ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಶಿಕ್ಷಕರ ಕೊರತೆ ನೀಗಿಸಲು ಇದೊಂದೇ ಪರಿಹಾರ; ಶಾಲೆ ಆರಂಭದೊಳಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಆಗ್ರಹ

Team Udayavani, May 25, 2024, 7:25 AM IST

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ದಾವಣಗೆರೆ: ಪ್ರಸಕ್ತ ಶೈಕ್ಷಣಿಕ ವರ್ಷಾರಂಭದಲ್ಲಿಯೇ ಪುಸ್ತಕ, ಶಾಲಾ ಸಮವಸ್ತ್ರ ವಿತರಿಸಲು ಕ್ರಮ ವಹಿಸಿರುವ ಸರ್ಕಾರ, ಇದೇ ಸಂದರ್ಭದಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಂಡು ಶಿಕ್ಷಕರ ಕೊರತೆ ನೀಗಿಸಬಹುದೇ ಎಂದು ಶಾಲಾ ಶಿಕ್ಷಣ ಇಲಾಖೆ ನಿರೀಕ್ಷೆಯಲ್ಲಿದೆ.

ಕಳೆದ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು ಆರಂಭವಾಗುವ ಮೊದಲೇ ರಾಜ್ಯ ಸರ್ಕಾರ, ಅತಿಥಿ ಶಿಕ್ಷಕರ ನೇಮಕಾತಿಗೆ ಕ್ರಮ ವಹಿಸಿತ್ತು. ಎರಡು ಹಂತದಲ್ಲಿ 44 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡು ಶಿಕ್ಷಕರ ಕೊರತೆ ಸಮಸ್ಯೆಗೆ ಪರಿಹಾರ ಕಂಡು ಕೊಂಡಿತ್ತು. ಆದರೆ ಈ ಬಾರಿ ಈವರೆಗೂ ಅತಿಥಿ ಶಿಕ್ಷಕರ ನೇಮಕಾತಿ ವಿಚಾರವಾಗಿ ಯಾವುದೇ ಕ್ರಮ ಆಗಿಲ್ಲ. ಶಾಲಾರಂಭಕ್ಕೆ ಕೆಲವೇ ದಿನಗಳು ಬಾಕಿ ಇದ್ದು ಅಷ್ಟರೊಳಗೇ ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದರೆ ಮಕ್ಕಳಿಗೆ ವರ್ಷಾರಂಭದಿಂದಲೇ ಗುಣಮಟ್ಟದ ಶೈಕ್ಷಣಿಕ ಚಟುವಟಿಕೆ ನಡೆಯಲು ಅವಕಾಶ ಮಾಡಿಕೊಡಬಹುದು ಎಂಬ ಆಶಾಭಾವ ಇಲಾಖೆಯಲ್ಲಿ ಗರಿಗೆದರಿದೆ.

ರಾಜ್ಯಾದ್ಯಂತ ಪ್ರಾಥಮಿಕ ಶಾಲೆಗಳಲ್ಲಿ 50 ಸಾವಿರಕ್ಕೂ ಅಧಿಕ ಹಾಗೂ ಪ್ರೌಢಶಾಲೆಗಳಲ್ಲಿ 10 ಸಾವಿರಕ್ಕೂ ಅಧಿಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಕಳೆದ ವರ್ಷ 15,500 ಕಾಯಂ ಶಿಕ್ಷಕರ ನೇಮಕಾತಿಯಲ್ಲಿ 13 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಂಡಿದ್ದರೂ ಸಾವಿರಾರು ಶಿಕ್ಷಕರ ಕೊರತೆ ಎದುರಾಗಲಿದೆ. ಹೀಗಾಗಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅತಿಥಿ ಶಿಕ್ಷಕರ ನೇಮಕಾತಿ ಈ ಬಾರಿಯೂ ಅನಿವಾರ್ಯವಾಗಿದೆ.

ಪರಿಹಾರ ಬೋಧನೆಗೂ ಶಿಕ್ಷಕರ ಕೊರತೆ:
ಕಳೆದ ಶೈಕ್ಷಣಿಕ ವರ್ಷದಲ್ಲಿ ಅತಿಥಿ ಶಿಕ್ಷಕರಾಗಿ ಕೆಲಸ ನಿರ್ವಹಿಸಿದವರ 10 ತಿಂಗಳ ಗುತ್ತಿಗೆ ಅವಧಿ ಮಾರ್ಚ್‌ನಲ್ಲಿಯೇ ಮುಕ್ತಾಯವಾಗಿದ್ದು ಹೊಸದಾಗಿ ಅತಿಥಿ ಶಿಕ್ಷಕರ ನೇಮಕ ಆಗಬೇಕಾಗಿದೆ. ಪ್ರಸ್ತುತ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ನಡೆಸಿ, ಎಸ್ಸೆಸ್ಸೆಲ್ಸಿ ಪರೀಕ್ಷೆ-2ಕ್ಕೆ ಅಣಿಗೊಳಿಸುವ ಕಾರ್ಯ ನಡೆದಿದೆ. ಆದರೆ, ಈ ಪರಿಹಾರ ಬೋಧನೆಗೂ ಶಿಕ್ಷಕರ ಕೊರತೆ ಎದುರಾಗಿದೆ. ಹಲವು ಶಾಲೆಗಳಲ್ಲಿ ಮುಖ್ಯವಾಗಿ ಇಂಗ್ಲಿಷ್‌, ಹಿಂದಿ, ಗಣಿತ ಮತ್ತು ವಿಜ್ಞಾನ ವಿಷಯಗಳಿಗೆ ಅತಿಥಿ ಶಿಕ್ಷಕರನ್ನೇ ಹೆಚ್ಚು ಅವಲಂಬಿಸಲಾಗಿದೆ. ಈಗ ಸರ್ಕಾರಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರೂ ಇಲ್ಲ, ಕಾಯಂ ಶಿಕ್ಷಕರೂ ಸಮರ್ಪಕ ಸಂಖ್ಯೆಯಲ್ಲಿ ಇಲ್ಲ ಎಂಬಂತಾಗಿದ್ದು ಪರಿಹಾರ ಬೋಧನೆ ಕುಂಠಿತವಾಗಿ ಮಕ್ಕಳ ಫಲಿತಾಂಶದ ಮೇಲೆ ಭಾರೀ ದುಷ್ಪರಿಣಾಮ ಬೀರುವ ಆತಂಕ ಎದುರಾಗಿದೆ.

ಮರು ನೇಮಕದ ಆಮಿಷ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಅದರಲ್ಲಿಯೂ ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಕಳೆದ ವರ್ಷ ಕೆಲಸ ನಿರ್ವಹಿಸಿದ ಅತಿಥಿ ಶಿಕ್ಷಕರನ್ನೇ ಪರಿಹಾರ ಬೋಧನೆಗೂ ಬಳಸಿಕೊಳ್ಳಲಾಗುತ್ತಿದೆ. ಈಗ ನೀವು ಪರಿಹಾರ ಬೋಧನೆ ಮಾಡಿರಿ. ಮುಂದಿನ ವರ್ಷ ಸರ್ಕಾರ ನಿಮ್ಮನ್ನೇ ಮುಂದುವರಿಸಬಹುದು’ ಎಂದು ಕೆಲ ಶಾಲಾ ಮುಖ್ಯಸ್ಥರು ಆಮಿಷವೊಡ್ಡಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಪರಿಹಾರ ಬೋಧನೆಗೆ ಸಂಬಳವೂ ಇಲ್ಲ. ಮುಂದಿನ ವರ್ಷ ತಮ್ಮನ್ನೇ ನೇಮಕ ಮಾಡಿಕೊಳ್ಳುವ ಭರವಸೆಯೂ ಇಲ್ಲದೇ ಕೆಲಸ ಮಾಡುವುದು ಹೇಗೆ ಎಂದು ಕೆಲವರು ನಿರಾಕರಿಸುತ್ತಲೂ ಇದ್ದಾರೆ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನೀಗಿಸಲು ಕಳೆದ ವರ್ಷದಂತೆ ಈ ವರ್ಷವೂ ಸರ್ಕಾರ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಶೈಕ್ಷಣಿಕ ಚಟುವಟಿಕೆ ಸುಗಮವಾಗಿ ನಡೆಸಲು ಅನುಕೂಲವಾಗುವಂತೆ ಈಗಲೇ ಅತಿಥಿ ಶಿಕ್ಷಕರ ನೇಮಕಾತಿಗೆ ಕ್ರಮವಹಿಸಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.
– ಚಂದ್ರಶೇಖರ ನುಗ್ಗಲಿ, ಪ್ರಧಾನ ಕಾರ್ಯದರ್ಶಿ, ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ನೌಕರರ ಸಂಘ

ಹಿಂದಿನ ವರ್ಷಗಳಲ್ಲಿ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸಿದವರನ್ನೇ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೂ ಪರಿಗಣಿಸಬೇಕು. ಪ್ರತಿ ತಿಂಗಳ ಆಯಾ ತಿಂಗಳಲ್ಲೇ ವೇತನ ಸಿಗುವ ವ್ಯವಸ್ಥೆ ಆಗಬೇಕು. ಈಗ ಪ್ರಾಥಮಿಕ ಶಾಲೆ ಅತಿಥಿ ಶಿಕ್ಷಕರಿಗೆ 10,000 ರೂ., ಪ್ರೌಢಶಾಲೆ ಅತಿಥಿ ಶಿಕ್ಷಕರಿಗೆ 10,500 ರೂ. ಮಾಸಿಕ ವೇತನವಿದ್ದು ಇದನ್ನು ಹೆಚ್ಚಿಸಬೇಕು.
– ರಾಜೇಶ್ವರಿ ಕೊಪ್ಪದ, ಅತಿಥಿ ಶಿಕ್ಷಕರು

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.