8 ತಿಂಗಳಲ್ಲಿ 143 ಡೆಂಘೀ ಪ್ರಕರಣ ದೃಢ
ಡೆಂಘೀ-ಚಿಕೂನ್‌ಗುನ್ಯಾ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ•ಯಾವುದೇ ಸಾವು ಸಂಭವಿಸಿಲ್ಲ
Team Udayavani, Aug 30, 2019, 10:17 AM IST
ದಾವಣಗೆರೆ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಜನವರಿಯಿಂದ ಆಗಸ್ಟ್ ಅಂತ್ಯದವರೆಗೆ ಒಟ್ಟು 574 ಸಂಶಯಾಸ್ಪದ ಡೆಂಘೀ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 143 ಪ್ರಕರಣ ದೃಢಪಟ್ಟಿದ್ದು, ಯಾವುದೇ ಮರಣ ಸಂಭವಿಸಿಲ್ಲ.
ದಾವಣಗೆರೆ 75, ಹರಿಹರ 14, ಚನ್ನಗಿರಿ 12, ಹೊನ್ನಾಳಿ 35, ಜಗಳೂರು 6 ಹಾಗೂ ಹರಪನಹಳ್ಳಿ ತಾಲೂಕಲ್ಲಿ 1 ಪ್ರಕರಣ ಪತ್ತೆಯಾಗಿವೆ. ಜಿಲ್ಲೆಯಾದ್ಯಂತ ಎಲ್ಲಾ ಆರೋಗ್ಯ ಸಂಸ್ಥೆಗಳ ಮುಖಾಂತರ ಅವಶ್ಯಕ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಪ್ರತಿ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯರು, ಇಲಾಖೆಯ ಸಿಬ್ಬಂದಿ ಹಾಗೂ ಸ್ಥಳೀಯ ಸಂಸ್ಥೆಯ ಸಹಕಾರದೊಂದಿಗೆ ನಿರಂತರವಾಗಿ ಲಾರ್ವಾ ಸಮೀಕ್ಷೆ ನಡೆಸಲಾಗುತ್ತಿದೆ. ಮಳೆ ಹೆಚ್ಚಾದ ಕಾರಣ ಮತ್ತು ನೀರು ಸಂಗ್ರಹಣಾ ಪರಿಕರಗಳನ್ನು ಮುಚ್ಚದಿರುವುದರಿಂದ ಸೊಳ್ಳೆಗಳು ಹೆಚ್ಚಾಗುತ್ತಿದ್ದು, ಸಮೀಕ್ಷೆ ಮತ್ತು ಬಳಸುವ ನೀರಿಗೆ ಮಾತ್ರ ಅಬೇಟ್ ದ್ರಾವಣ ಹಾಕುವುದರಿಂದ ಸೊಳ್ಳೆಗಳನ್ನು ನಾಶಪಡಿಸಲಾಗುತ್ತಿದೆ. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮುಖ್ಯವಾಗಿ ಈಡೀಸ್ ಇಜಿಪ್ಟೆ ಎಂಬ ಸೊಳ್ಳೆ ಹಗಲು ಹೊತ್ತ್ತಿನಲ್ಲಿ ಕಚ್ಚುವುದರಿಂದ ಡೆಂಘೀ ಮತ್ತು ಚಿಕೂನ್‌ಗುನ್ಯ ಹರಡಲಿದೆ. ಅದರಲ್ಲೂ ಚಿಕ್ಕಮಕ್ಕಳಿಗೆ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡಿ ಇದ್ದಕ್ಕಿದ್ದಂತೆ ಜ್ವರ, ತೀವ್ರತರ ತಲೆನೋವು ಹಣೆಯ ಮುಂಭಾಗದಲ್ಲಿ ಉಂಟಾಗಲಿದೆ. ಕಣ್ಣಿನ ಹಿಂಭಾಗದಲ್ಲಿ ನೋವು ಕಣ್ಣಿನ ಚಲನೆಯಿಂದ ಹೆಚ್ಚಾಗುತ್ತದೆ. ಮೈ-ಕೈ ಮತ್ತು ಕೀಲು ನೋವು ಹಾಗೂ ವಾಕರಿಕೆ ಮತ್ತು ವಾಂತಿ ಲಕ್ಷಣಗಳು ಪ್ರಾರಂಭಿಕ ಹಂತದಲ್ಲಿ ಕಾಣಿಸಿಕೊಳ್ಳುತ್ತವೆ ಎಂದು ತಿಳಿಸಿದ್ದಾರೆ.
5 ರಿಂದ 7 ದಿನದೊಳಗೆ ರೋಗದ ಗುಣ ಲಕ್ಷಣಗಳು ಕಂಡುಬರಲಿದ್ದು, ಪ್ರಾಥಮಿಕ ಹಂತದಲ್ಲಿ ಚಿಕಿತ್ಸೆ ನೀಡಿ ರಕ್ತ ಪರೀಕ್ಷೆ, ಎನ್‌ಎಸ್1 (ಡೆಂಘೀ ಆಂಟಿಜನ್ ಪರೀಕ್ಷಾ) ಕಿಟ್‌ಗಳ ಮೂಲಕ ಡಿ.ಪಿ.ಎಚ್.ಎಲ್. ಪ್ರಯೋಗ ಶಾಲೆಯಲ್ಲಿ (ಸಿ.ಜಿ.ಆಸ್ಪತ್ರೆ ಆವರಣ, 2ನೇ ಮಹಡಿ) ಪರೀಕ್ಷೆಗೆ ಒಳಪಡಿಸಿ ಖಚಿತಪಡಿಸಲಾಗುತ್ತದೆ. ಈ ಖಚಿತ ಪಟ್ಟ ಡೆಂಘೀ ಮತ್ತು ಚಿಕೂನ್‌ಗುನ್ಯ ಜ್ವರದ ಲಕ್ಷಣಗಳಿಗೆ ಅನುಗುಣವಾಗಿ ಆರೋಗ್ಯ ಇಲಾಖೆಯ ಎಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಲಾಗಿದೆ.
ರೋಗ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಕ್ಕೆ ಸಾರ್ವಜನಿಕರು ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆಗಳ ನಿಯಂತ್ರಣ/ಸೊಳ್ಳೆ ಪರದೆ ಬಳಕೆ. ಬಯಲು ಮತ್ತು ಮನೆಯ ಸುತ್ತ ಮುತ್ತಲಿನ ವಾತಾವರಣದಲ್ಲಿ ಮಳೆನೀರು ಸಂಗ್ರಹವಾಗುವಂತಹ ಘನ ತ್ಯಾಜ್ಯ ವಸ್ತುಗಳಾದ ಪ್ಲಾಸ್ಟಿಕ್ ವಸ್ತುಗಳು, ಒಡೆದ ಪಿಂಗಾಣಿ, ಮಡಕೆ, ಗಾಜಿನ ವಸ್ತುಗಳು ಹಳೆಯ ಟೈರುಗಳು, ಚಿಪ್ಪುಗಳಲ್ಲಿ ಮಳೆನೀರು ನಿಲ್ಲದಂತೆ ನೋಡಿಕೊಳ್ಳುವುದರ ಜೊತೆಗೆ ಅವುಗಳನ್ನು ಸೂಕ್ತ ವಿಲೇವಾರಿ ಮಾಡಬೇಕಿದೆ ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Winter session: ವರ್ಷದ ಕೊನೆಯ ಸಂಸತ್ ಅಧಿವೇಶನ ಫಲಪ್ರದವಾಗಲಿ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.