ಕಲಾವಿದರಿಗೆ ಅವಕಾಶ ಕಲ್ಪಿಸಲು ಯತ್ನ
Team Udayavani, Sep 4, 2021, 12:36 PM IST
ದಾವಣಗೆರೆ: ಅನುದಾನದ ಕೊರತೆ ಹಾಗೂ ಕೋವಿಡ್ ಹಿನ್ನೆಲೆಯಲ್ಲಿ ಬಹುತೇಕ ಕ ಲಾವಿದರಿಗೆ ಪ್ರಸ್ತುತ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ಸಿಗದೇ ಇರಬಹುದು. ಆದರೇ ಮುಂದಿನ ದಿನಗಳಲ್ಲಿ ಅನುದಾನ ಬಂದ ನಂತರ ಹೆಚ್ಚು ಕಾರ್ಯಕ್ರಮಗಳಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಾತಾ ಮಂಜಮ್ಮ ಜೋಗತಿ ಹೇಳಿದರು.
ನಗರದ ಕುವೆಂಪು ಕನ್ನಡ ಭವನದಲ್ಲಿ ಕರ್ನಾಟಕ ಜಾನಪದ ಅಕಾಡೆಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆದ “ಜಾನಪದ ಸಂಭ್ರಮ’ ಕಾರ್ಯಕ್ರಮವನ್ನು ರಾಗಿ ಬೀಸುವ ಮೂಲಕ ಹಾಗೂ ಒನಕೆಯಿಂದ ಭತ್ತ ಕುಟ್ಟುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರೂ ತಾವು ಮಾಡುವ ಕಾಯಕದಲ್ಲಿ ದೇವರನ್ನು ಕಾಣಬೇಕು. ಎಂಥದೇ ಸಂಕಷ್ಟದ ಸಂದರ್ಭಗಳು ಎದುರಾದರೂ ಧೈರ್ಯವಾಗಿ ಎದುರಿಸಬೇಕು. ಸಂಕಷ್ಟಕ್ಕೆ ಹೆದರಿ ಯಾರೂ ಆತ್ಮಹತ್ಯೆ ಮಾಡಿಕೊಳ್ಳುವ ದುಸ್ಸಾಹಸಕ್ಕೆ ಕೈ ಹಾಕಬಾರದು ಎಂದರು.
ಜಾನಪದ ವಿದ್ವಾಂಸ ಡಾ| ಎಂ.ಜಿ. ಈಶ್ವರಪ್ಪ ಮಾತನಾಡಿ, ಜಾಗತೀಕರಣ, ನಗರೀಕರಣ, ಆಧುನೀಕರಣಗಳಿಂದ ಜಾನಪದದ ಮೂಲ ಗುಣವನ್ನು ಬದಲಾಯಿಸಲು ಸಾಧ್ಯವಿಲ್ಲ. ಶ್ರಮದ ಜೊತೆಗೆ ಸಾಹಿತ್ಯ ಸೃಷ್ಟಿಸುವುದನ್ನು ಜನಪದರಲ್ಲಿ ಕಾಣಲು ಸಾಧ್ಯವಿದೆ. ಜಾನಪದ ಆಧುನಿಕವಾಗುತ್ತಿರುವ ಇವತ್ತಿನ ಸಂದರ್ಭದಲ್ಲಿ ಬೀಸುವ ಕಲ್ಲು, ಒನಕೆ ಮುಂತಾದ ಹಳ್ಳಿಗರು ಬಳಕೆ ಮಾಡುತ್ತಿದ್ದ ವಸ್ತುಗಳು ಕೇವಲ ಪ್ರದರ್ಶನದ ವಸ್ತುಗಳಾಗಿವೆ ಎಂದು ವಿಷಾದಿಸಿದರು.
ಸಿದ್ಧಗಂಗಾ ವಿದ್ಯಾಸಂಸ್ಥೆ ಮುಖ್ಯಸ್ಥೆ ಜಸ್ಟಿನ್ ಡಿಸೋಜ ಮಾತನಾಡಿದರು.ಕ ನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ| ಎಚ್.ಎಸ್. ಮಂಜುನಾಥ್ ಕುರ್ಕಿ, ಕ ನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಉಪಸ್ಥಿತರಿದ್ದರು. ಜಾನಪದ ಕ ಲಾವಿದ ಯುಗಧರ್ಮ ರಾಯಣ್ಣ ತತ್ವಪದ ಹಾಡಿದರು. ಜಾನಪದ ಅಕಾಡೆಮಿ ಸದಸ್ಯೆ ರುದ್ರಾಕ್ಷಿಬಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ ರ್ನಾಟಕ ಜಾನಪದ ಅಕಾಡೆಮಿ ರಿಜಿಸ್ಟ್ರಾರ್ ಎನ್. ನಮೃತಾ ಸ್ವಾಗತಿಸಿದರು. ರಾಘವೇಂದ್ರ ನಾಯರಿ ನಿರೂಪಿಸಿದರು. ರವಿಚಂದ್ರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.