ಮಹಾತ್ಮರ ಜಯಂತಿ ಆಚರಣೆ ಜತೆಗೆ ತತ್ವಾದರ್ಶ ಪಾಲಿಸಿ
Team Udayavani, Feb 2, 2019, 5:13 AM IST
ಹೊನ್ನಾಳಿ: ಮಡಿವಾಳ ಮಾಚಿದೇವ ಬಟ್ಟೆಗಳ ಜತೆಗೆ ಸಮಾಜದ ಕೊಳೆಯನ್ನು ತೊಳೆದ ಮಹಾನ್ ದಾರ್ಶನಿಕ ಎಂದು ಜಿ.ಪಂ ಸದಸ್ಯೆ ಉಮಾ ರಮೇಶ್ ಹೇಳಿದರು.
ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಕನಕ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಮಡಿವಾಳ ಮಾಚಿದೇವ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. 12ನೇ ಶತಮಾನದಲ್ಲಿ ಶರಣರು ನುಡಿದಂತೆ ನಡೆದು ತೋರಿಸಿದರು. ಮಹಾತ್ಮರ ಜಯಂತಿ ಆಚರಣೆಯೊಂದಿಗೆ ಅವರ ತತ್ವಾದರ್ಶಗಳನ್ನು ಪಾಲಿಸಬೇಕು ಎಂದು ನುಡಿದರು. ಶಾಸಕ ಎಂ.ಪಿ.ರೇಣುಕಾಚಾರ್ಯ ಸಂದೇಶವನ್ನು ಉಮಾ ರಮೇಶ್ ವಾಚಿಸಿದರು.
ಜಿ.ಪಂ ಸದಸ್ಯ ಎಂ.ಆರ್. ಮಹೇಶ್ ಮಾತನಾಡಿ, ನಮ್ಮ ದೇಶದಲ್ಲಿ ಶರಣರು, ದಾರ್ಶನಿಕರು, ಸಂತರು ಹಾಗೂ ಸ್ವಾಮಿಗಳು ಧರ್ಮದ ದಾರಿಯ ಅಡಿಪಾಯ ಹಾಕಿ ಕೊಟ್ಟಿದ್ದಾರೆ. ನಮ್ಮಲ್ಲಿರುವ ಧಾರ್ಮಿಕತೆ, ಸಂಸ್ಕೃತಿ, ಆಚರಣೆಗಳು ವಿಶ್ವದ ಬೇರೆ ಯಾವುದೇ ದೇಶದಲ್ಲಿ ಸಿಗುವುದಿಲ್ಲ ಎಂದು ಹೇಳಿದರು.
ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸುವ ಕೆಲಸವಾಗಬೇಕಿದೆ ಎಂದು ಹೇಳಿದರು.
ಮಡಿವಾಳ ಮಾಚಿದೇವ ಜನಾಂಗದ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷ ಕೆ.ಎಂ. ನಾಗರಾಜಪ್ಪ ಮಾತನಾಡಿ, ಮನುಕುಲದ ಒಳಿತಿಗಾಗಿ ಶರಣರು ತಮ್ಮ ಬದುಕನ್ನೇ ಸವೆಸಿದ್ದಾರೆ. ತಮ್ಮ ಎಲ್ಲಾ ಕೆಲಸ ಕಾರ್ಯಗಳನ್ನು ಬದಿಗಿಟ್ಟು ಅಂತಹ ಮಹಾನ್ ವ್ಯಕ್ತಿಗಳ ಜಯಂತಿ ಕಾರ್ಯಕ್ರಮಕ್ಕೆ ಬಂದು ಶರಣರಿಗೆ ಗೌರವ ಕೊಡಬೇಕು ಎಂದು ಹೇಳಿದರು.
ಗೊಲ್ಲರಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಎಂ.ಎಚ್. ಕೋಟೆಪ್ಪ ಮಡಿವಾಳ ಮಾಚಿದೇವ ಕುರಿತು ಮಾತನಾಡಿದರು.
ತಾ.ಪಂ ಅಧ್ಯಕ್ಷೆ ಚಂದ್ರಮ್ಮ ಹಾಲೇಶಪ್ಪ, ಪ.ಪಂ ಸದಸ್ಯ ಬಾವಿಮನೆ ರಾಜಪ್ಪ, ತಹಶೀಲ್ದಾರ್ ತುಷಾರ ಬಿ.ಹೊಸೂರು, ತಾ.ಪಂ ಇಒ ಕೆ.ಸಿ. ಮಲ್ಲಿಕಾರ್ಜುನ, ಬಿಇಒ ಜಿ.ಇ. ರಾಜೀವ್, ಪ.ಪಂ ಮುಖ್ಯಾಧಿಕಾರಿ ಎಸ್.ಆರ್.ವೀರಭದ್ರಯ್ಯ ಉಪಸ್ಥಿತರಿದ್ದರು. ಕಂದಾಯ ನಿರೀಕ್ಷಕ ಜಯರಾಮ್ ಸ್ವಾಗತಿಸಿದರು. ಮುಖ್ಯೋಪಾಧ್ಯಾಯ ಷಣ್ಮುಖಪ್ಪ ನೀರೂಪಿಸಿದರು. ಇದಕ್ಕು ಮುನ್ನ ಮಡಿವಾಳ ಮಾಚಿದೇವ ಭಾವಚಿತ್ರದ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.