ವಾಹನ ಬಳಕೆದಾರರು ಗಿಡ ಸಸಿ ಬೆಳೆಸಿ
Team Udayavani, Nov 10, 2017, 3:17 PM IST
ದಾವಣಗೆರೆ: ವಾಯು ಮಾಲಿನ್ಯ ನಿಯಂತ್ರಿಸುವ ಕಾರ್ಯಕ್ಕೆ ಎಲ್ಲರೂ ಕೈ ಜೋಡಿಸಬೇಕು. ಅದರಲ್ಲೂ ಮುಖ್ಯವಾಗಿ
ವಾಹನ ಬಳಸುವವರು ವಾಹನವೊಂದಕ್ಕೆ ಒಂದು ಗಿಡದಂತೆ ಬೆಳೆಸಬೇಕಿದೆ ಎಂದು ಜಿಲ್ಲಾ ಮಾಲಿನ್ಯ ನಿಯಂತ್ರಣ ಮಂಡಳಿ
ಸಹಾಯಕ ಪರಿಸರ ಅಧಿಕಾರಿ ಡಾ| ಗಣಪತಿ ಹೆಗಡೆ ತಿಳಿಸಿದ್ದಾರೆ.
ನಗರ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪ್ರಾದೇಶಿಕ ಸಾರಿಗೆ ಕಚೇರಿಯಿಂದ ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಭಾಗವಾಗಿ ಹೊಗೆರಹಿತ ವಾಹನ ನೆಮ್ಮದಿ ಜೀವನ ಎಂಬ ಧ್ಯೇಯ ವಾಕ್ಯದೊಂದಿಗೆ ಹಮ್ಮಿಕೊಂಡಿದ್ದ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದ ಅವರು, ಒಂದು ವಾಹನಕ್ಕೆ ಒಂದು ಗಿಡ ಬೆಳೆಸುವ ಮೂಲಕ ವಾಯು ಮಾಲಿನ್ಯ ನಿಯಂತ್ರಿಸಲು ಮುಂದಾಗಬೇಕಿದೆ ಎಂದರು. ದೇಶದ ರಾಜಧಾನಿ ದೆಹಲಿ ಇದೀಗ ವಾಯು ಮಾಲಿನ್ಯದಿಂದಾಗಿ ಜನಜೀವನ ಕಷ್ಟ ಎಂಬಂತಹ ಸ್ಥಿತಿಗೆ ಬಂದಿದೆ. ವಾಯು ಮಾಲಿನ್ಯದಿಂದಾಗುವ ದುಷ್ಪರಿಣಾಮದಿಂದಾಗಿ ಜನರು ಹೊರಗೆ ಬರುವುದಕ್ಕೆ ಆತಂಕ ಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೆಚ್ಚು ಗಿಡ, ಮರ ಬೆಳೆಸುವುದರಿಂದ ಇಂಗಾಲಾಮ್ಲ ಸೇರಿದಂತೆ ಎಲ್ಲಾ ರೀತಿಯ ಅಸಹನೀಯ ಅನಿಲಗಳನ್ನು ಮರ ಹಿರಿಕೊಂಡು ಪರಿಶುದ್ಧವಾದ ಆಮ್ಲಜನಕ ಹೊರಹಾಕುತ್ತದೆ. ಇದರಿಂದ ಉತ್ತಮ ಉಸಿರಾಟದೊಂದಿಗೆ ಆರೋಗ್ಯ ಪೂರ್ಣ ಜೀವನ ನಡೆಸಲು ಸಹಕಾರಿಯಾಗುತ್ತದೆ ಎಂದು ಅವರು ಹೇಳಿದರು.
ವಾಯು ಮಾಲಿನ್ಯ ಹೆಚ್ಚಾದಲ್ಲಿ ಆಮ್ಲ ಮಳೆ ಬರುವ ಸಂಭವ ಹೆಚ್ಚಾಗಿರುತ್ತದೆ. ಈ ಮಳೆ ಬಂದಲ್ಲಿ ಸಸ್ಯ ಸಂಕುಲವೇ ನಾಶವಾಗಲಿದೆ. ಇದಕ್ಕೆ ಯಾರು ಅವಕಾಶ ಮಾಡಿಕೊಡಬಾರದು. ಪ್ರತಿಯೊಬ್ಬರೂ ಗಿಡ ಬೆಳೆಸುವುದರಿಂದ ಇಂತಹ ಸಮಸ್ಯೆಗಳಿಂದ
ದೂರವಿರಬಹುದು ಎಂದು ಅವರು ತಿಳಿಸಿದರು.
ಮೋಟಾರು ವಾಹನಗಳ ನಿರೀಕ್ಷಕ ಅನಿಲ್ ಕುಮಾರ್ ಮಾತನಾಡಿ, ನಾವಿಂದು ಗಿಡ, ಮರಗಳ ಬೆಳೆಸುವ ಅನಿವಾರ್ಯತೆಯನ್ನು ಪ್ರತಿಯೊಬ್ಬರಲ್ಲೂ ಮೂಡಿಸಬೇಕಿದೆ. ಮನೆಯಲ್ಲಿ ನಡೆಯುವ ಯಾವುದೇ ಶುಭ ಸಮಾರಂದಲ್ಲಿ ಸಸಿಗಳ ವಿತರಣೆ ಮಾಡುವ ಮೂಲಕ ಪರಿಸರ ಜಾಗೃತಿ ಮೂಡಿಸಬೇಕು ಎಂದರು. ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ಕೊಟ್ರೇಶ್, ಪ್ರಾದೇಶಿಕ ಸಾರಿಗೆ ಅಧಿಕಾರಿ ವಿ.ಜಿ. ಶ್ರೀನಿವಾಸ್, ತಿಪ್ಪೇಸ್ವಾಮಿ, ಎಚ್.ಸಿ. ಹನುಮಂತಪ್ಪ, ಕೆ. ವಾಸುದೇವ್, ಎಂ. ಸುರೇಶ್ ವೇದಿಕೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.