ವಿವಿಧ ಬಾಬುಗಳ ಬಹಿರಂಗ ಹರಾಜು


Team Udayavani, Mar 5, 2017, 12:59 PM IST

dvg6.jpg

ಹೊನ್ನಾಳಿ: ಪಟ್ಟಣ ಪಂಚಾಯತ್‌ ವತಿಯಿಂದ ವಿವಿಧ ಬಾಬುಗಳ ಬಹಿರಂಗ ಹರಾಜು ಪ್ರಕ್ರಿಯೆ ಇಲ್ಲಿನ ಪಂಪ್‌ ಹೌಸ್‌ ಬಳಿ ನಡೆಯಿತು. ಸಭೆಯಲ್ಲಿ ಪಪಂ ಸದಸ್ಯ ಹೊಸಕೇರಿ ಸುರೇಶ್‌ ಮಾತನಾಡಿ, ರಾಜ್ಯದಲ್ಲಿ ಭೀಕರ ಬರದಿಂದ ಜನರು ತತ್ತರಿಸಿ ಹೋಗಿದ್ದಾರೆ. ಹೊನ್ನಾಳಿ ತಾಲೂಕು ಕೂಡ ಬರಪೀಡಿತ ಎಂದು ಘೋಷಿತವಾಗಿದೆ.

ಈ ಹಿನ್ನೆಲೆಯಲ್ಲಿ ಪಪಂ ವಿಧಿಸುವ ವಿವಿಧ ಶುಲ್ಕಗಳು ಜನರಿಗೆ ಹೊರೆಯಾಗುತ್ತವೆ. ಆದ್ದರಿಂದ, ಈ ವರ್ಷ ಬಹಿರಂಗ ಹರಾಜನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು. ಪಪಂ ಸದಸ್ಯ ಪ್ರಶಾಂತ್‌ ಮಾತನಾಡಿ, 500 ಮತ್ತು 1 ಸಾವಿರ ರೂ.ಗಳ ನೋಟ್‌ ರದ್ದುಪಡಿಸಿರುವುದರಿಂದ ಈ ಹಿಂದೆ ಹರಾಜು ಪಡೆದುಕೊಂಡಿರುವವರಿಗೆ ನಷ್ಟವಾಗಿದೆ.

ಆದ್ದರಿಂದ, ಈ ಹರಾಜು ಪ್ರಕ್ರಿಯೆಯನ್ನು ಮುಂದೂಡಬೇಕು. ಬರಗಾಲದ ಹಿನ್ನೆಲೆಯಲ್ಲಿ ಜನರು ಸಂಕಷ್ಟದಲ್ಲಿರುವ ಕಾರಣ ಈ ವರ್ಷ ಸುಂಕ ವಸೂಲಿ ಮಾಡದಿರುವ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪಪಂ ಸದಸ್ಯ ಎಚ್‌.ಬಿ. ಅಣ್ಣಪ್ಪ ಮಾತನಾಡಿ, ಹರಾಜು ಪ್ರಕ್ರಿಯೆ ಸ್ಥಗಿತಗೊಳಿಸಲು ಸಾಧ್ಯವಿಲ್ಲ.

ಪಪಂ ಆದಾಯ ಮೂಲ ಕಳೆದುಕೊಂಡರೆ ಅಭಿವೃದ್ಧಿ ಕಾರ್ಯಗಳಿಗೆ ತೊಂದರೆಯಾಗುತ್ತದೆ. ನಷ್ಟ ಅನುಭವಿಸಿರುವ ಹರಾಜುದಾರರಿಗೆ ಮುಂದಿನ ದಿನಗಳಲ್ಲಿ ಅನುಕೂಲ ಮಾಡಿಕೊಡಲಾಗುತ್ತದೆ. ಎಲ್ಲರೂ ಹರಾಜು ಪ್ರಕ್ರಿಯೆಗೆ ಸಹಕರಿಸಬೇಕು ಎಂದು ವಿನಂತಿಸಿದರು.

ಮುಖ್ಯಾಧಿಕಾರಿ ಎಸ್‌. ಆರ್‌. ವೀರಭದ್ರಯ್ಯ ಮಾತನಾಡಿ, ಸರಕಾರದ ನಿರ್ದೇಶನಗಳ ಪ್ರಕಾರ ನಾವು ನಡೆದುಕೊಳ್ಳಬೇಕಿದೆ. ಆದ್ದರಿಂದ, ಸುಂಕ ವಸೂಲಿ ಹರಾಜು ಪ್ರಕ್ರಿಯೆ ನಡೆಸುವುದು ಅನಿವಾರ್ಯವಾಗಿದೆ. ಸಾರ್ವಜನಿಕರು, ಪಪಂ ಸದಸ್ಯರು, ಬಿಡ್‌ದಾರರು ಸೇರಿದಂತೆ ಎಲ್ಲರೂ ತಮ್ಮೊಂದಿಗೆ ಸಹಕರಿಸಬೇಕು ಎಂದರು.

ಪಪಂ ಅಧಿಧಿಕಾರಿಗಳು ಹರಾಜು ಪ್ರಕ್ರಿಯೆ ಆರಂಭಿಸುತ್ತಿದ್ದಂತೆ ಪಪಂ ಸದಸ್ಯರಾದ ಹೊಸಕೇರಿ ಸುರೇಶ್‌ ಮತ್ತು ಪ್ರಶಾಂತ್‌ ಸಭೆಯಿಂದ ಹೊರನಡೆದರು. ಅವರು ತೆರಳಿದ ನಂತರ ಹರಾಜು ಪ್ರಕ್ರಿಯೆ ನಡೆಯಿತು. ಪಪಂ ಅಧ್ಯಕ್ಷೆ ಶ್ರೀದೇವಿ ಧರ್ಮಪ್ಪ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಎಚ್‌.ಡಿ. ವಿಜೇಂದ್ರಪ್ಪ, ಗಿರೀಶ್‌, ಮಲ್ಲೇಶ್‌, ಸುಶೀಲಮ್ಮ ದುರುಗಪ್ಪ, ಕರ ವಸೂಲಿಗಾರ ನಾಗೇಶ್‌ ಮತ್ತಿತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.