ನಾಳೆ ವಿಟಿಯು ಕಾಲೇಜುಗಳ ಬಂದ್‌


Team Udayavani, Aug 31, 2017, 12:40 PM IST

31-DV-3.jpg

ದಾವಣಗೆರೆ: ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾಲಯದ ನಿರ್ಲಕ್ಷ, ಮೌಲ್ಯಮಾಪನ ವಿಳಂಬ ನೀತಿ ಖಂಡಿಸಿ ಸೆ.1ರಂದು ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬುಧವಾರ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್‌ (ಎಐಡಿಎಸ್‌ಒ) ನೇತೃತ್ವದಲ್ಲಿ ಮೆರವಣಿಗೆ, ಬೈಕ್‌ ರ್ಯಾಲಿ ನಡೆಸಲಾಯಿತು. 

ನಗರದ ಇಂಜಿನಿಯರಿಂಗ್‌ ಕಾಲೇಜುಗಳ ವಿದ್ಯಾರ್ಥಿಗಳೊಂದಿಗೆ ಯುಬಿಡಿಟಿ ಕಾಲೇಜಿನಿಂದ ಮೆರವಣಿಗೆ ಆರಂಭಿಸಿದ ಕಾರ್ಯಕರ್ತರು, ವಿದ್ಯಾರ್ಥಿ ಭವನ, ಜಯದೇವ ವೃತ್ತ, ಗಾಂಧಿ ವೃತ್ತದ ಮೂಲಕ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ, ಈ ಸಂಬಂಧ ಮನವಿ ಸಲ್ಲಿಸಿದರು. ಜಯದೇವ ವೃತ್ತದಲ್ಲಿ ಹಮ್ಮಿಕೊಂಡಿದ್ದ ಬಹಿರಂಗ ಸಭೆ ಉದ್ದೇಶಿಸಿ, ಮಾತನಾಡಿದ ಸಂಘಟನೆಯ ಮುಖಂಡರು, ಕೆಲವು ತಿಂಗಳಿಂದ ವಿಟಿಯು ಇಂಜಿನಿಯರಿಂಗ್‌
ವಿದ್ಯಾರ್ಥಿಗಳು ತಳಮಳ ಗೊಂಡಿದ್ದಾರೆ. ಡಿಸೆಂಬರ್‌ 2016ರ ಫಲಿತಾಂಶ ಪ್ರಕಟಗೊಳ್ಳುವುದು 5 ತಿಂಗಳು ವಿಳಂಬವಾಗಿ ಹಲವಾರು ವಿದ್ಯಾರ್ಥಿಗಳ ಫಲಿತಾಂಶವನ್ನು ತಡೆಹಿಡಿಯಲಾಗಿತ್ತು.

ಪರೀಕ್ಷೆಗೆ ತೆರಳುವ ಕೆಲವು ಗಂಟೆಗಳ ಹಿಂದೆ ಮರುಮೌಲ್ಯಮಾಪನ ಫಲಿತಾಂಶ, ತಡೆಹಿಡಿಯಲಾಗಿದ್ದ ಫಲಿತಾಂಶ ಪ್ರಕಟಿಸಲಾಗಿತ್ತು. ಫಲಿತಾಂಶದಲ್ಲಿನ ಅನಿಶ್ಚಿತತೆ ಮತ್ತು ಮೌಲ್ಯಮಾಪನ ಪ್ರಕ್ರಿಯೆಯಲ್ಲಿನ ಗೊಂದಲಗಳು ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಸಿವೆ  ಎಂದರು. ಇನ್ನು ಕ್ಯಾಷ್‌ ಸೆಮಿಸ್ಟರ್‌ನವಿದ್ಯಾರ್ಥಿಗಳು ಕೇವಲ 50 ದಿನಗಳಲ್ಲಿ 16 ರಿಂದ 20 ವಿಷಯಗಳ ಪರೀಕ್ಷೆ ಬರೆಯುವ ಸ್ಥಿತಿ ನಿರ್ಮಾಣ ಆಗಿತ್ತು. ಕೆಲವು ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ದಿನಕ್ಕೆರಡು ಪರೀಕ್ಷೆಗಳನ್ನು ಬರೆಯುವಂತೆ ಆಗಿತ್ತು. ಒಂದು ವರ್ಷ ಕಳೆದು ಕೊಳ್ಳಬೇಕಾಗುತ್ತದೆಯೇ ಎಂಬ ಭಯ ವಿದ್ಯಾರ್ಥಿಗಳನ್ನು ಆವರಿಸಿತು ಎಂದು ಆರೋಪಿಸಿದರು.

ವಿವಿಯ ನಿರ್ಲಕ್ಷ, ಮೌಲ್ಯಮಾಪನ  ವಿಳಂಬ ನೀತಿ ಖಂಡಿಸಿ ಸೆ.1ರಂದು ಸಂಘಟನೆಯ ನೇತೃತ್ವದಲ್ಲಿ ರಾಜ್ಯಾದ್ಯಂತ ವಿಟಿಯುನ ಎಲ್ಲಾ ಕಾಲೇಜುಗಳ ಬಂದ್‌ ಗೆ ಕರೆ ನೀಡಲಾಗಿದೆ ಎಂದು ತಿಳಿಸಿದರು. ಸಂಘಟನೆಯ ಜಂಟಿ ಕಾರ್ಯದರ್ಶಿ ನಾಗಸ್ಮಿತಾ, ಮಧು, ಪ್ರಮೋದ್‌, ಪವನ್‌, ಪುನೀತ್‌, ಹರ್ಮನ್‌, ತರುಣ್‌, ನಾಗಾರ್ಜುನ್‌, ಭಾರತಿ, ಬನಶ್ರೀ, ಸೌಮ್ಯ ಮೆರವಣಿಗೆ ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ACT

Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

4

Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ

Untitled-5

Kasaragod: ನಗ-ನಗದು ಕಳವು; ಆರೋಪಿ ಬಂಧನ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.