ಆಸ್ಪತ್ರೆಯಲ್ಲಿ ಮಹಿಳೆ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ
Team Udayavani, Feb 4, 2020, 3:04 PM IST
ಮುಗಿಲು ಮುಟ್ಟಿದ ಆಕ್ರಂದನ
ದಾವಣಗೆರೆ: ಇಲ್ಲಿನ ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೋರ್ವರು ಸಾವನ್ನಪ್ಪಿದ್ದು, ಆಕೆಯ ಸಾವಿಗೆ ಆಸ್ಪತ್ರೆ ವೈದ್ಯ ನಿರ್ಲಕ್ಯವೇ ಕಾರಣ ಎಂದು ಆರೋಪಿಸಲಾಗಿದೆ.
ಚಿತ್ರದುರ್ಗ ತಾಲೂಕಿನ ಕವಾಡಿಗರಟ್ಟಿ ಗ್ರಾಮದ ಸಂತೋಷ್ ಎಂಬವರ ಪತ್ನಿ 23 ವರ್ಷದ ಭವಾನಿ ಸಾವನ್ನಪ್ಪಿದ ಮಹಿಳೆ. ಕಳೆದ ಎರಡು ದಿನಗಳ ಹಿಂದೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭವಾನಿಯವರು ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಅವರು ಸಾವನ್ನಪ್ಪಿದ್ದಾರೆ.
ವೆಂಟಿಲೇಟರ್ ಇಲ್ಲದ ಕಾರಣ ಭವಾನಿ ಸಾವನ್ನಪ್ಪಿದ್ಧಾರೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ಆರೋಪಿಸಿದ್ದು, ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಕರುನಾಡ ಸೇನೆ ಸೇರಿದಂತೆ ವಿವಿಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದೆ. ಆಸ್ಪತ್ರೆಯ ಮುಖ್ಯಸ್ಥರ ಜೊತೆ ಸಂಬಂಧಿಕರ ಮಾತಿನ ಚಕಮಕಿಯೂ ನಡೆದಿದೆ.
ಈ ಬಗ್ಗೆ ಸ್ಪಷ್ಟನೆ ನೀಡಿದ ಜಿಲ್ಲಾಸ್ಪತ್ರೆ ಅಧೀಕ್ಷಕ ನಾಗರಾಜ್, ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸಮಸ್ಯೆ ಇದೆ. ಆದರೆ ಮಹಿಳೆಯನ್ನು ಚೆನ್ನಾಗಿಯೇ ನೋಡಿಕೊಂಡಿದ್ದೇವೆ ಎಂದರು. ವೈದ್ಯರು, ಸಿಬ್ಬಂದಿ ಕರೆಯಿಸಿ ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.