ಇಂದು ಜನಾಶೀರ್ವಾದ ಯಾತ್ರೆ
Team Udayavani, Aug 18, 2021, 6:35 PM IST
ದಾವಣಗೆರೆ : ಕೇಂದ್ರದ ಸಾಮಾಜಿಕ ನ್ಯಾಯ ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಎ. ನಾರಾಯಣ ಸ್ವಾಮಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಜನಾಶೀರ್ವಾದ ಯಾತ್ರೆ ಆ.18ರಂದು ದಾವಣಗೆರೆಗೆ ಆಗಮಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಎಂ. ವೀರೇಶ್ ಹನಗವಾಡಿ ತಿಳಿಸಿದರು.
ಕೇಂದ್ರದಲ್ಲಿ ನೂತನ ಸಚಿವರಾದ ನಂತರ ಜನರಿಂದಲೇ ಆಶೀರ್ವಾದ ಪಡೆಯುವ ಮೂಲಕ ಇನ್ನೂ ಹೆಚ್ಚಿನ ಪ್ರೇರಣೆಯಿಂದ ಕೆಲಸ ಮಾಡುವ ಜೊತೆಗೆ ಸಾರ್ವಜನಿಕರ ಸಮಸ್ಯೆ, ಸಂಕಷ್ಟ ತಿಳಿದು, ಪರಿಹಾರ ಒದಗಿಸುವ ಮಹತ್ತರ ಉದ್ದೇಶದಿಂದ ಜನಾಶೀರ್ವಾದ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿ ಯಲ್ಲಿ ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟದ ಪುನರ್ ರಚನೆಯಲ್ಲಿ ಕರ್ನಾಟಕದ ನಾಲ್ವರು ಒಳಗೊಂಡಂತೆ 47 ಜನರು ನೂತನ ಸಚಿವರಾಗಿದ್ದಾರೆ.
ಕಾಂಗ್ರೆಸ್ ಲೋಕಸಭಾ ಅಧಿವೇಶನದಲ್ಲಿ ನೂತನ ಸಚಿವರ ಪರಿಚಯ ಮಾಡಿಕೊಡಲು ಅವಕಾಶ ನೀಡಲಿಲ್ಲ. ಹಾಗಾಗಿ ಜನರಿಂದ ಆಯ್ಕೆಯಾಗಿರುವಂತಹವರು ಜನರಿಂದಲೇ ಆಶೀರ್ವಾದ, ಪ್ರೇರಣೆ ಪಡೆಯುವಂತಾಗಲಿ ಎಂದು ರಾಜ್ಯದಲ್ಲಿ ಕೇಂದ್ರದ ನಾಲ್ವರು ಸಚಿವರು ಜನಾಶೀರ್ವಾದ ಯಾತ್ರೆ ಹಮ್ಮಿಕೊಂಡಿದ್ದಾರೆ. ಎ. ನಾರಾಯಣಸ್ವಾಮಿ ನೇತೃತ್ವದಲ್ಲಿ ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಗದಗದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಲೋಕಸಭಾ ಅಧಿವೇಶನದಲ್ಲಿ ಕೊರೊನಾ 3ನೇ ಅಲೆ, ವಿವಿಧ ರಾಜ್ಯಗಳಲ್ಲಿ ನೆರೆ, ಪ್ರವಾಹ ಸಂಕಷ್ಟ, ಆಫ್ಘಾನಿಸ್ತಾನದಲ್ಲಿನ ಪರಿಸ್ಥಿತಿ, ಕೊರೊನಾ ಲಸಿಕಾಕರಣ ಒಳಗೊಂಡಂತೆ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ಮಾಡಲಿಕ್ಕೆ ಅವಕಾಶವನ್ನೇ ನೀಡಲಿಲ್ಲ. ಕಾಂಗ್ರೆಸ್ ಅಕ್ಷರಶಃ ಅಭಿವೃದ್ಧಿ ವಿರೋಧಿ ಧೋರಣೆ ಅನುಸರಿಸಿತು ಎಂದು ದೂರಿದರು. ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಅವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್, ಸಂಸದ ಡಾ| ಜಿ.ಎಂ. ಸಿದ್ದೇಶ್ವರ, ಜಿಲ್ಲೆಯ ಎಲ್ಲ ಬಿಜೆಪಿ ಶಾಸಕರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಗಣ್ಯರು, ಮುಖಂಡರು ಜನಾಶೀರ್ವಾದ ಯಾತ್ರೆಯ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಕೊರೊನಾ ಮಾರ್ಗಸೂಚಿ ಅನ್ವಯ ಎಲ್ಲ ಕಾರ್ಯಕ್ರಮ ನಡೆಯಲಿವೆ. ಸಾರ್ವಜನಿಕರು ಕುಂದುಕೊರತೆ, ಸಮಸ್ಯೆಗಳನ್ನು ಸಚಿವರಲ್ಲಿ ಹೇಳಿಕೊಳ್ಳಲು ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್ ಮಾತನಾಡಿ, ಕೇಂದ್ರದ ಸಾಮಾಜಿಕ ನ್ಯಾಯ ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಎ. ನಾರಾಯಣಸ್ವಾಮಿ ಅವರನ್ನು ಬುಧವಾರ ಸಂಜೆ 4ಕ್ಕೆ ಹೆಬ್ಟಾಳು ಟೋಲ್ ಗೇಟ್ ಬಳಿ ಸ್ವಾಗತಿಸಲಾಗುವುದು. 4.20ಕ್ಕೆ ಸರ್ಕ್ನೂಟ್ ಹೌಸ್‌ನಿಂದ ಬೈಕ್ ರ್ಯಾಲಿ ನಡೆಯಲಿದೆ. ಹದಡಿ ರಸ್ತೆ, ಹಳೆ ಪಿಬಿ. ರಸ್ತೆ ಮೂಲಕ ಸಂಗೊಳಿ ರಾಯಣ್ಣ ವೃತ್ತ ತಲುಪಿ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಲಾಗುವುದು.
ಕೊಂಡಜ್ಜಿ ರಸ್ತೆ ಮೂಲಕ ಹೊಂಡದ ಸರ್ಕಲ್‌ನಲ್ಲಿ ಮದಕರಿ ನಾಯಕರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುವುದು. ಕಾಯಿಪೇಟೆಯಲ್ಲಿನ ಶ್ರೀ ಬಸವೇಶ್ವರ ಪ್ರತಿಮೆ, ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ನಂತರ ಹದಡಿ ರಸ್ತೆಯ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ನಡೆಯುವ ಜನಾಶೀರ್ವಾದ ಯಾತ್ರೆಯ ವೇದಿಕೆ ಕಾರ್ಯಕ್ರಮದಲ್ಲಿ ಸಚಿವರು, ಗಣ್ಯರು ಭಾಗವಹಿಸುವರು ಎಂದು ತಿಳಿಸಿದರು.
ವೇದಿಕೆ ಕಾರ್ಯಕ್ರಮದ ನಂತರ ಸಂಜೆ 6.30ಕ್ಕೆ ಆರ್‌ಎಸ್‌ಎಸ್ ಪ್ರಮುಖರ ಭೇಟಿ, ಕಾರ್ಯಾಲಯಕ್ಕೆ ಭೇಟಿ ನೀಡುವರು. ಸಂಜೆ 7.30ಕ್ಕೆ ಕೊರೊನಾ ವಿರುದ್ಧ ಸೆಣಸುತ್ತಿರುವ ವೈದ್ಯರ ಭೇಟಿ ಮಾಡುವರು. ಗುರುವಾರ ಬೆಳಗ್ಗೆ 8ಕ್ಕೆ ವೀರಶೈವ ಪಂಚಮಸಾಲಿ ಪೀಠ, 8.20ಕ್ಕೆ ಕನಕ ಗುರುಪೀಠ, 8.40ಕ್ಕೆ ವಾಲೀ¾ಕಿ ಗುರುಪೀಠಕ್ಕೆ ಭೇಟಿ ನೀಡಿದ ನಂತರ ಹಾವೇರಿಗೆ ತೆರಳುವರು ಎಂದು ಮಾಹಿತಿ ನೀಡಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾದ ಶ್ರೀನಿವಾಸ್ ದಾಸಕರಿಯಪ್ಪ, ಎಸ್. ಮಂಜಾನಾಯ್ಕ, ಜಿಲ್ಲಾ ವಕ್ತಾರ ಡಿ.ಎಸ್. ಶಿವಶಂಕರ್, ಮಾಧ್ಯಮ ಪ್ರಮುಖ ಎಚ್.ಪಿ. ವಿಶ್ವಾಸ್ ಸುದ್ದಿಗೋಷ್ಠಿಯಲ್ಲಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.