ಭ್ರಷ್ಟರ ಆಯ್ಕೆಯಲ್ಲಿ ನಾವೂ ಭ್ರಷ್ಟರೇ
Team Udayavani, Aug 19, 2017, 2:22 PM IST
ದಾವಣಗೆರೆ: ಭ್ರಷ್ಟ ರಾಜಕಾರಣಿಗಳನ್ನು ಆಯ್ಕೆ ಮಾಡುವ ಜನರೂ ಭ್ರಷ್ಟರೇ ಎಂಬುದನ್ನು ನಾವು ಮನನ ಮಾಡಿಕೊಳ್ಳಬೇಕಿದೆ ಎಂದು ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಅರಳಿ ನಾಗರಾಜ್ ಅಭಿಪ್ರಾಯಪಟ್ಟಿದ್ದಾರೆ.
ರಾ.ಲ. ಕಾನೂನು ಕಾಲೇಜು ಗ್ರಂಥಾಲಯ ಸಭಾಂಗಣದಲ್ಲಿ ಶುಕ್ರವಾರ ರಾಷ್ಟ್ರ ನಿರ್ಮಾಣದಲ್ಲಿ ಕಾನೂನು ವಿದ್ಯಾರ್ಥಿಗಳ ಪಾತ್ರ ವಿಷಯ ಕುರಿತು ಉಪನ್ಯಾಸ ನೀಡಿದ ಅವರು, ನಾವು ಇಂದು ಭ್ರಷ್ಟ ರಾಜಕಾರಣಿಗಳನ್ನು ಬೆಂಬಲಿಸುತ್ತಿದ್ದೇವೆ. ಭ್ರಷ್ಟರನ್ನು ಆಯ್ಕೆ ಮಾಡುವ ನಾವೂ ಈ ಮೂಲಕ ಭ್ರಷ್ಟರಾಗುತ್ತಿದ್ದೇವೆ ಎಂದರು. ಭಾರತ ದೇಶದಲ್ಲಿ ಚುನಾವಣೆ ಸಂದರ್ಭದಲ್ಲಿ ಮತದಾರರು ಎಲ್ಲಾ ಅಭ್ಯರ್ಥಿಗಳಿಂದ ಹಣ ಪಡೆದು ಮತದಾನ ಮಾಡುತ್ತಾರೆ. ಇದರಿಂದ ಗೆದ್ದಂತಹ ಅಭ್ಯರ್ಥಿ ಸಮಾಜ ಸೇವೆ ಮಾಡದೆ ಖರ್ಚು ಮಾಡಿದ ಹಣವನ್ನು ಪಡೆದುಕೊಳ್ಳುವುದರ ಬಗ್ಗೆ ಚಿಂತನೆ ಮಾಡುತ್ತಾ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಳ್ಳುತ್ತಾನೆ. ಅಲ್ಲದೇ ಕೆಲವರು ಜಾತಿ ಆಧಾರದ ಮೇಲೆ ನಾಯಕನನ್ನು ಆಯ್ಕೆ ಮಾಡುತ್ತಾರೆ. ಆ ಮೂಲಕ ರಾಜಕೀಯ ಅಪಮೌಲ್ಯ ಮಾಡುತ್ತಾರೆ ಎಂದರು.
ದೇಶಕ್ಕೆ ಸ್ವತಂತ್ರ ಬಂದು 70 ವರ್ಷಗಳು ಕಳೆದಿವೆ. ಸತತ ಪರಿಶ್ರಮದಿಂದ ನಾವು ಕಟ್ಟುತ್ತಿರುವುದು ಭ್ರಷ್ಟ ದೇಶವನ್ನ. ಇದರ ಅರಿವು ಎಲ್ಲರಿಗೂ ಆಗಬೇಕಿದೆ. ಸ್ವತಂತ್ರ ಹೋರಾಟದಲ್ಲಿ ಭಾಗಿಯಾದವರ ಪೈಕಿ ವಕೀಲರೇ ಹೆಚ್ಚಿದ್ದರು. ಸ್ವತಂತ್ರ ಬಂದು 7 ದಶಕ ಕಳೆದರೂ ನಿರ್ಮಾಣದ ವಿಷಯದಲ್ಲಿ ಆಸಕ್ತಿ ತೋರುತ್ತಿಲ್ಲ ಎಂದು ಅವರು ಹೇಳಿದರು.
ಪ್ರತಿನಿತ್ಯವೂ ರೈತರು ಸಾಲಬಾಧೆ ಹಾಗೂ ಸ್ವಾಭಿಮಾನಕ್ಕೆ ಹೆದರುತ್ತಾರೆ. ಉನ್ನತ ಮಟ್ಟದ ಅಧಿಕಾರಿ ಪ್ರಾಮಾಣಿಕ ಸೇವೆ ಮಾಡಲಾಗದೆ ಹಾಗೂ ಒತ್ತಡದ ಸಂದರ್ಭ ನಿಭಾಯಿಸಲಾರದೇ ಆತ್ಮಹತ್ಯೆ ಕಡೆ ಮುಖ ಮಾಡಿದ್ದಾರೆ. ಆದರೆ ರಾಜಕೀಯ ನಾಯಕರು ಮಾತ್ರ ಇದುವರೆಗೂ ಎಲ್ಲಿಯೂ ಆತ್ಮಹತ್ಯೆ ಮಾಡಿಕೊಂಡಿಲ್ಲ. ಇದರ ಬಗ್ಗೆ ಚಿಂತನೆ ಮಾಡಬೇಕು ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ| ಬಿ.ಎಸ್. ರೆಡ್ಡಿ, ಉಪನ್ಯಾಸಕರಾದ ಬಸವನಗೌಡ, ಯತಿರಾಜು, ವಿ. ಸೋಮಶೇಖರ್ ಇತರರು ವೇದಿಕೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
America: ಎಚ್-1ಬಿ ವೀಸಾ ವ್ಯವಸ್ಥೆ ಸುಧಾರಣೆ ಬೇಕು: ಒಂದೇ ದಿನದಲ್ಲಿ ಮಸ್ಕ್ ಉಲ್ಟಾ!
Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿದ ಕೆಇಎ
ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್ ಫಿಲಿಯೋಜಾ ನಿಧನ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Mangaluru; ಪ್ರತ್ಯೇಕ ಚೆಕ್‌ಬೌನ್ಸ್ ಪ್ರಕರಣ: ಇಬ್ಬರು ಖುಲಾಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.