿ, ಜಿಲ್ಲಾಮಟ್ಟದ ಅಧಿಕಾರಿಗಳನ್ನು ಒಂದೊಂದು ತಂಡದ ಮೇಲ್ವಿಚಾರಕರನ್ನಾಗಿ ನೇಮಿಸಲಾಗುವುದು ಎಂದರು.

ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತಿಗಳಲ್ಲಿಯೂ ಈ ಕಾರ್ಯಕ್ರಮಕ್ಕೆ ಚಾಲನೆ ದೊರೆಯುವಂತೆ ನೋಡಿಕೊಳ್ಳಬೇಕು. ಹಾಗೆ ಮಾಡುವುದರಿಂದ ಗಾಂಧಿ ಕಂಡ ಕನಸು ಹಾಗೂ ಲಾಲ್ ಬಹಾದ್ದೂರ ಶಾಸ್ತ್ರಿಯವರ ಆಶಯ ಈಡೇರಿಸಿದಂತಾಗುತ್ತದೆ. ಸ್ವಚ್ಛತಾ ಕಾರ್ಯಕ್ಕೆ ನೆಹರು ಯುವ ಕೇಂದ್ರ, ಎನ್‌.ಜಿ.ಓ ಗಳು, ಎನ್‌.ಸಿ.ಸಿ, ಸ್ಕೌಟ್ಸ್‌ ಮತ್ತು ಗೆ„ಡ್ಸ್‌ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲಾಗುವುದು ಎಂದು ತಿಳಿಸಿದರು.

ಖಾದಿ ಗ್ರಾಮೋದ್ಯೋಗ ಮಂಡಳಿ ಅಧಿಕಾರಿ ಮಾತನಾಡಿ, ಅಂದು ಎಲ್ಲರೂ ಖಾದಿ ವಸ್ತ್ರಗಳನ್ನು ಧರಿಸಿದರೆ ಜಯಂತಿಗೆ ಅರ್ಥ ಬರಲಿದೆ. ಖಾದಿ ವಸ್ತ್ರ ನೇಯುವವರನ್ನು ಪ್ರೋತ್ಸಾಹಿಸಿದಂತೆ ಆಗುತ್ತದೆ ಎಂದಾಗ ಹೌದು ಒಳ್ಳೆಯ ಸಲಹೆ ಇದು. ಅಂದು ಎಲ್ಲರೂ ಖಾದಿ ವಸ್ತ್ರಧರಿಸಿ ಎಂದು ಜಿಲ್ಲಾಧಿಕಾರಿ ತಿಳಿಸಿದರಲ್ಲದೆ, ಕಾರ್ಯಕ್ರಮದಲ್ಲಿ ಹೂಗುತ್ಛ (ಬೊಕೆ) ನೀಡುವುದು ಬೇಡ. ಹೂಗಳನ್ನು ನೀಡಿದರೆಸಾಕು. ಅದರೊಂದಿಗೆ ಒಂದು ಪುಸ್ತಕ ನೀಡಿ ಎಂದು ಸೂಚಿಸಿದರು.

ಪ್ರಭಾರ ಅಪರ ಜಿಲ್ಲಾ ಧಿಕಾರಿ ನಜ್ಮಾ.ಜಿ ಮಾತನಾಡಿ, ಅಕ್ಟೋಬರ್‌ 2ರಂದು ಬೆಳಿಗ್ಗೆ 9 ಗಂಟೆಗೆ ಮಹಾನಗರ ಪಾಲಿಕೆ ಆವರಣದಲ್ಲಿ ಆರಂಭವಾಗಲಿರುವ ವೇದಿಕೆ ಕಾರ್ಯಕ್ರಮದ ಉಸ್ತುವಾರಿಯನ್ನು ಮಹಾನಗರ ಪಾಲಿಕೆ ಮತ್ತು ವಾರ್ತಾ ಇಲಾಖೆಯವರಿಗೆ ವಹಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರು ಜಯಂತಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಲಾಗುವುದು. ಶಾಮಿಯಾನ, ಕುರ್ಚಿ, ವಿದ್ಯುದೀಪಾಲಂಕಾರ, ಮಹನೀಯರ ಭಾವಚಿತ್ರಗಳಿಗೆ ಹೂವು ಅಲಂಕಾರದ ಜವಾಬ್ದಾರಿಯನ್ನು ಮಹಾನಗರ ಪಾಲಿಕೆಯವರಿಗೆ ವಹಿಸಿಕೊಡಲಾಗಿದೆ. ನಿರೂಪಣೆ, ಭಜನಾ ಗೀತೆ, ಸರ್ವ ಧರ್ಮ ಪ್ರಾರ್ಥನೆ ಮತ್ತು ಗಾಂಧೀಜಿ ಪ್ರಿಯ ಗೀತೆಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಡೆಸಿಕೊಡಲಿದ್ದಾರೆ ಎಂದು ತಿಳಿಸಿದರು.

ಜಿಪಂ ಸಿಇಓ ಪದ್ಮಾ ಬಸವಂತಪ್ಪ, ಉಪ ವಿಭಾಗಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶಿವಾನಂದ ಕುಂಬಾರ್‌, ಡಿ.ಡಿ.ಪಿ.ಐ ಪರಮೇಶ್ವರಪ್ಪ, ಡಿ.ಎಚ್‌ .ಓ. ಡಾ| ರಾಘವೇಂದ್ರಸ್ವಾಮಿ, ಇತರರು ಸಭೆಯಲ್ಲಿದ್ದರು.

ಪ್ಲಾಸ್ಟಿಕ್ಫ್ಲೆಕ್ಸ್ಹಾಕಿದಲ್ಲಿ ನಿರ್ದಾಕ್ಷಿಣ್ಯ ಕ್ರಮ:  ಪ್ಲಾಸ್ಟಿಕ್‌ ಸಂಪೂರ್ಣ ನಿಷೇಧವಿದ್ದು ನಗರದ ತುಂಬೆಲ್ಲಾ ಫ್ಲೆಕ್ಸ್‌ ಜಾಹೀರಾತುಗಳು ಗೋಚರಿಸುತ್ತಿವೆ. ನಗರಪಾಲಿಕೆಯವರು ಈ ಕುರಿತು ತಕ್ಷಣ ಕಾರ್ಯಪ್ರವೃತ್ತರಾಗಬೇಕು. ಬ್ಯಾನರ್‌ಗಳನ್ನು ಬಟ್ಟೆಯಲ್ಲಿಯೇ ಮುದ್ರಿಸಬೇಕು. ಮುಂದಿನ ದಿನಗಳಲ್ಲಿ ಈ ಪ್ಲೆಕ್‌ ಗಳು ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಪ್ಲಾಸ್ಟಿಕ್‌ ಬಳಕೆಗೆ ಅನುವು ಮಾಡಿಕೊಟ್ಟಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾ ಧೀಕರಣದ ಆದೇಶ ಉಲ್ಲಂಘಿ ಸಿದಂತಾಗಲಿದೆ. ಹಾಗಾಗಿ ಪ್ಲಾಸ್ಟಿಕ್‌ನಿಂದ ಮುದ್ರಿಸಿರುವ ಫ್ಲೆಕ್ಸ್‌ ಹಾಕುವುದು ಬೇಡ. -ಮಹಾಂತೇಶ ಜಿ. ಬೀಳಗಿ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!

Rachel David hope on Unlock Raghava Movie

Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.