ವಂದೇ ಭಾರತ್ ಸೆಮಿ ಹೈಸ್ಪೀಡ್ ರೈಲಿಗೆ ದಾವಣಗೆರೆಯಲ್ಲಿ ಅದ್ಧೂರಿ ಸ್ವಾಗತ
Team Udayavani, Jun 27, 2023, 2:31 PM IST
ದಾವಣಗೆರೆ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿತ, ಮೇಕ್ ಇನ್ ಇಂಡಿಯಾ ನಿರ್ಮಿತ ವಂದೇ ಭಾರತ್ ಸೆಮಿ ಹೈ ಸ್ಪೀಡ್ ರೈಲಿಗೆ ದಾವಣಗೆರೆಯಲ್ಲಿ ಅದ್ಧೂರಿ ಮತ್ತು ಅಭೂತಪೂರ್ವ ಸ್ವಾಗತ ಕೋರಲಾಯಿತು.
ಧಾರವಾಡದಿಂದ ದಾವಣಗೆರೆ ರೈಲು ನಿಲ್ದಾಣಕ್ಕೆ ಆಗಮಿಸಿದಾಗ ಜನರು ಹರ್ಷೋದ್ಘಾರ ಮೊಳಗಿಸಿದರು. ಚಪ್ಪಾಳೆ ತಟ್ಟಿ ಸ್ವಾಗತಿಸಿದರು. ವಂದೇ ಮಾತರಂ, ಭಾರತ್ ಮಾತಾ ಕೀ ಜೈ ಘೋಷಣೆ ಮೊಳಗಿದವು. ರೈಲು ಒಳಗೆ ಹೋಗಿ ಬರಲು ಹತ್ತು ನಿಮಿಷದ ಕಾಲವಕಾಶ ನೀಡಲಾಗಿತ್ತು. ಜನರು ರೈಲು ಕೋಚ್, ಜಿಪಿಎಸ್ ಸೌಲಭ್ಯ ನೋಡಿ ಖುಷಿಪಟ್ಟರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಡಾ. ಜಿ.ಎಂ.ಸಿದ್ದೇಶ್ವರ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಏಕಕಾಲದಲ್ಲಿ ಐದು ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಎರಡು, ಗೋವಾ ಹಾಗೂ ಕರ್ನಾಟಕದಲ್ಲಿ ಒಂದು ವಂದೇ ಭಾರತ್ ರೈಲು ಸಂಚರಿಸುತ್ತಿವೆ. ವಂದೇ ಭಾರತ್ ನಲ್ಲಿ ವಿಶ್ವದರ್ಜೆಯ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಸೌಲಭ್ಯಗಳನ್ನು ಹೊಂದಿದೆ. ಪ್ರಯಾಣಿಕರು ಸೌಲಭ್ಯ ವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ:ಎಷ್ಟೇ ಕಷ್ಟವಾದರೂ ಐದು ಯೋಜನೆ ಜಾರಿ ಗ್ಯಾರಂಟಿ: ಸಿದ್ದರಾಮಯ್ಯ ಪುನರುಚ್ಛಾರ
ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ನಂತರ ರೈಲ್ವೆ ಇಲಾಖೆಯಲ್ಲಿ ಮಹತ್ವ ಮತ್ತು ಮಹತ್ತರ ಕ್ರಾಂತಿ ಆಗಿದೆ. 2014 ರಲ್ಲಿ 600 ಕಿಲೋಮೀಟರ್ ಜೋಡಿ ಮಾರ್ಗ ನಿರ್ಮಾಣ ಆಗುತ್ತಿತ್ತು. ಈಗ 1392 ಕಿಲೋಮೀಟರ್ ಆಗುತ್ತಿದೆ. 9 ವರ್ಷಗಳಲ್ಲಿ 37 ಸಾವಿರ ಕಿಲೋಮೀಟರ್ ವಿದ್ಯುದ್ದೀಕರಣ ಆಗುತ್ತದೆ ಎಂದು ಮಾಹಿತಿ ನೀಡಿದರು.
ಮೇಯರ್ ಬಿ.ಎಚ್. ವಿನಾಯಕ ಪೈಲ್ವಾನ್, ಉಪ ಮೇಯರ್ ಯಶೋಧ, ಡಿಜಿಎಂ ಶಿಲ್ಪಿ ಅಗರವಾಲ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.