

Team Udayavani, Jun 3, 2024, 7:35 PM IST
ದಾವಣಗೆರೆ: ಜೀವ ಬೆದರಿಕೆ ಕರೆ ಬಂದಿರುವ ಬಗ್ಗೆ ಹೊನ್ನಾಳಿ ಕ್ಷೇತ್ರದ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಅಂತಾರಾಷ್ಟ್ರೀಯ ಬೆದರಿಕೆ ಕರೆಗಳ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ರೇಣುಕಾಚಾರ್ಯ, ಹೊನ್ನಾಳಿ, ನ್ಯಾಮತಿಯಲ್ಲಿ ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕೆ ಸೋಮವಾರ ಮಧ್ಯಾಹ್ನ 12.52 ರ ಸಮಯದಲ್ಲಿ ನ್ಯಾಮತಿಗೆ ಹೋಗಿದ್ದಾಗ ನನಗೆ ಅಂತಾರಾಷ್ಟ್ರೀಯ ಕರೆ ಬಂದಿತು. ಮಿಸ್ಡ್ ಕಾಲ್ ಆಗಿದ್ದರಿಂದ ಕರೆ ಸ್ವೀಕರಿಸಲಿಲ್ಲ. ಮತ್ತೆ 12.53ಕ್ಕೆ ಕರೆ ಬಂದಿತು. ಆಗ ಕನ್ನಡ ದಲ್ಲೇ ಮಾತನಾಡಿದ ವ್ಯಕ್ತಿಯು ಇವತ್ತೇ ನಿನಗೆ ಕೊನೆಯ ದಿನ. ನಿನ್ನ ಮಗನಿಗೂ ಮುಗಿಸುತ್ತೇನೆಂಬುದಾಗಿ ಬೆದರಿಕೆ ಹಾಕಿದ ಎಂದು ದೂರಿದರು. ಯಾರೋ ನೀನು ಎಂಬುದಾಗಿ ನಾನು ಪ್ರಶ್ನಿಸಿದ ತತ್ ಕ್ಷಣ ಅಪರಿಚಿತ ವ್ಯಕ್ತಿಯು ಕರೆ ಕಟ್ ಮಾಡಿದ್ದಾನೆ. ಎರಡೂ ಕರೆಗಳ ಪೈಕಿ ಒಂದು ಕರೆಯನ್ನು ಮಲೇಷ್ಯಾದಿಂದ ಮಾಡಿದ್ದು ಎಂಬ ಮಾಹಿತಿ ಇದೆ. ಇನ್ನೊಂದು ಕರೆ ಎಲ್ಲಿಂದ ಬಂದಿದ್ದೆಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ಸಹ, ಕರೆಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ನಾನು ಕಳೆದ ಹಲವಾರು ವರ್ಷಗಳಿಂದ ಇಂತಹ ಕರೆಗಳ ಸ್ವೀಕರಿಸಿದ್ದೇನೆ. ಬೆದರಿಕೆಗಳಿಗೆ ಹೆದರುವುದಿಲ್ಲ. ಹೊನ್ನಾಳಿ ಮತ್ತು ನ್ಯಾಮತಿ ಕ್ಷೇತ್ರದ ಜನರ ರಕ್ಷಣೆ ಇರುವವರೆಗೆ ನನಗೆ ಏನೂ ಆಗುವುದಿಲ್ಲ ಎಂದು ತಿಳಿಸಿದರು.
Davanagere: ಹೆಜ್ಜೇನು ದಾಳಿಯಿಂದ ಮೃತಪಟ್ಟ ರೈತ
Davanagere: ಹೆಬ್ಬಾಳ್ಕರ್- ರವಿ ಪ್ರಕರಣದ ಬಗ್ಗೆ ನಾನೇನು ಹೇಳಲಾರೆ: ಸ್ಪೀಕರ್ ಖಾದರ್
Electricity: ಈ ಬಾರಿ ಲೋಡ್ ಶೆಡ್ಡಿಂಗ್ ಆಗದಂತೆ ಮುಂಜಾಗೃತಾ ಕ್ರಮ: ಸಚಿವ ಕೆ.ಜೆ. ಜಾರ್ಜ್
Davanagere: ಕೆಪಿಸಿಸಿ ಅಧ್ಯಕ್ಷರ ಹುದ್ದೆ ಖಾಲಿ ಇಲ್ಲ: ಸಚಿವ ಕೆ.ಜೆ. ಜಾರ್ಜ್
Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ
You seem to have an Ad Blocker on.
To continue reading, please turn it off or whitelist Udayavani.