ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ: ಕಟೀಲ್ ವಿಶ್ವಾಸ
Team Udayavani, Sep 19, 2021, 5:09 PM IST
ದಾವಣಗೆರೆ: ಮುಂದಿನ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು.
ದಾವಣಗೆರೆಯ ತ್ರಿಶೂಲ್ ಕಲಾಭವನದಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್‍ಯಕಾರಣಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆ, ಕಾರ್‍ಯಕ್ರಮಗಳ ಬಗ್ಗೆ ಮನೆ ಮನೆಗೆ ತಲುಪಿಸುವ ಮೂಲಕ ಬಿಜೆಪಿಯ ಸಂಘಟನೆಯನ್ನೂ ಇನ್ನೂ ಹೆಚ್ಚು ವಿಸ್ತಾರಗೊಳಿಸಲಾಗುವುದು. ಮುಂದಿನ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ 150ಕ್ಕೂ ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಾಡು ಕಂಡ ಶ್ರೇಷ್ಠ ನಾಯಕ. ಇಡೀ ಜಗತ್ತು ಒಪ್ಪಿರುವಂತಹ ನಾಯಕ. ಗುಜರಾತ್ ಮುಖ್ಯಮಂತ್ರಿಯಾಗಿ ಹನ್ನೆರೆಡೂವರೆ ವರ್ಷ, ಪ್ರಧಾನಿಯಾಗಿ ಏಳೂವರೆ ವರ್ಷ ದೇಶದ ಅಭಿವೃದ್ಧಿಯ ಜೊತೆಗೆ ಜನರನ್ನ ಜೋಡಿಸುವ ಅದ್ಬುತ ಸಾಧನೆ ಮಾಡುತ್ತಿದ್ದಾರೆ. ಅಂತಹ ಶ್ರೇಷ್ಠ ನಾಯಕನ ಚಿಂತನೆ ಆಧಾರದ ಮೇಲೆ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾದ ಬಿಜೆಪಿಯನ್ನ ಇನ್ನಷ್ಟು ಸಂಘಟಿಸುವ, ಬಲಪಡಿಸುವ ಕಾರ್‍ಯ ಆಗಬೇಕು. ಕಾರ್‍ಯಕರ್ತರು ತಮ್ಮ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸಬೇಕು ಎಂದು ಕರೆ ನೀಡಿದರು.
ಇದನ್ನೂ ಓದಿ:ಕೋವಿಡ್ ಸಮಯದಲ್ಲಿ ಮನಮೋಹನ್ ಸಿಂಗ್ ಪಿಎಂ ಆಗಿದ್ದರೆ ಏನಾಗಿರುತ್ತಿತ್ತೋ: ಅರುಣ್ ಸಿಂಗ್ ಲೇವಡಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರಣದಿಂದಾಗಿ ಜಗತ್ತಿನಲ್ಲೇ ಅತಿ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಲಸಿಕೆ ನೀಡಿದ ಯಾವುದಾದರೂ ದೇಶ ಇದ್ದರೆ ಅದು ಭಾರತ. ಒಂದೇ ದಿನ 2 ಕೋಟಿಗೂ ಅಽಕ ಜನರಿಗೆ ಲಸಿಕೆ ನೀಡಿದ ದಾಖಲೆ ನಿರ್ಮಾಣವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ನಡೆದ ಜನಾಶೀರ್ವಾದ ಯಾತ್ರೆಗೆ ಸಾಕಷ್ಟು ಜನ ಬೆಂಬಲ ದೊರೆತಿದೆ. ಬಿಜೆಪಿಯ ಬೂತ್ ಮಟ್ಟದ ಅಧ್ಯಕ್ಷರ ಮನೆಯ ಮುಂದೆ ನಾಮಫಲಕ ಅಳವಡಿಸುವ ಕಾರ್‍ಯಕ್ರಮವನ್ನು ಅನೇಕ ಕಡೆ ಗ್ರಾಮೋತ್ಸವದ ಮಾದರಿಯಲ್ಲಿ ನಡೆಸಲಾಗಿದೆ ಎಂದು ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅನೇಕ ಸವಾಲು, ಸಮಸ್ಯೆಗಳ ನಡುವೆಯೂ ಉತ್ತಮವಾಗಿ ಸರ್ಕಾರ ನಡೆಸಿದವರು ಎಂದು ಪ್ರಶಂಸಿದ ಅವರು ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ನೂತನ ಸರ್ಕಾರ ಹೊಸ ಯೋಜನೆ, ಕಾರ್‍ಯಕ್ರಮ ಮುಂದುವರೆಸಿಕೊಂಡು ಹೋಗಲಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವಣಗೆರೆ ಭಾಗದ ಅತಿ ಪ್ರಮುಖ ಬೆಳೆ ಮೆಕ್ಕೆಜೋಳ ರಾಶಿ ಮಾಡುವ ಮೂಲಕ ರಾಜ್ಯ ಕಾರ್‍ಯಕಾರಿಣಿ ಉದ್ಘಾಟಿಸಿದರು.
ಬಿಜೆಪಿ ರಾಜ್ಯ ಉಸ್ತುವಾರಿ ಆರುಣ್‌ಸಿಂಗ್, ಸಹ ಉಸ್ತುವಾರಿ ಡಿ.ಕೆ. ಅರುಣ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಡಿ.ವಿ. ಸದಾನಂದಗೌಡ, ಕೇಂದ್ರ ಸಚಿವರಾದ ಭಗವಂತ್ ಖೂಬಾ, ಎ. ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ, ಪ್ರಹ್ಲಾದ್ ಜೋಶಿ, ರಾಜ್ಯ ಬಿಜೆಪಿ ಪ್ರಧಾನ ಕಾರ್‍ಯದರ್ಶಿ ಆರುಣ್‌ಕುಮಾರ್, ಸಂಸದ ಡಾ| ಜಿ.ಎಂ. ಸಿದ್ದೇಶ್ವರ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ
Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.