“ಹಳ್ಳಿ’ ಕ್ರೀಡಾಂಗಣ: ಸರಕಾರದ ಮಾರ್ಗಸೂಚಿ


Team Udayavani, May 30, 2022, 6:45 AM IST

“ಹಳ್ಳಿ’ ಕ್ರೀಡಾಂಗಣ: ಸರಕಾರದ ಮಾರ್ಗಸೂಚಿ

ದಾವಣಗೆರೆ: ಗ್ರಾಮೀಣ ಹಾಗೂ ದೇಸಿ ಕ್ರೀಡೆಗಳನ್ನು ಉತ್ತೇಜಿಸಲು 504 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಎಲ್ಲ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಕ್ರೀಡಾ ಅಂಕಣಗಳನ್ನು ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಯವ್ಯಯದಲ್ಲಿ ಮಾಡಿದ್ದ ಘೋಷಣೆ ಅನುಷ್ಠಾನಕ್ಕೆ ಮಾರ್ಗಸೂಚಿ ಸಿದ್ಧವಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಮಹಾತ್ಮ ಗಾಂಧಿ ನರೇಗಾ ಯೋಜನೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಸಹಯೋಗದೊಂದಿಗೆ ಗ್ರಾಮೀಣ ಪ್ರದೇಶ ದಲ್ಲಿ ಕ್ರೀಡಾ ಅಂಕಣ ನಿರ್ಮಾಣ ಮಾಡಲು ಹಾಗೂ ಕ್ರೀಡಾ ತರಬೇತಿ ನೀಡಲು ಉಭಯ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು ಜಂಟಿಯಾಗಿ ಮಾರ್ಗಸೂಚಿ ರೂಪಿಸಿ ಸುತ್ತೋಲೆ ಹೊರಡಿಸಿದ್ದಾರೆ.

ನರೇಗಾ ಯೋಜನೆಯಡಿ ವೆಚ್ಚ
ಗ್ರಾಮೀಣ ಕ್ರೀಡಾ ಅಂಕಣಗಳಲ್ಲಿ ನರೇಗಾ ಯೋಜನೆಯಡಿ ಸ್ಥಳೀಯ ಆವಶ್ಯಕತೆಗಳಿಗೆ ಅನುಗುಣವಾಗಿ ರನ್ನಿಂಗ್‌ ಟ್ರ್ಯಾಕ್ , ಕಬಡ್ಡಿ, ಖೋಖೋ, ವಾಲಿಬಾಲ್‌, ಬಾಸ್ಕೆಟ್‌ಬಾಲ್‌ ಇತ್ಯಾದಿ ಅಂಕಣಗಳನ್ನು ನಿರ್ಮಿಸಬೇಕು. ಇದರ ವೆಚ್ಚವನ್ನು ನರೇಗಾ ಯೋಜನೆಯಡಿ ಭರಿಸಬೇಕು. ಪ್ರತೀ ಪಂಚಾಯತ್‌ನಲ್ಲಿ ಒಂದರಂತೆ ಸರಕಾರಿ ಶಾಲೆ, ಕಾಲೇಜು, ವಸತಿ ನಿಲಯಗಳಲ್ಲಿ ಆದ್ಯತೆ ಮೇರೆಗೆ ಕ್ರೀಡಾ ಅಂಕಣಗಳನ್ನು ನಿರ್ಮಿಸಬೇಕು ಎಂದು ರಾಜ್ಯದ ಎಲ್ಲ ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಹೆಚ್ಚುವರಿ ಕ್ರಿಯಾಯೋಜನೆ-ಅವಕಾಶ
ಕ್ರೀಡಾ ಅಂಕಣ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಹೆಚ್ಚುವರಿ ಕ್ರಿಯಾಯೋಜನೆ ತಯಾರಿಸುವುದು ಆವಶ್ಯವಿದ್ದಲ್ಲಿ ಅಂತಹ ಕ್ರಿಯಾ ಯೋಜನೆಗಳಿಗೆ ಜಿಲ್ಲಾ ಪಂಚಾಯತ್‌ನಿಂದ ಅನುಮೋದನೆ ಪಡೆಯಬೇಕು. ಸುತ್ತೋಲೆಯಲ್ಲಿ ತಿಳಿಸಿರುವ ಕ್ರೀಡಾ ಅಂಕಣಗಳ ಜತೆಗೆ ಅಥವಾ ಬದಲಾಗಿ ಸ್ಥಳೀಯವಾಗಿ ಆವಶ್ಯವಿರುವ ಇತರ ಕ್ರೀಡಾ ಅಂಕಣಗಳ ಅಂದಾಜು ಪಟ್ಟಿ ತಯಾರಿಸಿಕೊಂಡು ಅನುಷ್ಠಾನಗೊಳಿಸಬಹುದು ಎಂದೂ ತಿಳಿಸಲಾಗಿದೆ.

ನಿರ್ಮಾಣಕ್ಕೆ ನಿಬಂಧನೆಗಳೇನು?
ಕ್ರೀಡಾ ಅಂಕಣಗಳನ್ನು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಬರುವ ಸರಕಾರಿ ನಿವೇಶನ ಅಥವಾ ಸರಕಾರಿ ಶಾಲೆ-ಕಾಲೇಜು ಆವರಣದಲ್ಲಿ ನಿರ್ಮಿಸಬೇಕು. ಕಾಮಗಾರಿಗಳನ್ನು ನರೇಗಾ ಯೋಜನೆಯಡಿ ನೋಂದಾಯಿತ ಕೂಲಿ ಕಾರ್ಮಿಕರಿಂದ ನಿರ್ವಹಿಸಬೇಕು ಮತ್ತು ಯೋಜನೆಯಡಿ ಅನುಮತಿಸಲ್ಪಟ್ಟ ಯಂತ್ರಗಳನ್ನು ಹೊರತುಪಡಿಸಿ ಇತರ ಯಾವುದೇ ಯಂತ್ರಗಳನ್ನು ಬಳಸಬಾರದು. ಕ್ರೀಡಾ ಅಂಕಣ ನಿರ್ಮಾಣ ಕಾಮಗಾರಿಯಲ್ಲಿ ನರೇಗಾ ಯೋಜನೆಯ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕ್ರೀಡಾ ಅಂಕಣ ಕಾಮಗಾರಿಗಳಲ್ಲಿ ಸಾಮಗ್ರಿ ವೆಚ್ಚ ಅಧಿಕ ಇರುವುದರಿಂದ ಜಿಲ್ಲೆಯ ಸಾಮಗ್ರಿ ವೆಚ್ಚದ ಅನುಪಾತ ಶೇ. 40ರಷ್ಟು ಮೀರದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಲಾಗಿದೆ.

ಅಂದಾಜು ಮೊತ್ತ ಎಷ್ಟು?
ಯಾವ ಕ್ರೀಡಾ ಅಂಕಣಕ್ಕೆ ಎಷ್ಟು ವೆಚ್ಚ ಮಾಡಬೇಕು ಎನ್ನುವುದರ ಬಗ್ಗೆಯೂ ನಿರ್ದೇಶನ ನೀಡಲಾಗಿದೆ. ಕಬಡ್ಡಿ ಅಂಕಣಕ್ಕೆ 2.60 ಲಕ್ಷ ರೂ., ಖೋಖೋ ಅಂಕಣಕ್ಕೆ 3.30 ಲಕ್ಷ ರೂ., ವಾಲಿಬಾಲ್‌ ಅಂಕಣಕ್ಕೆ 5.10 ಲಕ್ಷ ರೂ., ಬಾಸ್ಕೆಟ್‌ಬಾಲ್‌ ಅಂಕಣಕ್ಕೆ 5.20 ಲಕ್ಷ ರೂ., ರನ್ನಿಂಗ್‌ ಟ್ರಾÂಕ್‌ ಅಂಕಣಕ್ಕೆ 5 ಲಕ್ಷ ರೂ. ಸೇರಿ ಒಟ್ಟು 21.20 ಲಕ್ಷ ರೂ.ಗಳ ಅಂದಾಜು ಪಟ್ಟಿ ತಯಾರಿಸಿ ನಿರ್ದೇಶನ ನೀಡಲಾಗಿದೆ. ಕ್ರೀಡಾ ಅಂಕಣ ನಿರ್ಮಾಣದ ಬಳಿಕ ತಲಾ 25 ಸಾವಿರ ರೂ.ವರೆಗೆ ಕ್ರೀಡಾ ಸಾಮಗ್ರಿಗಳನ್ನು ಜಿಲ್ಲಾ ಪಂಚಾಯತ್‌ ವಲಯದ ಲೆಕ್ಕ ಶೀರ್ಷಿಕೆಯ ಕ್ರೀಡಾಕೂಟ ಮತ್ತು ರ್ಯಾಲಿ ಸಂಘಟನೆ ಹಾಗೂ ಯುವಜನ ಕ್ರೀಡಾ ಚಟುವಟಿಕೆ ಪ್ರೋತ್ಸಾಹದಡಿ ಒದಗಿಸಿರುವ ಅನುದಾನ ನೀಡಲು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಮಟ್ಟದ ಉಪ ಹಾಗೂ ಸಹಾಯಕ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.