ಗಾಳಿಪಟ ಸ್ಪರ್ಧೆ ಮೂಲಕ ಮತದಾನ ಜಾಗೃತಿ
Team Udayavani, May 7, 2018, 5:01 PM IST
ದಾವಣಗೆರೆ: ಮತದಾನ ಮಹತ್ವದ ಸಂದೇಶ ಸಾರುವ ಕರಪತ್ರ ವಿತರಣೆ, ಭಿತ್ತಿಪತ್ರ ಪ್ರದರ್ಶನ, ಚಿತ್ರಕಲೆ, ಗೀಗೀ
ಪದ ಗಾಯನ, ಕ್ಯಾಂಡೆಲ್ ಲೈಟ್ ಅಭಿಯಾನದ ನಂತರ ಭಾನುವಾರ ಗಾಳಿಪಟ ಹಾರಿಸುವ ಸ್ಪರ್ಧೆಯ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದಲ್ಲಿ ನೆರೆದಿದ್ದ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಸ್ವೀಪ್ ಸಮಿತಿ ಜಿಲ್ಲಾ ಅಧ್ಯಕ್ಷೆ ಎಸ್. ಅಶ್ವತಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಿ.ಎಸ್. ಷಡಕ್ಷರಪ್ಪ, ತಾಲೂಕು ಪಂಚಾಯತ್ ಮುಖ್ಯ ಕಾರ್ಯ ನಿರ್ವಹಕಾಧಿಕಾರಿ ಎಲ್.ಎಸ್.ಪ್ರಭುದೇವ್, ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಮತ್ತವರ ಕುಟುಂಬ ಸದಸ್ಯರು ಅಂತಾರಾಷ್ಟ್ರೀಯ ಖ್ಯಾತಿಯ ವಿ. ಕೃಷ್ಣಾಜಿರಾವ್ ಮತ್ತಿತರ ತಂಡದ ಸಿದ್ಧಪಡಿಸಿದ್ದ ಬಣ್ಣ ಬಣ್ಣದ, ವಿವಿಧ ಚಿತ್ತಾರ, ಶೈಲಿಯ ಗಾಳಿಪಟ ಹಾರಿಸುವ ಮೂಲಕ ಮತದಾನ ಜಾಗೃತಿ ಮೂಡಿಸಿದರು. ಎಲ್ಲೆಡೆ ರಾರಾಜಿಸಿದ ಐ ವೋಟ್… ಎಂಬ ಪದ. ತಪ್ಪದೇ ಮತದಾನ ಮಾಡುವ ಮತ್ತು ಮಾಡಬೇಕು ಎಂಬ ಸಂದೇಶ ಸಾರಿತು. ಸ್ವತಃ ಗಾಳಿಪಟ ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಮಾತನಾಡಿ, ಮತದಾನದ ಪ್ರಮಾಣ ಹೆಚ್ಚಿಸಬೇಕು ಎನ್ನುವ ಉದ್ದೇಶದಿಂದ ಗಾಳಿಪಟ ಹಾರಿಸುವ ಸ್ಪರ್ಧೆ ಆಯೋಜಿಸಲಾಗಿದೆ ಎಂದು
ಹೇಳಿದರು.
ಜಿಲ್ಲಾಡಳಿತ ಹಾಗೂ ಸ್ವೀಪ್ ಸಮಿತಿಯಿಂದ ಗ್ರಾಪಂ, ತಾಲೂಕು ಮಟ್ಟ, ಶಾಲೆ ಕಾಲೇಜು ಮುಂತಾದಡೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರಿಂದ, ಅದರಲ್ಲಿಯೂ ಯುವ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮತ್ತಷ್ಟು ಉತ್ತಮ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಮತ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.
ಸ್ವೀಪ್ ಸಮಿತಿ ಅಧ್ಯಕ್ಷೆ ಎಸ್. ಅಶ್ವತಿ ಮಾತನಾಡಿ, ಸ್ವೀಪ್ ಸಮಿತಿಯಿಂದ ನೂರಾರು ಕಾರ್ಯಕ್ರಮ ಮಾಡಲಾಗಿದೆ.
ಸಾರ್ವಜನಿಕರು, ಮಹಿಳೆಯರು, ಯುವ ಮತದಾರರು ಬಹಳ ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. ಹಿಂದಿನ ಬಾರಿಗಿಂತ ಮತಗಳ ಪ್ರಮಾಣ ಹೆಚ್ಚಳವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಪ್ರತಿಯೊಬ್ಬರು ನೆರೆಹೊರೆಯವರಿಗೆ ಮತದಾನದ ಮಹತ್ವ ಸಾರಿ ಹೇಳಿ ಮತದಾನ ಮಾಡಿಸಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.