ಬಂಡವಾಳಶಾಹಿಗಳಿಗೆ ಮಾತ್ರ ಅಚ್ಛೇ ದಿನ್‌

ಬಂಡವಾಳಶಾಹಿಗಳ ಪರವಾಗಿರುವ ಕಾರ್ಮಿಕ ಕಾನೂನುಗಳು ಜಾರಿಗೆ•ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸೋಣ

Team Udayavani, May 2, 2019, 11:45 AM IST

2-MAY-12

ದಾವಣಗೆರೆ: ಮೇ ದಿನದ ಅಂಗವಾಗಿ ಕಾರ್ಮಿಕರ ಮೆರವಣಿಗೆ.

ದಾವಣಗೆರೆ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಎನ್‌ಡಿಎ ಮೈತ್ರಿಕೂಟ ಗೆದ್ದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಫ್ಯಾಸಿಸ್ಟ್‌ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಆಲ್ ಇಂಡಿಯಾ ಟ್ರೇಡ್‌ ಯೂನಿಯನ್‌ ಕಾಂಗ್ರೆಸ್‌ (ಎಐಟಿಯುಸಿ) ರಾಜ್ಯ ಕಾರ್ಯದರ್ಶಿ ಎನ್‌. ಶಿವಣ್ಣ ಹೇಳಿದರು.

ಬುಧವಾರ ಜಯದೇವ ವೃತ್ತದ ನಾಟ್ಯಾಚಾರ್ಯ ಶ್ರೀನಿವಾಸ ಕುಲಕರ್ಣಿ ರಸ್ತೆಯಲ್ಲಿ ನಡೆದ ಮೇ ದಿನಾಚರಣೆ ಹಾಗೂ ಹುತಾತ್ಮರ 49ನೇ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ಮೋದಿ ಸರ್ವಾಧಿಕಾರದ ಆಡಳಿತ ನಡೆಸಿದ್ದಾರೆ. ಮತ್ತೆ ಅಧಿಕಾರಕ್ಕೆ ಬಂದಲ್ಲಿ ಖಂಡಿತವಾಗಿಯೂ ಜಾತಿ, ಕೋಮುವಾದಿ, ಮನುವಾದಿ ಫ್ಯಾಸಿಸ್ಟ್‌ ಸರ್ಕಾರದ ಆಡಳಿತ ನಡೆಯಲಿದೆ ಎಂದರು.

ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ವಿದೇಶಿ ಬ್ಯಾಂಕ್‌ಗಳಲ್ಲಿನ ಕಪ್ಪು ಹಣವನ್ನು ಭಾರತಕ್ಕೆ ವಾಪಸ್‌ ತಂದು ಎಲ್ಲರ ಖಾತೆಗೆ 15 ಲಕ್ಷ ಜಮೆ ಮಾಡುವ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ, ಡಾ| ಸ್ವಾಮಿನಾಥನ್‌ ವರದಿ ಜಾರಿಗೊಳಿಸುವ ಭರವಸೆ ನೀಡಿದ್ದಂತಹ ಮೋದಿ ಯಾವುದನ್ನೂ ಈಡೇರಿಸಿಲ್ಲ. ಮೋದಿ ಆಡಳಿತದಲ್ಲಿ ನಿರ್ಮಾಣವಾಗಿದ್ದಂತಹ ನಿರುದ್ಯೋಗ ಸಮಸ್ಯೆ ಕಳೆದ 45 ವರ್ಷದಲ್ಲಿ ಬೇರೆ ಯಾವ ಸರ್ಕಾರದ ಆಡಳಿತದಲ್ಲೂ ನಿರ್ಮಾಣವಾಗಿರಲಿಲ್ಲ ಎಂದು ದೂರಿದರು.

ಅಚ್ಛೆ ದಿನ್‌ ತರುವುದಾಗಿ ಮೋದಿ ಹೇಳಿದ್ದರು. ಅಚ್ಛೆ ದಿನ್‌ ಬಂದಿದ್ದು ಬಂಡವಾಳಶಾಹಿಗಳಿಗೆ ಮಾತ್ರ. ಜನ ಸಾಮಾನ್ಯರಿಗೆ ಬರಲೇ ಇಲ್ಲ. ಎಐಟಿಯುಸಿ ನೇತೃತ್ವದ ಹೋರಾಟದ ಫಲವಾಗಿ ಜಾರಿಗೆ ಬಂದಿರುವ 44 ಕಾರ್ಮಿಕ ಕಾಯ್ದೆಗಳನ್ನು ಮೋದಿ ಸರ್ಕಾರ 4 ಕೋಡ್‌ಗಳನ್ನಾಗಿ ಮಾಡುವ ಮೂಲಕ ಕಾರ್ಮಿಕ ವಿರೋಧಿ ನೀತಿ ಅನುಸರಿಸಿದೆ. ಸರ್ಕಾರದ ಅನುಮತಿ ಇಲ್ಲದೆ 300ಕ್ಕೂ ಹೆಚ್ಚು ಕಾರ್ಮಿಕರು ಇರುವಂತಹ ಕಾರ್ಖಾನೆ ಪ್ರಾರಂಭಿಸಬಹುದು, ಮಾತ್ರವಲ್ಲ ಯಾವಾಗ ಬೇಕಾದರೂ ಮುಚ್ಚಬಹುದು. ಮೋದಿ ಸರ್ಕಾರ ಬಂಡವಾಳಶಾಹಿ ಪರ ಕಾರ್ಮಿಕ ಕಾಯ್ದೆ ಜಾರಿಗೆ ತರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಂಗನವಾಡಿ, ಆಶಾ, ಬಿಸಿಯೂಟ… ಮುಂತಾದ ಯೋಜನೆಗಳಲ್ಲಿ ದುಡಿಯುವಂತಹ 1 ಕೋಟಿಗೂ ಅಧಿಕ ಮಹಿಳೆಯರಿಗೆ ಯಾವುದೇ ಭದ್ರತೆಯೇ ಇಲ್ಲ. ಅವರನ್ನ ಕಾರ್ಮಿಕರು ಎಂದು ಪರಿಗಣಿಸದೇ ಇರುವುದು ಮೋದಿ ಮಹಿಳಾ ವಿರೋಧಿ ನೀತಿಯ ಪ್ರತೀಕ. ಸ್ಟಾರ್ಟ್‌ ಆಫ್‌ ಇಂಡಿಯಾ ಯೋಜನೆ ಮೂಲಕ ವಿದೇಶಿ ಕಂಪನಿಗಳಿಗೆ ಅನುಕೂಲ ಮಾಡಿಕೊಟ್ಟಿದೆ. ಎಚ್ಎಎಲ್ ಮುಂತಾದ ಸಾರ್ವಜನಿಕ ಉದ್ದಿಮೆ, ಬ್ಯಾಂಕ್‌ ಮುಚ್ಚಿಸುವ ಕೆಲಸ ಮಾಡಿದೆ. ಯಾವುದೇ ಸರ್ಕಾರ ಕಾರ್ಮಿಕ ಕಾಯ್ದೆ ಅನುಷ್ಠಾನಗೊಳಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ ಎಂದು ದೂರಿದರು.

1886ರಲ್ಲಿ ಅಮೆರಿಕಾದ ಚಿಕಾಗೋದಲ್ಲಿ ದಿನಕ್ಕೆ 8 ಗಂಟೆ ಕೆಲಸ ಎಂಬ ಬೇಡಿಕೆ ಮುಂದಿಟ್ಟುಕೊಂಡು ಮಹಿಳೆಯರು ಒಳಗೊಂಡಂತೆ ಸಾವಿರಾರು ಕಾರ್ಮಿಕರು ನಡೆಸಿದ ಹೋರಾಟ, ತ್ಯಾಗದ ಫಲವಾಗಿ ಮೇ. 1 ರಂದು ವಿಶ್ವದ ಎಲ್ಲೆಡೆ ಮೇ ದಿನಾಚರಣೆ ಎಂಬ ಹಬ್ಬ ಆಚರಿಸಲಾಗುತ್ತಿದೆ. ದುಡಿಯುವ ವರ್ಗ, ಮಹಿಳೆಯರು, ಯುವ ಜನಾಂಗದ ಪರವಾದ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಪ್ರತಿಜ್ಞೆಗೈಯುವ ಮೂಲಕ ಹೋರಾಟಕ್ಕೆ ಸಿದ್ಧರಾಗಬೇಕು ಎಂದು ಮನವಿ ಮಾಡಿದರು.

ಅಧ್ಯಕ್ಷತೆ ವಹಿಸಿದ್ದ ಎಐಟಿಯುಸಿ ರಾಜ್ಯ ಕಾರ್ಯಾಧ್ಯಕ್ಷ ಎಚ್.ಕೆ. ರಾಮಚಂದ್ರಪ್ಪ ಮಾತನಾಡಿ, ವರ್ಗ, ಶೋಷಣೆ ರಹಿತ ಸಮ ಸಮಾಜ ನಿರ್ಮಾಣದ ಮೂಲಕ ಮಹಾತ್ಮಗಾಂಧಿ, ಭಗತ್‌ಸಿಂಗ್‌ರವರ ಕನಸು ನನಸಾಗಿಸುವ ಹೋರಾಟಕ್ಕೆ ದುಡಿಯುವ ವರ್ಗ ಸಜ್ಜಾಗಬೇಕು ಎಂದು ತಿಳಿಸಿದರು.

ಎಐಟಿಯುಸಿಯ ಆನಂದರಾಜ್‌, ಆವರಗೆರೆ ಚಂದ್ರು, ಟಿ.ಎಸ್‌. ನಾಗರಾಜ್‌, ಎಂ.ಬಿ. ಶಾರದಮ್ಮ, ಗುಡಿಹಳ್ಳಿ ಹಾಲೇಶ್‌, ಮಹಮ್ಮದ್‌ ರಫಿಕ್‌, ಟಿ.ಎಚ್. ನಾಗರಾಜ್‌, ಮಹಮ್ಮದ್‌ ಬಾಷಾ, ಎಐಬಿಇಎ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ. ರಾಘವೇಂದ್ರ ನಾಯರಿ ಇತರರು ಇದ್ದರು.

ಐರಣಿ ಚಂದ್ರು, ಷಣ್ಮುಖಸ್ವಾಮಿ, ಬಾನಪ್ಪ ಸಂಗಡಿಗರು ಜಾಗೃತಿ ಗೀತೆ ಹಾಡಿದರು. ಆವರಗೆರೆ ವಾಸು ಸ್ವಾಗತಿಸಿದರು. ಡಾಂಗೇ ಪಾರ್ಕ್‌ನಿಂದ ಮೆರವಣಿಗೆ ನಡೆಯಿತು.

ಟಾಪ್ ನ್ಯೂಸ್

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.