Channagiri; ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣ; ಚನ್ನಗಿರಿಯಲ್ಲಿ ಬಿಗಿ ಬಂದೋಬಸ್ತ್
Team Udayavani, May 25, 2024, 11:33 AM IST
ದಾವಣಗೆರೆ: ಮಟ್ಕಾ ನಡೆಸುವ ಅನುಮಾನದ ಮೇಲೆ ವಿಚಾರಣೆಗೆ ಕರೆತಂದಿದ್ದ ವ್ಯಕ್ತಿ ಮೃತಪಟ್ಟ ಹಿನ್ನೆಲೆಯಲ್ಲಿ ರಾತ್ರಿ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ನಡೆದ ಗಲಭೆಗೆ ಸಂಬಂಧಿಸಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದ್ದು ಪಟ್ಟಣದಲ್ಲಿ ನೀರವ ಮೌನ ಆವರಿಸಿದೆ.
ವಶಕ್ಕೆ ಪಡೆದಿದ್ದ ವ್ಯಕ್ತಿಯನ್ನು ಪೊಲೀಸರೇ ಲಾಕಪ್ ಡೆತ್ ಮಾಡಿದ್ದಾರೆಂದು ಆರೋಪಿಸಿ ಐದು ನೂರಕ್ಕೂ ಹೆಚ್ಚು ಜನ ಏಕಾಏಕಿ ಠಾಣೆಗೆ ನುಗ್ಗಿ ಕಲ್ಲು ತೂರಾಟ ನಡೆಸಿ, ಠಾಣೆಯ ಕಿಟಕಿ ಬಾಗಿಲು, ಪೊಲೀಸರ ಬಸ್, ಜೀಪ್ ಸೇರಿದಂತೆ ಇನ್ನಿತರ ವಾಹನಗಳನ್ನು ಉರುಳಿಸಿ ಧ್ವಂಸಗೊಳಿಸಿದ್ದರು. ಇದನ್ನು ತಡೆಯಲು ಪೊಲೀಸರು ಲಾಠಿ ಪ್ರಹಾರ, ಅಶ್ರುವಾಯು ಸಿಡಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲಾಯಿತು.
ಗಲಭೆಯಲ್ಲಿ 11 ಪೊಲೀಸರಿಗೆ ಗಾಯವಾಗಿದ್ದು, ಏಳು ಪೊಲೀಸ್ ವಾಹನಗಳಿಗೆ ಕಲ್ಲ ತೂರಿ ಹಾನಿಗೊಳಿಸಲಾಗಿದೆ. ಗಲಭೆಯಲ್ಲಿ ಗಾಯಗೊಂಡ ಪೊಲೀಸರಿಗೆ ಚಿಕಿತ್ಸೆ ನೀಡಲಾಗಿದೆ.
ಪಟ್ಟಣದಲ್ಲಿ ಮೀಸಲು ಪಡೆ ಪೊಲೀಸ್ ಸೇರಿದಂತೆ ಹೆಚ್ಚುವರಿ ಪೊಲೀಸ್ ಪಡೆ ಪಹರೆ ಹಾಕಿದ್ದು, ಪರಿಸ್ಥಿತಿ ಈಗ ನಿಯಂತ್ರಣಕ್ಕೆ ಬಂದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಏನಾಗಿತ್ತು?
ಮಟ್ಕಾ ಜೂಜಾಟದ ಅನುಮಾನದ ಮೇಲೆ ವಿಚಾರಣೆ ನಡೆಸಲು ಪಟ್ಟಣದ ಟಿಪ್ಪುನಗರದ ನಿವಾಸಿ ಕಾರ್ಪೆಂಟರ್ ಆದಿಲ್ (32)ನನ್ನು ಪೊಲೀಸರು ಠಾಣೆಗೆ ಕರೆತಂದಿದ್ದರು. ಈ ಸಂದರ್ಭದಲ್ಲಿ ಆತ ಕಡಿಮೆ ರಕ್ತದೊತ್ತಡದಿಂದ ಕುಸಿದು ಬಿದ್ದ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ದುರೂ ಆತ ಬದುಕುಳಿಯಲಿಲ್ಲ. ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರು, ಸಂಬಂಧಿಕರು ಠಾಣೆಯ ಮುಂದೆ ಶವ ಇಟ್ಟು, ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಆದಿಲ್‌ನನ್ನು ಪೊಲೀಸರೇ ಹೊಡೆದು ಲಾಕಪ್ ಡೆತ್ ಮಾಡಿದ್ದಾರಂತೆ ಎಂಬ ಸುದ್ದಿ ಮಿಂಚಿನಂತೆ ಹಬ್ಬಿ, 500ಕ್ಕೂ ಹೆಚ್ಚು ಜನರು ಠಾಣೆಗೆ ನುಗ್ಗಿ ಕಿಟಕಿ ಗಾಜು, ಪೊಲೀಸ್ ವಾಹನಗಳಿಗೆ ಕಲ್ಲು ತೂರಿ ಧ್ವಂಸಗೊಳಿಸಿದ್ದರು.
ಠಾಣೆಯಲ್ಲಿ ಆರೇಳು ನಿಮಿಷವೂ ಇರಲಿಲ್ಲ- ಎಸ್ಪಿ
ನಿನ್ನೆ ಪೊಲೀಸ್ ಆದಿಲ್ ಎಂಬ ವ್ಯಕ್ತಿಯನ್ನು ಕರೆತರಲಾಗಿತ್ತು. ಠಾಣೆಗೆ ಕರೆತರುತ್ತಿದ್ದಂತೆ ಆತ ಕುಸಿದು ಬಿದ್ದ. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ, ಆತ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ವ್ಯಕ್ತಿ ಪೊಲೀಸ್ ಠಾಣೆಯಲ್ಲಿ ಆರರಿಂದ ಏಳು ನಿಮಿಷ ಕೂಡ ಇರಲಿಲ್ಲ. ಮೃತನ ಕಡೆಯವರು ಲಾಕಪ್ ಡೆತ್ ಎಂದು ಹೇಳುತ್ತಿದ್ದಾರೆ, ನಮ್ಮಲ್ಲಿ ಸಿಸಿ ಕ್ಯಾಮರಾ ಇದೆ. ಎಲ್ಲ ಪರಿಶೀಲನೆ ಮಾಡಲಾಗುತ್ತಿದೆ. ಪ್ರಾಮಾಣಿಕ ತನಿಖೆ ಮಾಡುತ್ತೇವೆ. ಮೃತನ ತಂದೆ ಈ ಕುರಿತು ದೂರು ಕೊಟ್ಟಿದ್ಸಾರೆ ತನಿಖೆ ಆಗುತ್ತದೆ. ಈ ಪ್ರಕರಣಕ್ಕೆ ಸಂಬಂಧಿಸಿ ಮೂರು ಪ್ರಕರಣ ದಾಖಲಾಗಿದೆ. ಏಳು ಪೊಲೀಸ್ ವಾಹನ ಹಾಗೂ ಹನ್ನೊಂದು ಜನ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದ್ದು ನಿಷೇಧಾಜ್ಞೆ ಜಾರಿಗೊಳಿಸಿಲ್ಲ ಎಂದು ದಾವಣಗೆರೆ ಎಸ್ ಪಿ ಉಮಾ ಪ್ರಶಾಂತ್ ಹೇಳಿದ್ದಾರೆ.
ನ್ಯಾಯಾಧೀಶರ ಸಮ್ಮುಖದಲ್ಲೇ ಮರಣೋತ್ತರ ಪರೀಕ್ಷೆ: ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಈಗಾಗಲೇ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಗಂಭೀರ ಪ್ರಕರಣ ಇದಾಗಿರುವದರಿಂದ ನ್ಯಾಯಾಧೀಶರ ಸಮ್ಮುಖದಲ್ಲಿ ಶವ ಪರೀಕ್ಷೆ ಮಾಡಲು ಪೊಲೀಸ್ ಇಲಾಖೆ ಸಿದ್ಧತೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.