ಪುರಸಭೆ ಗದ್ದುಗೆಗೆ ಮಹಿಳೆಯರ ಪೈಪೋಟಿ

ಮಲೇಬೆನ್ನೂರು ಪುರಸಭೆಯಲ್ಲಿ ಮತ್ತೆ ಬಿಜೆಪಿ-ಜೆಡಿಎಸ್‌ ಮೈತ್ರಿ?

Team Udayavani, Oct 12, 2020, 5:50 PM IST

dg-tdy-2

ಮಲೇಬೆನ್ನೂರು: ಹರಿಹರ ತಾಲೂಕಿನಲ್ಲಿ ಮೇಲ್ದರ್ಜೆಗೇರಿದ ಪ್ರಥಮ ಪುರಸಭೆಯಾಗಿರುವ ಮಲೇಬೆನ್ನೂರು ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ರಾಜ್ಯ ಸರ್ಕಾರ ಮೀಸಲಾತಿ ನಿಗದಿಪಡಿಸಿ ಆದೇಶ ಹೊರಡಿಸಿದೆ. ಹಾಗಾಗಿ ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಕಸರತ್ತು ಆರಂಭಗೊಂಡಿದೆ.

ಪುರಸಭೆ ಒಟ್ಟು 23 ಸದಸ್ಯ ಬಲ ಹೊಂದಿದ್ದು, ಕಾಂಗ್ರೆಸ್‌ ಪಕ್ಷದಿಂದ 8 ಸದಸ್ಯರಿದ್ದಾರೆ. ಅವರಲ್ಲಿ 3 ಜನ ಪುರುಷ ಹಾಗೂ 5 ಜನ ಮಹಿಳಾ ಸದಸ್ಯರಿದ್ದಾರೆ. ಬಿಜೆಪಿಯಿಂದ 7 ಸದಸ್ಯರಿದ್ದು ಅವರಲ್ಲಿ 4 ಜನ ಪುರುಷ ಹಾಗೂ 3 ಮಹಿಳಾ ಸದಸ್ಯರಿದ್ದಾರೆ. ಜೆಡಿಎಸ್‌ನಿಂದ 5 ಸದಸ್ಯರಿದ್ದು,2 ಜನ ಪುರುಷ ಹಾಗೂ 3 ಜನ ಮಹಿಳಾ ಸದಸ್ಯರಿದ್ದಾರೆ. 3 ಜನ ಪಕ್ಷೇತರ ಸದಸ್ಯರಿದ್ದುಅವರಲ್ಲಿ 2 ಪುರುಷ ಹಾಗೂ 1 ಮಹಿಳಾ ಸದಸ್ಯರಿದ್ದಾರೆ.

ಬಹುಮತಕ್ಕೆ 12 ಸದಸ್ಯರ ಬೆಂಬಲದ ಅಗತ್ಯವಿದ್ದು, ಯಾವುದೇ ಪಕ್ಷ ಬಹುಮತ ಹೊಂದಿಲ್ಲ. ಹಿಂದಿನ ಎರಡೂವರೆ ವರ್ಷ ಜೆಡಿಸ್‌ ಎಸ್‌ನ ಅಂಜಿನಮ್ಮ ವಿಜಯಕುಮಾರ್‌ ಅಧ್ಯಕ್ಷರಾಗಿ ಹಾಗೂ ಬಿಜೆಪಿಯ ಬಿ.ಎನ್‌. ಚನ್ನಪ್ಪಸ್ವಾಮಿ ಉಪಾಧ್ಯಕ್ಷರಾಗಿ ಅಧಿಕಾರ ನಡೆಸಿದ್ದರು. ರಾಜ್ಯಸರ್ಕಾರ ಈ ಹಿಂದೆ ಅಧ್ಯಕ್ಷ ಸ್ಥಾನಕ್ಕೆ ಬಿಸಿಎಂ”ಎ’ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಎಸ್‌ಸಿ ಮಹಿಳೆಗೆ ಮೀಸಲಾತಿ ನಿಗದಿಪಡಿಸಿ ಆದೇಶ ಹೊರಡಿಸಿತ್ತು. ಆದರೆ ಈಗ ನಿಗದಿಪಡಿಸಿರುವ ಹೊಸ ಮೀಸಲಾತಿ ಪ್ರಕಾರ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಎಸ್‌ಸಿ ಮಹಿಳೆಗೆ ನಿಗದಿಪಡಿಸಲಾಗಿದೆ. ಎರಡು ವರ್ಷಗಳಿಂದ ಅ ಧಿಕಾರವಿಲ್ಲದೆ ಕೇವಲ ಪುರಸಭೆಗೆ ಬಂದು ಹೋಗುತ್ತಿದ್ದ ಎಲ್ಲಾ 12 ಸದಸ್ಯೆಯರು ಅಧ್ಯಕ್ಷ ಸ್ಥಾನಕ್ಕೆ ಲಾಬಿ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರಥಮ ಪುರಸಭೆ ನಡೆದ ದಿನಾಂಕದ ಆಧಾರದ ಪ್ರಕಾರ ಈಗಿನ ಸದಸ್ಯರ ಅವ ಧಿ ಇನ್ನು ಕೇವಲ 7 ರಿಂದ 8 ತಿಂಗಳು ಮಾತ್ರ ಇದೆ. ಈ ಕಡಿಮೆ ಅವಧಿಗೆ ಅಧಿಕಾರ ಪಡೆಯಲು ಯಾರೂ ಅಷ್ಟೊಂದು ಉತ್ಸಾಹತೋರುತ್ತಿಲ್ಲ. ಜೆಡಿಎಸ್‌ಮತ್ತು ಬಿಜೆಪಿ ಪಕ್ಷಗಳು ಹಿಂದಿನ ಒಡಂಬಡಿಕೆಯಂತೆ ನಡೆದುಕೊಂಡರೆಬಿಜೆಪಿಗೆ ಅಧ್ಯಕ್ಷ ಸ್ಥಾನ ಮತ್ತು ಜೆಡಿಎಸ್‌ ಉಪಾಧ್ಯಕ್ಷ ಸ್ಥಾನವನ್ನು ಪಡೆಯುವ ಸಾಧ್ಯತೆ ಇದೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆಯ ಬಗ್ಗೆಯೂ ಚರ್ಚೆನಡೆಯುತ್ತಿದೆ. ಆದರೆ ಆಯಾ ಪಕ್ಷಗಳ ವರಿಷ್ಠರನಿರ್ಧಾರದ ಮೇಲೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಿರ್ಧಾರವಾಗಲಿದೆ.

ಟಾಪ್ ನ್ಯೂಸ್

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.