ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬ ಏಕೆ?
Team Udayavani, Jul 7, 2018, 2:44 PM IST
ದಾವಣಗೆರೆ: ಹಳೆಯ ಭಾಗದ ಚೌಕಿಪೇಟೆ, ಮಂಡಿಪೇಟೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ಶಾಸಕ ಡಾ| ಶಾಮನೂರು ಶಿವಶಂಕರಪ್ಪ ಸ್ಮಾರ್ಟ್‌ಸಿಟಿ ಯೋಜನೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಸ್ಮಾರ್ಟ್‌ಸಿಟಿ ಯೋಜನೆ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವ ಸಂಬಂಧ ಶಾಸಕರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ ತಾವಿದ್ದ ಸ್ಥಳದಲ್ಲೇ ದಿಢೀರ್ ಸಭೆ ನಡೆಸಿದ ಅವರು, ನಾಗರಿಕರ ಸಮ್ಮುಖದಲ್ಲೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಈಗಾಗಲೇ ಸ್ಮಾರ್ಟ್‌ಸಿಟಿ ಯೋಜನೆ ಅನುಷ್ಠಾನದಲ್ಲಿ ವಿಳಂಬವಾಗುತ್ತಿದೆ ಎಂಬುದಾಗಿ ನಾಗರೀಕರು ದೂರುತ್ತಿದ್ದಾರೆ. ಅನುಮೋದನೆ ದೊರೆಯುತ್ತಿರುವ ಕಾಮಗಾರಿಗಳ ಅನುಷ್ಠಾನಕ್ಕೆ ವಿಳಂಬ ಮಾಡುತ್ತಿರುವುದು ಏಕೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
ಕಳೆದ 4-5 ತಿಂಗಳ ಹಿಂದೆಯೇ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈಗಲೂ ಅರ್ಧದಷ್ಟು ಕಾಮಗಾರಿ ಸಹ
ಆಗಿಲ್ಲ. ಈ ರೀತಿಯಾದರೆ ಜನರು ಜನಪ್ರತಿನಿಧಿಗಳನ್ನು ದೂರುವುದಿಲ್ಲವೆ? ಅಧಿಕಾರಿಗಳು ಮಾಡಿದ ತಪ್ಪಿಗೆ ನಾವು ಉತ್ತರ ನೀಡಬೇಕಿದೆ ಎಂದು ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಹಳೆ ಭಾಗದ ಎಲ್ಲಾ ಕಾಮಗಾರಿಗಳನ್ನು ಆದಷ್ಟು ಶೀಘ್ರ ಮುಗಿಸಬೇಕು. ಜತೆಗೆ ಗುಣಮಟ್ಟ ಕಾಪಾಡಿಕೊಳ್ಳಬೇಕು. ಈ
ಭಾಗದಲ್ಲಿ ಕಾಮಗಾರಿಗಳ ವಿಳಂಬದಿಂದ ವ್ಯಾಪಾರ-ವಹಿವಾಟಿಗೆ ಸಾಕಷ್ಟು ತೊಂದರೆ ಆಗಿದೆ. ವರ್ತಕರು ಸಹ ತಾಳ್ಮೆಯಿಂದ ಇದ್ದಾರೆ. ಅವರ ತಾಳ್ಮೆ ಪರೀಕ್ಷಿಸದೆ ಕಾಮಗಾರಿ ಬೇಗ ಮುಗಿಸಿ, ಇಲ್ಲ ಅವರಿಗೆ ಆಗಿರುವ ನಷ್ಟ ತುಂಬಿಕೊಡಿ. ಈಗ ನಡೆಸುತ್ತಿರುವ ಕಾಮಗಾರಿಗಳೆಲ್ಲ ಮುಕ್ತಾಯ ಆದ ನಂತರವೇ ಮುಂದಿನ ಕಾಮಗಾರಿ ಆರಂಭಿಸಬೇಕು.
ಅಲ್ಲಿಯವರೆಗೂ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳಬೇಡಿ ಎಂದು ಸೂಚಿಸಿದರು. ಡೆಪ್ಯುಟಿ ಮೇಯರ್ ಕೆ. ಚಮನ್‌ಸಾಬ್, ಸದಸ್ಯರಾದ ದಿನೇಶ್ ಕೆ. ಶೆಟ್ಟಿ, ಮಂಜಮ್ಮ ಹನುಮಂತಪ್ಪ, ಎಸ್. ಬಸಪ್ಪ, ಉದ್ಯಮಿ ಅಥಣಿ ವೀರಣ್ಣ, ವರ್ತಕರಾದ ಮುರುಗನ್, ಎಂ.ಜಿ. ಬಸವರಾಜಪ್ಪ, ಬಸವರಾಜಯ್ಯ, ಎಂ.ಕೆ. ಬಕ್ಕಪ್ಪ, ಚೌಕಿಪೇಟೆ ಮತ್ತು ಸುತ್ತಮುತ್ತಲಿನ ವರ್ತಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.