ಸ್ಮಾರ್ಟ್ ಬಸ್ ನಿಲ್ದಾಣ ನಿರ್ಮಾಣ ಶುರು
ಅಂಗಡಿಗಳ ತೆರವು-ಖಾಸಗಿ ಬಸ್ ನಿಲ್ದಾಣ ಹೈಸ್ಕೂಲ್ ಮೈದಾನಕ್ಕೆ ಶಿಫ್ಟ್
Team Udayavani, Dec 6, 2019, 12:28 PM IST
ದಾವಣಗೆರೆ: ಅಂತೂ ಇಂತೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿತ ಸ್ಮಾರ್ಟ್‌ಸಿಟಿ ಯೋಜನೆಯಡಿ 28.5 ಕೋಟಿ ವೆಚ್ಚದಲ್ಲಿ ಖಾಸಗಿ ಬಸ್ ನಿಲ್ದಾಣ ಕಾಮಗಾರಿಗೆ ಮುಹೂರ್ತ ಕೂಡಿ ಬಂದಿದೆ.
ಹಾಗಾಗಿ ಖಾಸಗಿ ಬಸ್ ನಿಲ್ದಾಣ ಸಹ ಹೈಸ್ಕೂಲ್ ಫೀಲ್ಡ್‌ಗೆ ಶಿಫ್ಟ್ ಆಗಿದೆ. ಸ್ಮಾರ್ಟ್‌ಸಿಟಿ ಯೋಜನೆಗೆ ಅನುಗುಣವಾಗಿ ಖಾಸಗಿ ಬಸ್ ನಿಲ್ದಾಣವನ್ನು ಸ್ಮಾರ್ಟ್ ನಿಲ್ದಾಣವನ್ನಾಗಿ ಮಾಡಬೇಕು ಎಂಬ ಉದ್ದೇಶದಿಂದ 28.5 ಕೋಟಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ. ಸ್ಮಾರ್ಟ್‌ಸಿಟಿ ಯೋಜನೆ ಪ್ರಕಾರ ಜೂನ್ ನಲ್ಲೇ ಖಾಸಗಿ ಬಸ್ ನಿಲ್ದಾಣ ಕಾಮಗಾರಿ ಪ್ರಾರಂಭವಾಗಬೇಕಿತ್ತು. ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ 3 ಕೋಟಿ ವೆಚ್ಚದಲ್ಲಿ ತಾತ್ಕಾಲಿಕ ಬಸ್ ನಿಲ್ದಾಣವನ್ನೂ ನಿರ್ಮಾಣ ಮಾಡಲಾಗಿತ್ತಾದರೂ ಅನೇಕ ಕಾರಣದಿಂದ ಖಾಸಗಿ ಬಸ್ ನಿಲ್ದಾಣ ಶಿಫ್ಟ್ ಆಗಿರಲಿಲ್ಲ.
ಇದ್ದಕ್ಕಿದ್ದಂತೆ ಬುಧವಾರದಿಂದ ಖಾಸಗಿ ಬಸ್ ನಿಲ್ದಾಣ ಶಿಫ್ಟ್ ಆಗಿದೆ. ಬಸ್ ನಿಲ್ದಾಣಕ್ಕೆ ಬಂದು, ಹೋಗುತ್ತಿದ್ದಂತಹ ನೂರಾರು ಖಾಸಗಿ ಬಸ್ ಗಳು ಈಗ ಸರ್ಕಾರಿ ಹೈಸ್ಕೂಲ್ ಮೈದಾನಕ್ಕೆ ಬಂದು-ಹೋಗುತ್ತಿವೆ. ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ 98 ಮಳಿಗೆ ನಿರ್ಮಾಣ ಮಾಡಲಾಗಿದೆ. ಕೆಲವುಗಳಲ್ಲಿ ವ್ಯಾಪಾರ-ವಹಿವಾಟು ಪ್ರಾರಂಭವಾಗಿದೆ.
ಬುಧವಾರ ಖಾಸಗಿ ಬಸ್ ನಿಲ್ದಾಣ ಶಿಫ್ಟ್ ಆಗುತ್ತಿರುವ ವಿಷಯ ಗೊತ್ತಾಗದೆ ಬಸ್‌ನವರು ಮಾತ್ರವಲ್ಲ, ಜನರು ಸಹ ತೀವ್ರ ತೊಂದರೆ ಅನುಭವಿಸಬೇಕಾಯಿತು. ಊರುಗಳಿಗೆ ಹೋಗಬೇಕಾದವರು, ಬೇರೆ ಊರುಗಳಿಂದ ಬಂದವರಿಗೆ ಗೊಂದಲ ಉಂಟಾಗಿತ್ತು. ಏಕಾಏಕಿ ಬಸ್ ನಿಲ್ದಾಣ ಬದಲಾಗಿದ್ದರಿಂದ ಎಲ್ಲರಿಗೂ ಒಂದಲ್ಲ ಒಂದು ರೀತಿ ತೊಂದರೆ ಆಗಿತ್ತು. ಗುರುವಾರ ಪರಿಸ್ಥಿತಿ ಸುಧಾರಿಸಿದೆ. ಜನರು ನಿಧಾನವಾಗಿ ತಾತ್ಕಾಲಿಕ ಬಸ್ ನಿಲ್ದಾಣ ವಾತಾವರಣಕ್ಕೆ ಹೊಂದಿಕೊಳ್ಳುತ್ತಿದ್ದಾರೆ.
ಸ್ಮಾರ್ಟ್‌ಸಿಟಿ ಯೋಜನೆಯಡಿ ನಿರ್ಮಾಣವಾಗುತ್ತಿರುವ ಸ್ಮಾರ್ಟ್ ಬಸ್ ನಿಲ್ದಾಣ ಮೂರು ಅಂತಸ್ತಿನ ಜೊತೆಗೆ ಅಗತ್ಯ ವ್ಯಾಪಾರ-ವಹಿವಾಟು, ವಾಣಿಜ್ಯ ಮಳಿಗೆ, ಹೋಟೆಲ್ ಇತರೆ ಸೌಲಭ್ಯ ಹೊಂದಲಿದೆ. ಬಸ್ ಗಳ ಸಂಚಾರದ ಮಾಹಿತಿ ಇತರೆ ಅತ್ಯಾಧುನಿಕ ಸೌಲಭ್ಯದ ಸ್ಪರ್ಶ ಪಡೆಯಲಿದೆ. ಒಟ್ಟಾರೆಯಾಗಿ ಮುಂದಿನ ದಿನಗಳಲ್ಲಿ ಸ್ಮಾರ್ಟ್ ಬಸ್ ಸ್ಟ್ಯಾಂಡ್ ಆಗಲಿದೆ.
ಖಾಸಗಿ ಬಸ್ ನಿಲ್ದಾಣ ಮಾತ್ರವಲ್ಲ, ಕೆಎಸ್ಸಾರ್ಟಿಸಿ ಬಸ್ ನಿಲ್ದಾಣವೂ ಸ್ಮಾರ್ಟ್‌ಸಿಟಿ ಯೋಜನೆಯಡಿ ಸ್ಮಾರ್ಟ್ ಆಗಲಿದೆ. 100ಕೋಟಿ ಅನುದಾನದಲ್ಲಿ ಸಾರಿಗೆ ಸಂಸ್ಥೆ ಬಸ್ ನಿಲ್ದಾಣ ನಿರ್ಮಾಣದ ರೂಪುರೇಷೆ ಸಿದ್ಧವಾಗಿದೆ.
ಕೆಎಸ್ಸಾರ್ಟಿಸಿ ಬಸ್‌ಗಳು ಸಹ ಹೈಸ್ಕೂಲ್ ಮೈದಾನಕ್ಕೆ ಬಂದು-ಹೋಗಲಿವೆ. ಒಂದು ಕಡೆ ಖಾಸಗಿ, ಇನ್ನೊಂದು ಕಡೆ ಕೆಎಸ್ಸಾರ್ಟಿಸಿ ಬಸ್‌ಗಳು ಹೈಸ್ಕೂಲ್ ಮೈದಾನಕ್ಕೆ ದಾಂಗುಡಿಯಿಡುವುದರಿಂದ ಮುಖ್ಯವಾಗಿ ವಿದ್ಯಾರ್ಥಿಗಳಿಗೆ ತೊಂದರೆ ಆಗಲಿದೆ.
ಸರ್ಕಾರಿ ಹೈಸ್ಕೂಲ್, ಪಿಯು ಕಾಲೇಜು ಮತ್ತು ಡಯಟ್ ಕಾಲೇಜುಗಳ ವಿದ್ಯಾರ್ಥಿಗಳು ಸಂತೆಯ ಗದ್ದಲದಲ್ಲಿ ಕಲಿಯುವಂತಹ ಅನಿವಾರ್ಯತೆ ನಿರ್ಮಾಣವಾಗಲಿದೆ. ಕೆಲವೇ ದಿನಗಳಲ್ಲಿ ಪರೀಕ್ಷಾ ಕಾಲ… ಆಗ ಇನ್ನೂ ಹೆಚ್ಚಿನ ಸಮಸ್ಯೆ ಶತಃಸಿದ್ಧ. ಹಾಗಾಗಿ ಸ್ಮಾರ್ಟ್‌ಸಿಟಿ ಯೋಜನೆ ಅಧಿಕಾರಿಗಳು, ಜನಪ್ರತಿನಿಧಿಗಳು ಎರಡು ಬಸ್ ನಿಲ್ದಾಣಗಳ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಮುಗಿಸುವತ್ತ ಚಿತ್ತ ಹರಿಸಲೇಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.