ರಥಯಾತ್ರೆಯಿಂದ ಮನೆ ಮನೆಗೆ ಕಾನೂನು ಅರಿವು-ನೆರವು

ಸಮ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ

Team Udayavani, Jul 10, 2019, 1:16 PM IST

1–July-28

ದಾವಣಗೆರೆ: ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.

ದಾವಣಗೆರೆ: ಕಾನೂನು ಸಾಕ್ಷರತಾ ರಥಯಾತ್ರೆಯ ಮೂಲಕ ಜನಸಾಮಾನ್ಯರಿಗೆ ಸರಳವಾಗಿ, ಸುಲಭವಾಗಿ, ಆರ್ಥಿಕವಾಗಿ ಹೊರೆಯಾಗದ ರೀತಿಯಲ್ಲಿ ಮತ್ತು ಬಡವರಿಗೆ ಉಚಿತವಾಗಿ ನೆರವು ನೀಡುವ ಮೂಲಕ ನ್ಯಾಯ ದೊರಕಿಸಲಾಗುವುದು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಕಾರದ ಸದಸ್ಯ ಕಾರ್ಯದರ್ಶಿ ಪ್ರಭು ಎನ್‌.ಬಡಿಗೇರ್‌ ತಿಳಿಸಿದರು.

ಮಂಗಳವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ, ಅರಕ್ಷಕ, ಸರ್ಕಾರಿ ಅಭಿಯೋಜಕ ಇಲಾಖೆ, ತಾಲೂಕು ಮತ್ತು ಗ್ರಾಮ ಪಂಚಾಯತಿ ಸಂಯುಕ್ತಾಶ್ರಯದಲ್ಲಿ ದಾವಣಗೆರೆಯ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಜನತೆಗೆ ಕಾನೂನುಗಳ ಅರಿವು ನೀಡುವ ಮೂಲಕ ರಾಷ್ಟ್ರವನ್ನು ಮುನ್ನಡೆಸುವುದಕ್ಕಾಗಿ ಕಾನೂನು ಸಾಕ್ಷ‌ರತಾ ರಥಯಾತ್ರೆಯ ಅಭಿಯಾನ ಕೈಗೊಳ್ಳಲಾಗಿದೆ. ಮನೆ ಮನೆಗೆ ತೆರಳಿ ಕಾನೂನು ನೆರವು ನೀಡುವ ಮೂಲಕ ಜನರಲ್ಲಿ ಕಾನೂನು ಅರಿವು ಮೂಡಿಸಲಾಗುವುದು ಎಂದರು.

ಭಾರತ ಅತೀ ಹೆಚ್ಚು ಸಂಪನ್ಮೂಲಗಳನ್ನು ಹೊಂದಿದ್ದು, ಮಾನವ ಸಂಪನ್ಮೂಲ ಸಹ ಹೇರಳವಾಗಿದೆ. ಆದರೆ, ಕೆಲವರ ಸ್ವಾರ್ಥದಿಂದ ನಿರೀಕ್ಷಿಸಿದ ಪ್ರಗತಿ ಸಾಧ್ಯ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಎಲ್ಲರಿಗೂ ಕಾನೂನುಗಳ ಬಗ್ಗೆ ಶಿಕ್ಷಣವನ್ನು ನೀಡುವುದರ ಮೂಲಕ ತಾರತಮ್ಯವಿಲ್ಲದ ಸಮಾನತೆಯ ಸಮಾಜ ನಿರ್ಮಾಣ ಮಾಡುವ ಪ್ರಯತ್ನದಲ್ಲಿ ಎಲ್ಲರೂ ಕೈಜೋಡಿಸಬೇಕಾಗಿದೆ ಎಂದು ತಿಳಿಸಿದರು. ಸರ್ಕಾರ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ನೀಡುತ್ತಿರುವ ಸರ್ವರೀತಿಯ ನೆರವನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ರಶ್ಮಿ ಎಸ್‌. ಮರಡಿ ಮಾತನಾಡಿ,ಇಂದಿಗೂ ಸಹ ಇಟ್ಟಿಗೆ ಭಟ್ಟಿ, ಗ್ಯಾರೇಜ್‌, ಹೋಟೆಲ್ ಮುಂತಾದ ಸ್ಥಳಗಳಲ್ಲಿ ಬಾಲಕಾರ್ಮಿಕರು ಕಂಡುಬರುತ್ತಿದ್ದು ಅವರೆಲ್ಲರನ್ನು ಮುಕ್ತಗೊಳಿಸಿ, ಶಾಲೆಗೆ ಕರೆತಂದು ಶಿಕ್ಷಣ ನೀಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎಲ್.ಎಚ್. ಅರುಣ್‌ಕುಮಾರ್‌ ಮಾತನಾಡಿ, ಕಾನೂನು ಆಡಳಿತಕ್ಕೆ ಒಳಪಟ್ಟಿರುವ ನಾವೆಲ್ಲರೂ ನಮ್ಮ ನಿತ್ಯ ಜೀವನದ ಅವಿಭಾಜ್ಯ ಅಂಗವಾಗಿರುವ ಕಾನೂನುಗಳ ಬಗ್ಗೆ ತಿಳಿವಳಿಕೆ ಪಡೆಯುವುದು ಅವಶ್ಯಕವಾಗಿದ್ದು, ಇಂದು ಗರ್ಭದಿಂದ ಗೋರಿಯವರೆಗೂ ಸಹ ಮನುಷ್ಯನ ಘನತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕಾನೂನುಗಳನ್ನು ರಚನೆ ಮಾಡಲಾಗಿದೆ. ಆದರೂ ಇಂದು ಭ್ರೂಣಾವಸ್ಥೆಯಲ್ಲಿಯೇ ಹೆಣ್ಣು ಶಿಶುಗಳನ್ನು ಹತ್ಯೆ ಮಾಡಲಾಗುತ್ತಿರುವುದರಿಂದ ದೇಶದಲ್ಲಿ ಹೆಣ್ಣು ಮಕ್ಕಳ ಸಂತತಿ ಕಡಿಮೆಯಾಗುತ್ತಿರುವುದು ಕಳವಳಕಾರಿ. ಹೆಣ್ಣು ಭ್ರೂಣ ತಡೆಗೆ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ ಎಂದರು.

ಉಪ ಪ್ರಾಚಾರ್ಯ ಪರಮೇಶ್ವರಪ್ಪ ಅಧ್ಯಕ್ಷತೆ ವಹಿಸಿದ್ದರು. ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ಎರಡನೇ ನ್ಯಾಯಾಲಯದ ನ್ಯಾಯಾಧೀಶ ಪಿ.ಎಂ.ಪಿ. ಕಿರಣ್‌, ವಕೀಲರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಪಿ.ಎಂ. ಅನ್ನಪೂರ್ಣ, ವಕೀಲ ಎನ್‌.ಎಂ. ಆಂಜನೇಯ ಮಾತನಾಡಿದರು. ವಕೀಲ ಎ.ಸಿ. ರಘು, ಬಾಲಕಾರ್ಮಿಕರ ಕಾಯ್ದೆ …ಕುರಿತು ಉಪನ್ಯಾಸ ನೀಡಿದರು.

ಟಾಪ್ ನ್ಯೂಸ್

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.