ಹಣಕ್ಕಾಗಿ ಪತಿಯನ್ನೇ ಅಪಹರಿಸಿದ್ದ ಪತ್ನಿ!
Team Udayavani, Nov 30, 2019, 9:49 PM IST
ಸಾಂದರ್ಭಿಕ ಚಿತ್ರ.
ದಾವಣಗೆರೆ:ಆರು ಮಂದಿ ಯುವಕರ ಜತೆ ಸೇರಿ ಹಣಕ್ಕಾಗಿ ಗಂಡನನ್ನೇ ಅಪಹರಿಸಿದ್ದ ಪತ್ನಿ ಈಗ ಹದಡಿ ಪೊಲೀಸರ ಅತಿಥಿಯಾಗಿದ್ದಾಳೆ.
ಶ್ರೀನಿವಾಸ್ ಕಿಡ್ನಾಪ್ ಆಗಿದ್ದ ಪತಿ. ದಾವಣಗೆರೆ ತಾಲೂಕು ಲೋಕಿಕೆರೆ ಗ್ರಾಮದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಪತ್ನಿ ಸಂಗೀತ ಹಾಗೂ ಇಬ್ಬರು ಯುವಕರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಎರಡು ವರ್ಷಗಳಿಂದ ಪತಿಯಿಂದ ದೂರ ಇದ್ದ ಪತ್ನಿ ಸಂಗೀತಾ, ಹಣದ ಆಸೆಗೆ ಗಂಡನನ್ನು ಯುವಕರ ಜೊತೆ ಸೇರಿ ಕಿಡ್ನಾಪ್ ಮಾಡಿದ್ದಳು. ಸಂಗೀತಾಳ ನಡವಳಿಕೆ ಸರಿ ಇಲ್ಲ ಎಂಬ ಹಿನ್ನೆಲೆಯಲ್ಲಿ ಶ್ರೀನಿವಾಸ್ ಆಕೆಯಿಂದ ದೂರವಿದ್ದು, ಜಮೀನು ಹಾಗೂ ಪೆಟ್ರೋಲ್ ಬಂಕ್ ನೋಡಿಕೊಂಡಿದ್ದ. ಈಗ ಹಣದ ಅವಶ್ಯಕತೆ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಸಂಗೀತಾ ಹಾಗೂ 6 ಜನ ಸೇರಿ ಶ್ರೀನಿವಾಸ ಅವರನ್ನು ಕಿಡ್ನಾಪ್ ಮಾಡಿದ್ದರು.
ಪ್ರತಿನಿತ್ಯದಂತೆ ಶ್ರೀನಿವಾಸ್ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ ತೆರಳುವಾಗ ಆತನನ್ನು ಕಿಡ್ನಾಪ್ ಮಾಡಿದ್ದರು. ಈ ಸಂಬಂಧ ದೂರು ದಾಖಲಿಸಿಕೊಂಡಿದ್ದ ಹದಡಿ ಪೊಲೀಸರು, ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂಗೀತ ಹಾಗೂ ಇಬ್ಬರನ್ನು ಬಂಧಿ ಸಿದ್ದು, ಉಳಿದ ನಾಲ್ವರು ಪರಾರಿಯಾಗಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.