ರೈತರ ಸಾಲಮನ್ನಾ ಅರ್ಜಿಗಳ ಪರಿಶೀಲನೆ
Team Udayavani, Jan 12, 2019, 7:47 AM IST
ಹೊನ್ನಾಳಿ: ಕೃಷಿ ಪತ್ತಿನ ಸಹಕಾರ ಸಂಘದಲ್ಲಿರುವ ಸಾಲಮನ್ನಾ ದಾಖಲೆಗಳನ್ನು ತಾಲೂಕು ಮಟ್ಟದ ಕಮಿಟಿಯಲ್ಲಿ ಶುಕ್ರವಾರ ಪರಿಶೀಲಿಸಲಾಯಿತು. ತಾಲೂಕಿನ 32 ಸಹಕಾರಿ ಸಂಘದಲ್ಲಿರುವ 14,760 ರೈತರ ಸಾಲ ಮನ್ನಾ ಅರ್ಜಿಗಳನ್ನು ತಹಶೀಲ್ದಾರ್ ತುಷಾರ್ ಬಿ ಹೊಸೂರ ನೇತೃತ್ವದಲ್ಲಿ ಪರಿಶೀಲನೆ ಮಾಡಲಾಯಿತು. ಕ್ರಮಬದ್ಧವಾಗಿರದ ರೈತರ ದಾಖಲೆಗಳನ್ನು ಮತ್ತೆ ತರಿಸಿಕೊಂಡು ಅವುಗಳನ್ನು ಸಾಲಮನ್ನಾದ ತಂತ್ರಾಂಶದಲ್ಲಿ ಭರ್ತಿ ಮಾಡಿ ಅನುಮೋದಿಸಿ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ಅವರು ತಿಳಿಸಿದರು.
14,760 ರೈತರ ಸಾಲ ಮನ್ನಾದ ದಾಖಲೆಗಳಲ್ಲಿ ಸಮರ್ಪಕವಾಗಿರದ 2,300 ರೈತರ ದಾಖಲೆಗಳನ್ನು ಮತ್ತೆ ತರಿಸಿ ಸರ್ಕಾರಕ್ಕೆ ಕಳುಹಿಸಿಕೊಟ್ಟ ನಂತರ ರಾಷ್ಟ್ರೀಕೃತ ಬ್ಯಾಂಕಿನಲ್ಲಿರುವ ಸಾಲಮನ್ನಾದ ಅರ್ಜಿಗಳನ್ನು ಕೂಡ ಪರಿಶೀಲಿಸಿ ತಂತ್ರಾಂಶದಲ್ಲಿ ಭರ್ತಿ ಮಾಡಿ ಕಳುಹಿಸಲಾಗುವುದು ಎಂದು ವಿವರಿಸಿದರು. ರೈತರು ಅಧಿಕಾರಿಗಳು ಕೇಳುವ ದಾಖಲೆಗಳನ್ನು ಒದಗಿಸಿ ಸಹಕರಿಸಬೇಕು ಎಂದು ಅವರು ಕೋರಿದರು. ಉಪತಹಶೀಲ್ದಾರ್ ನಂದ್ಯಪ್ಪ, ಸಹಕಾರಿ ಅಭಿವೃದ್ಧಿ ಅಧಿಕಾರಿ ಎಚ್.ಎಸ್. ಸತೀಶ್, ನಿರೀಕ್ಷಕರಾದ ಮಂಜುನಾಥ್, ಮೇಲ್ವಿಚಾರಕರಾದ ಸುರೇಶ್, ವಿಜಯಕುಮಾರ್, ಲೋಕೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.