ಬಿಎಲ್‌ಒಗಳಿಗೆ ತರಬೇತಿ
Team Udayavani, Mar 16, 2019, 8:14 AM IST
ಹೊನ್ನಾಳಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನ್ಯಾಮತಿ ತಾಲೂಕು ಬಿಎಲ್‌ಒಗಳ ಸಭೆಯನ್ನು ಶುಕ್ರವಾರ
ಪಟ್ಟಣದ ತಾ.ಪಂ ಸಾಮರ್ಥ್ಯಸೌಧದಲ್ಲಿ ಹಮ್ಮಿಕೊಳ್ಳಲಾಗಿತ್ತು. ನ್ಯಾಮತಿ ತಾಲೂಕು ಉಪ ತಹಶೀಲ್ದಾರ್ ಎನ್. ನಾಗರಾಜಪ್ಪ ಮಾತನಾಡಿ, ದಾವಣಗೆರೆ ಲೋಕಸಭಾ ಚುನಾವಣೆ ವ್ಯಾಪ್ತಿಯ ಹೊನ್ನಾಳಿ ವಿಧಾನಸಭಾ ಕ್ಷೇತ್ರ-110ಕ್ಕೆ ಸೇರಿದ ನೂತನ ನ್ಯಾಮತಿ ತಾಲೂಕಿನ ಬೂತ್ ಮಟ್ಟದ ಅಧಿಕಾರಿಗಳು ಮತದಾರರ ಪಟ್ಟಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕಿದೆ ಎಂದು ಹೇಳಿದರು.
ಮೂಲ ಮತದಾನ ಪಟ್ಟಿ ಹಾಗೂ ಹೊಸದಾಗಿ ತಯಾರಿಸಿದ ಮತದಾರರ ಪಟ್ಟಯನ್ನು ಕೂಲಂಕಷವಾಗಿ ಪರಿಶೀಲಿಸಿ ಹೋಲಿಕೆ ಮಾಡಿ ಮತದಾರರಿಗೆ ಸಮರ್ಪಕವಾದ ವಿಳಾಸದೊಂದಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.
ಮತದಾರರ ಕ್ರಮ ಸಂಖ್ಯೆ, ಹೆಸರು, ವಿಳಾಸ, ವಯಸ್ಸು, ಲಿಂಗ ಸೇರಿದಂತೆ ಇತರ ಎಲ್ಲಾ ಅಂಶಗಳನ್ನು ಪರಿಶೀಲಿಸಿ ಯಾವುದೇ ತಪ್ಪಿಲ್ಲದಂತೆ ಸರಿಪಡಿಸಬೇಕು ಎಂದು ಹೇಳಿದರು. ಬೂತ್ ಮಟ್ಟದ ಅಧಿಕಾರಿಗಳ ಕೆಲಸ ಬಹು ಮುಖ್ಯವಾದುದು. ಮತದಾನ ಪ್ರಕ್ರಿಯೆಯಲ್ಲಿ ಯಾವುದೇ ಸಮಸ್ಯೆ ಬರದಂತೆ ಆರಂಭದಲ್ಲಿಯೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು. ನ್ಯಾಮತಿ ನೂತನ ತಹಶೀಲ್ದಾರ್ ರೇಣುಕಾ, ಇತರ ಕಂದಾಯ ನೌಕರರು ಇದ್ದರು. ಹೊನ್ನಾಳಿ ಕಸಬಾ 1 ಬಿಎಲ್ ಒಗಳಿಗೂ ತರಬೇತಿ ನಡೆಯಿತು.
ಮತದಾರರ ಪಟ್ಟಿ ಪರಿಷ್ಕರಣೆ
ಜಗಳೂರು: ಪಟ್ಟಣದ ತಾಲೂಕು ಕಚೇರಿಯಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು ದಿನವಿಡಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಸಿದರು. ಶುಕ್ರವಾರ ಜಗಳೂರು ಕ್ಷೇತ್ರದ 262 ಬಿಎಲ್‌ಒಗಳು ತಮ್ಮ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿರುವ ತಿದ್ದುಪಡಿಗಳನ್ನು ಸ್ಥಳದಲ್ಲೇ ಸರಿಪಡಿಸಿ ನೀಡಿದರು. ಚುನಾವಣಾ ಶಿರಸ್ತೇದಾರ್ ಸುನೀಲ್ ಕುಮಾರ್ ಮಾತನಾಡಿ, ಮತದಾರರ ಪಟ್ಟಿ ಈ ಹಿಂದೆ ರಾಜ್ಯವ್ಯಾಪ್ತಿಯಲ್ಲಿ ಇರುತ್ತಿತ್ತು. ಆದರೆ ಈಗ ದೇಶಾದ್ಯಂತ ಒಂದೇ ಸಾಫ್ಟ್ ವೇರ್ ಅಳಡಿಸಲಾಗಿದ್ದು, ಪಟ್ಟಿಯಲ್ಲಿ ತಿದ್ದುಪಡಿ ಮಾಡಿ ಅಪ್‌ಲೋಡ್ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ವಿಡಿಯೋ ಕಾನ್ಫರೆನ್ಸ್
ಹೊನ್ನಾಳಿ: ಶುಕ್ರವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ಚುನಾವಣೆ ಸಿದ್ಧತೆ ಕುರಿತು ಜಿಲ್ಲಾ ಮಟ್ಟದ ವಿಡಿಯೋ ಕಾನ್ಫರೆನ್ಸ್ ನಡೆಯಿತು. ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಸುರೇಶ್‌ರೆಡ್ಡಿ, ಹೊನ್ನಾಳಿ ತಹಶೀಲ್ದಾರ್ ಮಲ್ಲಿಕಾರ್ಜುನ, ನ್ಯಾಮತಿ ತಹಶೀಲ್ದಾರ್ ರೇಣುಕಾ ಸೇರಿದಂತೆ ಇತರ ಅಧಿಕಾರಿಗಳು ಬಿಎಲ್‌ಒಗಳು ಭಾಗವಹಿಸಿ ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ಮಾಹಿತಿ, ಮಾರ್ಗದರ್ಶನ ಪಡೆದರು. ಉಪವಿಭಾಗಾಧಿಕಾರಿ ಕುಮಾರಸ್ವಾಮಿ ತಾಲೂಕು ಮಟ್ಟದ ಸಹಾಯಕ ಚುನಾವಣಾಧಿಕಾರಿಗಳೊಂದಿಗೆ ಸಂಭಾಷಣೆ ನಡೆಸಿ ಮತದಾನ ಪಟ್ಟಿ ಪರಿಷ್ಕರಣೆ ಸೇರಿದಂತೆ ಇತರ ಮಾಹಿತಿ ವಿಚಾರಿಸಿ, ಬಿಎಲ್‌ಒಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು. ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ, ಇತರ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ಕಾರ್ಮಿಕರಿಗೆ ಮತ ಜಾಗೃತಿ
ಜಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಆಸಗೋಡು ಗ್ರಾಪಂ ವ್ಯಾಪ್ತಿಯ ತುಪ್ಪದಹಳ್ಳಿ ಗ್ರಾಮದ ಕೆರೆಯಲ್ಲಿ ಶುಕ್ರವಾರ ನರೇಗಾ ಯೋಜನೆಯಡಿ ಹೂಳೆತ್ತುವ ಕೂಲಿ ಕಾರ್ಮಿಕರಿಗೆ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಭೀಮಾನಾಯ್ಕ ಹಾಗೂ ತಂಡದವರು ಮತದಾನ ಜಾಗೃತಿ ಮೂಡಿಸಿದರು. ಜಿಪಂ ಲೆಕ್ಕಾಧಿಕಾರಿ ಆಂಜನೇಯ, ಎಪಿಒ ಶಶಿಧರ್, ಇಒ ಜಾನಕಿರಾಮ್, ಪಿಡಿಒಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
MUST WATCH
ಹೊಸ ಸೇರ್ಪಡೆ
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.