ರಾಜಕೀಯ ಹತ್ಯೆಗೆ ರಾಹುಲ್ ಉತ್ತರವೇನು?: ಜಾವಡೇಕರ್
Team Udayavani, Feb 11, 2018, 6:25 AM IST
ದಾವಣಗೆರೆ: ಕರ್ನಾಟಕದಲ್ಲಿ ರಾಜಕೀಯ ಉದ್ದೇಶದ ಹತ್ಯೆ ನಡೆಯುತ್ತಿರುವುದಕ್ಕೆ ಉತ್ತರ ಏನು ಎಂದು ಕೇಂದ್ರದ ಮಾನವ ಸಂಪನ್ಮೂಲ ಇಲಾಖೆ ಸಚಿವ, ರಾಜ್ಯ ಬಿಜೆಪಿ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಅಖೀಲ ಭಾರತ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಾತನಾಡಿದ ಅವರು, ರಾಜಕೀಯ ಪ್ರೇರಿತ ಹತ್ಯೆಗಳ ಬಗ್ಗೆ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಬಿಜೆಪಿ ಶಾಸಕ ಸಿ.ಟಿ. ರವಿ, ಮುಂದಿನ ಹತ್ಯೆ ಯಾರದ್ದು…? ಎಂಬುದಾಗಿ ಪ್ರಶ್ನಿಸಿದಾಗ ಕಾಂಗ್ರೆಸ್‌ನ ಸಚಿವರೊಬ್ಬರು ಸಿ.ಟಿ. ರವಿ ಅವರದ್ದೇ ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ರಾಜಕೀಯ ಉದ್ದೇಶದ ಹತ್ಯೆಗಳು ನಡೆಯುತ್ತಿವೆ ಎನ್ನುವುದಕ್ಕೆ ಇದು ಸ್ಪಷ್ಟ ಉದಾಹರಣೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ, ಧರ್ಮ ವಿಭಜಿಸುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ಸ್ಪಷ್ಟ ಉದಾಹರಣೆ ವೀರಶೈವ ಮತ್ತು ಲಿಂಗಾಯತ ಧರ್ಮದ ವಿಚಾರ. ಇವೆರಡು ಧರ್ಮ ಎಂದು ವಿಭಜಿಸುವ ವಿಚಾರದಲ್ಲಿ ಅವರು ವಿಫಲರಾಗಿದ್ದಾರೆ. ಸಿದ್ದರಾಮಯ್ಯ ಮಠ-ಮಂದಿರ- ದೇವಸ್ಥಾನಗಳ ಮೇಲೆ ನಿಯಂತ್ರಣಕ್ಕೆ ಮುಂದಾಗಿದ್ದರು. ಜನರ ವಿರೋಧದಿಂದ ಅದೂ ಕೈತಪ್ಪಿತು ಎಂದು ಹೇಳಿದರು.
ರಾಜೀವ್ ಹೇಳಿದ್ದು ಒಂದೇ ಸತ್ಯ…
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಒಮ್ಮೆ ದೆಹಲಿಯಿಂದ 100 ರೂ. ಕಳಿಸಿದರೆ ಬಡವರಿಗೆ 15 ರೂ. ಮಾತ್ರವೇ ತಲುಪುತ್ತದೆ ಎಂದು ಹೇಳಿದ್ದರು. ರಾಜೀವ್ ಗಾಂಧಿ ಹೇಳಿದ್ದು ಅದೊಂದೇ ಸತ್ಯ. ಆಗ ಅನೇಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು. ದೆಹಲಿಯಿಂದ ಬಿಡುಗಡೆಯಾಗುತ್ತಿದ್ದ 100 ರೂ. ಯಲ್ಲಿ 85 ರೂ. ಕಾಂಗ್ರೆಸ್ ಪಾಲಾಗುತ್ತಿತ್ತು. ಈಗ ಅಂತಹ ವಾತಾವರಣ ಇಲ್ಲ. ದೆಹಲಿಯಿಂದ ಬಿಡುಗಡೆಯಾಗುವ 100 ರೂ. ನೇರವಾಗಿಯೇ ಬಡವರಿಗೆ ತಲುಪುತ್ತಿದೆ ಎಂದು ಪ್ರಕಾಶ್ ಜಾವಡೇಕರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Out of Syllabus Review; ಪ್ರೇಮಿಗಳಿಗೆ ಹೊಸ ಸಿಲೆಬಸ್
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.