“ಮಹಿಳಾ ಕಾಂಗ್ರೆಸ್ ನಡಿಗೆ ಅನ್ನ ದಾತರ ಬಳಿಗೆ’ ಕಾರ್ಯಕ್ರಮ
Team Udayavani, Dec 27, 2020, 5:35 PM IST
ದಾವಣಗೆರೆ: ರೈತ ಕಾಯ್ದೆ ತಿದ್ದುಪಡಿ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ” ಮಹಿಳಾ ಕಾಂಗ್ರೆಸ್ ನಡಿಗೆ ಅನ್ನದಾತರ ಬಳಿಗೆ’ ಕಾರ್ಯಕ್ರಮ ತಾಲೂಕಿನ ಆವರಗೆರೆಯ ರೈತರ ಜಮೀನಿನಲ್ಲಿ ನಡೆಯಿತು.
ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಮತ್ತು ಎಪಿಎಂಸಿ ಕಾಯ್ದೆಗಳುರೈತ ಸಮೂಹವನ್ನು ಮೋಸಗೊಳಿಸುವ ಕಾರ್ಯಕ್ರಮಗಳಾಗಿವೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸುಷ್ಮಾಪಾಟೀಲ್, ಶುಭಮಂಗಳ, ರಾಜೇಶ್ವರಿ, ಕವಿತಾ, ಕಾವೇರಿ, ಗೀತಾ ಚಂದ್ರಶೇಖರ್, ಉಮಾ, ರಕ್ಷಣಾ, ಜಯಶ್ರೀ, ಸಂಗಮ, ರಾಧಾಬಾಯಿ, ಗೀತಾ, ಲಕ್ಷ್ಮೀಬಾಯಿ,ಮಂಗಳಮ್ಮ, ಜಯಲಕ್ಷ್ಮೀ, ಕಲಾವತಿ, ಮುಖಂಡರುಗಳಾದ ಹಾಲವರ್ತಿರಾಜಣ್ಣ, ಎಂ.ಡಿ. ಹನುಮಂತಪ್ಪ, ಅಣ್ಣೇಶ್ ನಾಯ್ಕ ಮತ್ತಿತರರು ಇದ್ದರು.
ಕಾಂಗ್ರೆಸ್‌ನಿಂದ ಬೈಕ್ ರ್ಯಾಲಿ- ಸಮರ್ಪಣಾ ಸಮಾವೇಶ ನಾಳೆ :
ದಾವಣಗೆರೆ: ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಡಿ. 28 ರಂದು 135ನೇ ಕಾಂಗ್ರೆಸ್ ಸಂಸ್ಥಾಪನಾ ವರ್ಷಾಚರಣೆ ಪ್ರಯುಕ್ತ ಬೈಕ್ ರ್ಯಾಲಿ, ಸಮರ್ಪಣಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ದಾವಣಗೆರೆ ನಗರದ ಮಹಾನಗರಪಾಲಿಕೆಯ ಆವರಣದಲ್ಲಿರುವ ಮಹಾತ್ಮಗಾಂಧಿ ಮತ್ತು ಹುತಾತ್ಮ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪನವರ ನೇತೃತ್ವದಲ್ಲಿ ಬೈಕ್ ರ್ಯಾಲಿಗೆ ಚಾಲನೆ ನೀಡಲಾಗುವುದು. ರ್ಯಾಲಿ ಮಹಾನಗರ ಪಾಲಿಕೆ ಆವರಣದಿಂದ ಹೊರಟು ಹಳೇ ಪಿ.ಬಿ. ರಸ್ತೆ, ಅಕ್ಕಮಹಾದೇವಿ ರಸ್ತೆ (ಎವಿಕೆ ಕಾಲೇಜು ರೋಡ್) ಸಿ.ಜಿ. ಆಸ್ಪತ್ರೆ ರಸ್ತೆ, ಗುಂಡಿ ವೃತ್ತ, ಶಾಮನೂರು ರಸ್ತೆ, ಲಕ್ಷ್ಮೀ ಪ್ಲೋರ್ ಮಿಲ್ ಪಕ್ಕದ ರಸ್ತೆಯ ಮೂಲಕ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿ ತಲುಪಲಿದೆ. ಬೈಕ್ ರ್ಯಾಲಿ ನಂತರ ಸಮರ್ಪಣಾ ಸಮಾವೇಶ ನಡೆಯಲಿದ್ದು, ಶಾಸಕ ಡಾ| ಶಾಮನೂರು ಶಿವಶಂಕರಪ್ಪ ಉದ್ಘಾಟಿಸುವರು.
ಸಮಾವೇಶದಲ್ಲಿ ಜಿಲ್ಲೆಯ ಎಲ್ಲ ಮಾಜಿ ಸಚಿವರು, ಹಾಲಿ ಮತ್ತು ಮಾಜಿ ಶಾಸಕರು ಭಾಗವಹಿಸಲಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ
Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.