ಹಕ್ಕು ಪ್ರತಿಪಾದನೆಯೊಂದಿಗೆ ಕರ್ತವ್ಯ ಪಾಲಿಸಿ
Team Udayavani, Apr 5, 2017, 1:13 PM IST
ದಾವಣಗೆರೆ: ಪ್ರತಿಯೊಬ್ಬರೂ ಮಾನವ ಹಕ್ಕುಗಳು ಮತ್ತು ಕರ್ತವ್ಯವನ್ನು ಸಮರ್ಪಕವಾಗಿ ಪಾಲಿಸುವ ಮೂಲಕ ನೆಮ್ಮದಿ ಜೀವನ ರೂಪಿಸಿಕೊಳ್ಳಬೇಕು ಎಂದು ಆರ್.ಎಲ್. ಕಾನೂನು ಕಾಲೇಜು ಪ್ರಾಚಾರ್ಯ ಪ್ರೊ| ಬಿ.ಎಸ್. ರೆಡ್ಡಿ ಸಲಹೆ ನೀಡಿದ್ದಾರೆ.
ಧರಾಮ ವಿಜ್ಞಾನ ಕಾಲೇಜಿನಲ್ಲಿ ಮಂಗಳವಾರ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳು ಮತ್ತು ಮಹಿಳೆಯರು… ವಿಷಯ ಕುರಿತು ಉಪನ್ಯಾಸ ನೀಡಿದ ಅವರು, ಅರಿವಿನ ಕೊರತೆಯಿಂದ ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಾಗಿ ಕಂಡು ಬರುತ್ತಿದೆ.
ಹಕ್ಕುಗಳನ್ನು ಪ್ರತಿಪಾದಿಸುವಂತೆ ನಮ್ಮ ಕರ್ತವ್ಯಗಳನ್ನು ಸಹ ಅಚ್ಚುಕಟ್ಟು, ಜವಾಬ್ದಾರಿಯುತವಾಗಿ ಪಾಲಿಸಬೇಕು ಎಂದು ತಿಳಿಸಿದರು. ಮಾನವ ಹಕ್ಕು ಮತ್ತು ಕರ್ತವ್ಯ ಒಂದೇ ನಾಣ್ಯದ ಎರಡು ಮುಖ. ಅವುಗಳನ್ನು ಅರಿತು ಸರಿಯಾಗಿ ನಡೆದರೆ ಉತ್ತಮ ಆಡಳಿತ ನಡೆಸುವ ಮೂಲಕ ಸಮೃದ್ಧ ಜೀವನ ಸಾಗಿಸಬೇಕು.
ಅಜ್ಞಾನ, ಅನಕ್ಷರತೆ, ಮೌಡ್ಯದಿಂದ ಹೊರ ಬಂದು ವೈಚಾರಿಕ ಪ್ರಜ್ಞೆ ಬೆಳೆಸಿಕೊಂಡು ಮಾನವ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಸರಿಯಾಗಿ ನಿಭಾಯಿಸಬೇಕು ಎಂದು ತಿಳಿಸಿದರು. ಮಾನವ ಹಕ್ಕುಗಳು ಪ್ರತಿಯೊಬ್ಬರಿಗೆ ಸಹಜವಾಗಿ, ನಿಸರ್ಗದತ್ತವಾಗಿ ಬಂದಿವೆ. ಗರ್ಭಾವಸ್ಥೆಯಿಂದಲೇ ಹಕ್ಕುಗಳು ಇರುತ್ತವೆ.
ಸಂವಿಧಾನಾತ್ಮಕವಾಗಿ ಕಾನೂನಿನ ಚೌಕಟ್ಟಿನಡಿ ವ್ಯವಸ್ಥಿತ ರೂಪ ಪಡೆದುಕೊಂಡಿವೆ. ಬದುಕಿದ್ದಾಗ ಮಾತ್ರವಲ್ಲ ಸತ್ತ ನಂತರವೂ ಇರುವಂತಹ ಮಾನವ ಹಕ್ಕುಗಳು ವಿಶಾಲ ವ್ಯಾಪ್ತಿ ಹೊಂದಿವೆ ಎಂದು ತಿಳಿಸಿದರು. ಅಸಂಘಟಿತ ವಲಯಗಳಲ್ಲಿ ಶೇ. 90 ರಷ್ಟು ಅಭಿವೃದ್ಧಿ ಕಾಣಲು ಮಹಿಳೆಯರ ಶ್ರಮವೇ ಮುಖ್ಯ ಕಾರಣ.
ಅದೇ ಮಹಿಳೆಯರು ಬಡತನ, ಅಲಕ್ಷತನ, ಅನಕ್ಷರತೆ, ಅರಿವಿನ ಕೊರತೆಯ ಮೂಲ ಕಾರಣದಿಂದ ತಮ್ಮ ಹಕ್ಕು ಪಡೆದುಕೊಳ್ಳಲು ಸಾಕಷ್ಟು ಕಷ್ಟ ಪಡಬೇಕಾದಂತ ದುಸ್ಥಿತಿ ನಿರ್ಮಾಣವಾಗಿದೆ. ಮಹಿಳೆಯರು ಸುಶಿಕ್ಷಿತರಾಗುವ ಮೂಲಕ ಹಕ್ಕುಗಳ ಪಡೆದುಕೊಂಡು ಉತ್ತಮ ಜೀವನ ನಡೆಸುವಂತಾಗಬೇಕು ಎಂದರು.
ಕಾಲೇಜು ಪ್ರಾಚಾರ್ಯ ಡಾ|ಜೆ.ಬಿ. ರಾಜು ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಮಾನವ ಹಕ್ಕುಗಳ ಸಂಘದ ಸಂಚಾಲಕಿ ಡಾ|ಆರ್. ವನಜಾ ಇತರರು ಇದ್ದರು. ಪೂಜಾ ಪ್ರಾರ್ಥಿಸಿದರು. ಉಪನ್ಯಾಸಕರಾದ ಕೊಟ್ರೇಶ್ ನಿರೂಪಿಸಿದರು. ಮಂಗಳಗೌರಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.