ಪೊಲೀಸರ ಕಾರ್ಯವೈಖರಿ ಬಗ್ಗೆ ರೇಣು ಅಸಮಾಧಾನ
ಅಪಘಾತ ಎಂದು ಬಿಂಬಿಸಲು ಯತ್ನ; ಶೀಘ್ರ ಸಿಎಂ, ಗೃಹ ಸಚಿವರ ಜತೆ ಚರ್ಚೆ
Team Udayavani, Nov 5, 2022, 8:04 PM IST
ಹೊನ್ನಾಳಿ: ಸಹೋದರ ಪುತ್ರನ ನಿಗೂಢ ಸಾವಿನ ತನಿಖೆ ನಡೆಸುತ್ತಿರುವ ಪೊಲೀಸರ ಕಾರ್ಯವೈಖರಿ ರೀತಿ ಬಗ್ಗೆ ಶಾಸಕ ರೇಣುಕಾಚಾರ್ಯ ಬೇಸರ ವ್ಯಕ್ತಪಡಿಸಿದ್ದಾರೆ.
ನನ್ನ ಪುತ್ರನ ಕೊಲೆ ಪೂರ್ವನಿಯೋಜಿತ ಎಂದು ನಾನು ಹೇಳಿದ್ದೇನೆ. ಮಾಧ್ಯಮಗಳು ಶಂಕೆ ವ್ಯಕ್ತಪಡಿಸಿವೆ. ಇಂತಹ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಇದನ್ನು ಅಪಘಾತ ಎಂದು ಬಿಂಬಿಸಲು ಹೊರಟಿರುವುದು ನಿಜಕ್ಕೂ ಬೇಸರ ತರಿಸಿದೆ. ನಾನು ಶೀಘ್ರ ಸಿಎಂ ಹಾಗೂ ಗೃಹ ಸಚಿವರಿಗೆ ಕರೆ ಮಾಡಿ ಮಾತನಾಡುತ್ತೇನೆ. ನಮಗೆ ನ್ಯಾಯ ಸಿಗಬೇಕು ಎಂದರು.
ಚಂದ್ರಶೇಖರ್ ಅಂತ್ಯಕ್ರಿಯೆ ನಡೆದ ನಂತರ ಶಾಸಕರ ಮನೆಯಲ್ಲಿ ನೀರವ ಮೌನ ಆವರಿಸಿದ್ದು, ರೇಣುಕಾಚಾರ್ಯ ಮನೆಯಲ್ಲೇ ಚಿಂತೆಗೆ ಜಾರಿದ್ದಾರೆ. ಅವಳಿ ತಾಲೂಕಿನಾದ್ಯಂತ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಶನಿವಾರವೂ ಬಂದು ಶಾಸಕರಿಗೆ ಸಮಾಧಾನ ಹೇಳುವ ಪ್ರಯತ್ನ ಮಾಡುತ್ತಿದ್ದರೂ ಶಾಸಕರು “ನನ್ನ ಮಗ ನನ್ನಿಂದ ಬಲಿಯಾಗಿಬಿಟ್ಟ’ ಎಂದು ರೋದಿಸುತ್ತಿದ್ದಾರೆ.
ತಾಲೂಕಿನ ಮಾದೇನಹಳ್ಳಿ ಗ್ರಾಮದ ಕೆಲ ಮಹಿಳೆಯರು ತಮ್ಮ ಮನೆಯಿಂದ ಊಟೋಪಹಾರ ತಂದು ಶಾಸಕರಿಗೆ ಹಾಗೂ ಕುಟುಂಬಸ್ಥರಿಗೆ ಸಮಾಧಾನ ಹೇಳಿ ಉಪಾಹಾರ ಬಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.