ಇಲಾಖೆ ಮಾಹಿತಿ ನೀಡುವ ಪೇದೆ ವರ್ಗಾಯಿಸಿ

Team Udayavani, Jan 29, 2019, 7:12 AM IST

dvg-4.jpg

ಹೊನ್ನಾಳಿ: ಭ್ರಷ್ಟಾಚಾರ ವಿರೋಧಿ ವೇದಿಕೆ ಅಧ್ಯಕ್ಷ ಗುರುಪಾದಯ್ಯ ಮಠದ್‌ ಅವರ ಪತ್ನಿ ಮಂಜುಳಾ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಪೇದೆಯಾಗಿ ಕಾರ್ಯ ನಿರ್ವವಹಿಸುತ್ತಿದ್ದು, ಠಾಣೆಯ ಎಲ್ಲಾ ಮಾಹಿತಿಯನ್ನು ತಮ್ಮ ಪತಿಗೆ ತಿಳಿಸುತ್ತಿರುವುದರಿಂದ ಅವರನ್ನು ತಕ್ಷಣ ಬೇರೆ ತಾಲೂಕಿಗೆ ವರ್ಗಾವಣೆ ಮಾಡಬೇಕು ಎಂದು ದಲಿತ ಮುಖಂಡರಾದ ದಿಡಗೂರು ರುದ್ರೇಶ್‌ ಮತ್ತು ತಮ್ಮಣ್ಣ ಒತ್ತಾಯಿಸಿದರು.

ಸೋಮವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ತಾಲೂಕು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಜನಾಂಗದ ಹಿತರಕ್ಷಣಾ ಜಾಗೃತ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಕುಂದೂರು ಗ್ರಾಮದ ಪ್ರಸನ್ನಕುಮಾರ್‌ ಎಂಬುವವರು ಭ್ರಷ್ಟಾಚಾರ ವಿರೋಧಿ ವೇದಿಕೆ ನಿರ್ದೇಶಕರಾಗಿದ್ದು, ಗ್ರಾಪಂ ಅಧ್ಯಕ್ಷೆ ಪತಿ ಮಂಜಪ್ಪ ಮತ್ತು ಮಾಜಿ ಅಧ್ಯಕ್ಷೆ ಮಗ ಆಂಜನೇಯ ಮೇಲೆ ಹಲ್ಲೆ ಎಸಗಿ ಜಾತಿ ನಿಂದನೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯೆಲ್ಲವನ್ನು ಪೇದೆ ಮಂಜುಳಾ ತಮ್ಮ ಪತಿಗೆ ತಿಳಿಸಿ ಇಲ್ಲದ ಅವಘಡಗಳಿಗೆ ಕಾರಣರಾಗಿದ್ದಾರೆ. ಇಂತಹವರನ್ನು ತಕ್ಷಣ ಬೇರೆ ಕಡೆಗೆ ವರ್ಗಾವಣೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಪ್ರಸನ್ನಕುಮಾರ್‌ ವಿರುದ್ಧ ಜಾತಿ ನಿಂದನೆ ದೂರು ದಾಖಲಾಗಿದ್ದರೂ ಈವರೆಗೆ ಬಂಧಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದಿಡಗೂರು ಗ್ರಾಮದ ಮುಜರಾಯಿ ಇಲಾಖೆಗೆ ಸೇರಿದ ಆಂಜನೇಯ ದೇವಸ್ಥಾನದಲ್ಲಿ ಕಳೆದ 10 ವರ್ಷಗಳಿಂದ ಸುಮಾರು 36 ಲಕ್ಷ ರೂ. ಹುಂಡಿ ಹಣ ದುರುಪಯೋಗವಾಗಿದೆ. ತಹಶೀಲ್ದಾರ್‌ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖಂಡ ತಮ್ಮಣ್ಣ ಸಭೆಯಲ್ಲಿ ಒತ್ತಾಯಿಸಿದರು. ತಹಶೀಲ್ದಾರ್‌ ತುಷಾರ ಬಿ.ಹೊಸೂರು ಸೂಕ್ತ ಕ್ರಮದ ಭರವಸೆ ನೀಡಿದರು.

ಮುಖಂಡ ಪ್ರಭಾಕರ್‌ ಮಾತನಾಡಿ, ಕೆಂಗಲಹಳ್ಳಿ ಗ್ರಾಮದಲ್ಲಿ ದಲಿತರಿಗೆ ಸ್ಮಾಶನದ ಸಮಸ್ಯೆ ಇದ್ದು, ಅಲ್ಲಿ ಜಾಗ ಕೊಡುವುದನ್ನು ಬಿಟ್ಟು ಪಕ್ಕದ ಬನ್ನಿಕೋಡು ಗ್ರಾಮದಲ್ಲಿ ಜಾಗ ಕೊಡಲಾಗಿದೆ ಎಂದು ದೂರಿದರು. ಸರ್ಕಾರಿ ನಿಯಮದಂತೆ ಗ್ರಾಮದ 3 ಕಿ.ಮೀ. ವ್ಯಾಪ್ತಿಯಲ್ಲಿ ಜಾಗ ಕೊಡಬಹುದಾಗಿದ್ದು, ಆ ವ್ಯಾಪ್ತಿಯಲ್ಲಿ ಬೇರೆ ಗ್ರಾಮಗಳು ಬಂದರೆ ಅಲ್ಲಿಯೂ ಜಾಗ ಕೊಡಬಹುದು. ಆದರೂ ಮುಂದಿನ ದಿನಗಳಲ್ಲಿ ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪಟ್ಟಣದ ಮಲ್ಲಪ್ಪ ಕಾಂಪ್ಲೆಕ್ಸ್‌ನ 2ನೇ ಅಂತಸ್ತಿನಲ್ಲಿ ನೋಂದಣಿ ಕಚೇರಿ ಹಾಗೂ ಸಿಡಿಪಿಒ ಕಚೇರಿಗಳಿದ್ದು, ಲಿಫ್ಟ್‌ ಇಲ್ಲದ ಕಾರಣ ವೃದ್ಧರಿಗೆ ತೊಂದರೆಯಾಗುತ್ತಿದೆ. ತಕ್ಷಣ ಕಚೇರಿಗಳನ್ನು ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದರು. ತಾ.ಪಂ ಇಒ ಕೆ.ಸಿ. ಮಲ್ಲಿಕಾರ್ಜುನ, ಬಿಇಒ ಜಿ.ಇ. ರಾಜೀವ್‌, ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.