ಪ್ರಸಾದ ವಿತರಿಸುವ ಮುನ್ನ ಪರೀಕ್ಷೆ ಕಡ್ಡಾಯ
ಆಚಾತುರ್ಯ ಸಂಭವಿಸಿದಲ್ಲಿ ಆಯಾ ಮಂದಿರ-ಸಂಸ್ಥೆಗಳೇ ಹೊಣೆ: ಜಿಲ್ಲಾಧಿಕಾರಿ ಎಚ್ಚರಿಕೆ
Team Udayavani, Sep 19, 2019, 11:21 AM IST
ದಾವಣಗೆರೆ: ಆರೋಗ್ಯ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾಧಿಕಾರಿ ಮಹಾಂತೇಶ ಜಿ.ಬೀಳಗಿ ಅಧ್ಯಕ್ಷತೆಯಲ್ಲಿ ನಡೆಯಿತು.
ದಾವಣಗೆರೆ: ಜಿಲ್ಲೆಯ ಎಲ್ಲಾ ಧರ್ಮದ ಪ್ರಸಾದ ಮಂದಿರದವರು ಆಹಾರ ಸುರಕ್ಷತೆ ತಂಡದಿಂದ ಸ್ಯಾಂಪಲ್ ಪರೀಕ್ಷೆಗೊಳಪಡಿಸಿ, ದೃಢೀಕರಣದ ನಂತರವೇ ಸಾರ್ವಜನಿಕರಿಗೆ ಪ್ರಸಾದ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಜಿ.ಬೀಳಗಿ ಸೂಚಿಸಿದ್ದಾರೆ.
ತಮ್ಮ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚಾಮರಾಜನಗರದ ಸುಳ್ವಾಡಿಯಲ್ಲಿ ಪ್ರಸಾದ ಸೇವನೆ ಹಿನ್ನೆಲೆಯಲ್ಲಿ ಸಂಭವಿಸಿದ ದುರ್ಘಟನೆ ಉಲ್ಲೇಖೀಸಿ, ಆಹಾರ ಸುರಕ್ಷತೆ ತಂಡದಿಂದ ಪರೀಕ್ಷೆ ಮಾಡಿಸದೇ ಪ್ರಸಾದ ವಿತರಿಸಿ, ಅಚಾತುರ್ಯಗಳೇನಾದರೂ ಸಂಭವಿಸಿದಲ್ಲಿ ಆಯಾ ಮಂದಿರಗಳು, ಸಂಸ್ಥೆಯವರನ್ನೇ ನೇರವಾಗಿ ಹೊಣೆಗಾರರನ್ನಾಗಿಸಲಾಗುವುದು. ಆನ್‌ಲೈನ್ ಮೂಲಕ ಈ ಮಂದಿರ-ಸಂಸ್ಥೆಗಳು ನೋಂದಾಯಿಸಿಕೊಳ್ಳದಿದ್ದಲ್ಲಿ 25,000 ರೂ. ವರೆಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು.
ಇದಕ್ಕೂ ಮುನ್ನ ಸಭೆಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಆಹಾರ ಸುರಕ್ಷತಾ ಅಂಕಿತಾಧಿಕಾರಿ ಡಾ| ರಾಘವನ್ ಮಾತನಾಡಿ, ರಾಷ್ಟ್ರೀಯ ತಂಬಾಕು ನಿಯಂತ್ರಣ ಘಟಕದ ವತಿಯಿಂದ ಜಿಲ್ಲೆಯಲ್ಲಿ ಒಟ್ಟು 33 ಕಡೆ ತಂಬಾಕು ದಾಳಿ ನಡೆಸಲಾಗಿದೆ. ಧೂಮ್ರಪಾನ ನಿಷೇಧದ ಬೋರ್ಡ್ ಅಳವಡಿಸದ ಅಂಗಡಿಗಳು, ಸಾರ್ವಜನಿಕ ಸ್ಥಳಗಳಲ್ಲಿ ಧೂಮ್ರಪಾನ ಮಾಡುವವರಿಗೆ ದಂಡ ವಿಧಿಸಲಾಗಿದೆ. ತಂಬಾಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ 48 ಶಾಲಾ ಕಾರ್ಯಕ್ರಮ ಹಾಗೂ ಈವರೆಗೆ 12 ಗುಂಪು ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.
ಆಹಾರ ಸುರಕ್ಷತೆಗೆ ಸಂಬಂಧಿಸಿದಂತೆ ಸೆ.13ರಂದು ಸರ್ಕಾರ ಸುತ್ತೋಲೆ ಹೊರಡಿಸಿ, ಬಿಎಚ್ಓಜಿ ( ಬ್ಲಿಸ್‌ಫುಲ್ ಹೈಜೆನಿಕ್ ಆಫರಿಂಗ್ ಟು ಗಾಡ್) ಯೋಜನೆ ಜಾರಿಗೆ ತಂದಿದ್ದು, ಈ ಯೋಜನೆಯಡಿ ಜಿಲ್ಲೆಯ ಎಲ್ಲಾ ಧರ್ಮದ ಪ್ರಸಾದ ಮಂದಿರಗಳು (ದೇವಸ್ಥಾನ, ಚರ್ಚ್, ಮಸೀದಿ, ಪ್ರಾರ್ಥನಾ ಮಂದಿರ, ಮಠಗಳು ಒಳಗೊಂಡಂತೆ) ಆಹಾರ ಸುರಕ್ಷತೆ ವಿಭಾಗದಡಿ 2,000 ರೂ. ಶುಲ್ಕ ಪಾವತಿಸಿ, ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕಿದೆ. ಸಾರ್ವಜನಿಕರಿಗೆ ಪ್ರಸಾದ ವಿತರಿಸುವ ಮುನ್ನ ಆಹಾರ ಸುರಕ್ಷತೆ ತಂಡದಿಂದ ಸ್ಯಾಂಪಲ್ ಟೆಸ್ಟ್ ಮಾಡಿಸಿ, ದೃಢೀಕರಿಸಿದ ನಂತರ ವಿತರಿಸಬೇಕು ಎಂದರು.
ಡಬ್ಲ್ಯೂಎಚ್ಓ ಕನ್ಸಲೆrಂಟ್ ಎಸ್‌ಎಂಓ ಶ್ರೀಧರ್, ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ಈ ಸಾಲಿನಲ್ಲಿ ಹೊಸದಾಗಿ ರೋಟಾ ವೈರಸ್ ಲಸಿಕೆ ಸೇರ್ಪಡೆಗೊಳಿಸಲಾಗಿದ್ದು, ಆಗಸ್ಟ್ 31 ರಂದು ಜಿಲ್ಲೆಯಲ್ಲಿ ಇದಕ್ಕೆ ಚಾಲನೆ ನೀಡಲಾಗಿದೆ. ಅತಿಸಾರ ಬೇಧಿಯಿಂದ ಮರಣ ಹೊಂದುತ್ತಿರುವ ಪ್ರಕರಣಗಳಲ್ಲಿ ಶೇ.37 ರೋಟಾ ವೈರಸ್‌ನಿಂದ ಉಂಟಾಗುವುದರ ವರದಿ ಆಧರಿಸಿ ಈ ಲಸಿಕೆಯನ್ನು ಸಾರ್ವತ್ರಿಕ ಲಸಿಕೆಗಳಲ್ಲಿ ಸೇರಿಸಲಾಗಿದೆ. ಈ ವೈರಸ್ ನಿಯಂತ್ರಿಸಲು ಲಸಿಕೆಯೊಂದೇ ಮಾರ್ಗವಾಗಿದ್ದು, ಈ ಲಸಿಕೆ ನೀಡಲು ಎ.ಎನ್.ಎಂ, ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ತಾಲೂಕುವಾರು ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.
ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ 12 ಲಕ್ಷ ಗರ್ಭಿಣಿಯರು ಮತ್ತು 10.5 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಗರ್ಭಿಣಿ ಹೆರಿಗೆಯಾಗುವವರೆಗೂ ಅನೇಕ ಲಸಿಕೆಗಳನ್ನು ನೀಡಲಾಗುವುದು. ಮಕ್ಕಳು ಮತ್ತು ವಯಸ್ಕರು ಸೇರಿದಂತೆ ಎಲ್ಲಾ ವಯಸ್ಸಿನವರಲ್ಲಿ ಡಿಫ್ತಿರಿಯಾ ಕಂಡು ಬರುತ್ತಿದ್ದು, ಟಿ.ಡಿ. ಲಸಿಕೆ ಹಾಕಲಾಗುವುದು. ಹಿಂದೆ ಇದ್ದ ಟಿ.ಟಿ ಲಸಿಕೆಯನ್ನು ಟಿ.ಡಿ.(ಟೆಟನಸ್ ಡಿಫ್ತಿರಿಯಾ)ಯನ್ನಾಗಿಸಿ ನೀಡಲಾಗುತ್ತಿದ್ದು, ರೋಟಾ ವೈರಸ್ ಹಾಗೂ ಟಿಡಿ ಲಸಿಕೆಗಳನ್ನು ನೀಡುವ ವ್ಯಾಪ್ತಿ ಹೆಚ್ಚಿಸಲಾಗುತ್ತಿದೆ.
ಕಾರ್ಯಕ್ರಮಗಳ ಯಶಸ್ಸಿಗೆ ಸರ್ಕಾರದ ವಿವಿಧ ಇಲಾಖೆಗಳ ಸಹಕಾರ ಅಗತ್ಯವೆಂದು ಸಭೆ ಗಮನಕ್ಕೆ ತಂದರು.
ಆಗ, ಜಿಲ್ಲಾಧಿಕಾರಿಗಳು, ನಗರಾಭಿವೃದ್ಧಿ ಕೋಶದಿಂದಲೂ ಸಾರ್ವತ್ರಿಕ ಲಸಿಕೆ ಕುರಿತು ಸಭೆ ನಡೆಸಿ, ಪಾಲಿಕೆ ವ್ಯಾಪ್ತಿ ಸೇರಿದಂತೆ ಜಿಲ್ಲೆಯಲ್ಲಿ ಅರ್ಹರೆಲ್ಲರಿಗೂ ಲಸಿಕೆ ಹಾಕಲು ಕ್ರಮವಹಿಸಬೇಕು. ಎಲ್ಲ ಇಲಾಖೆಗಳ ಸಹಯೋಗದೊಂದಿಗೆ ಈ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದ ಅವರು, ಈ ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡುವಂತೆ ಸೂಚಿಸಿದರು.
ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ| ಮೀನಾಕ್ಷಿ, ಜಿಲ್ಲೆಯಲ್ಲಿ ಆಗಸ್ಟ್ ಅಂತ್ಯದವರೆಗೆ 640 ಡೆಂಘೀ ಸಂಶಯಾಸ್ಪದ ಪ್ರಕರಣಗಳ ಪೈಕಿ 160 ದೃಢಪಟ್ಟಿವೆ. 285 ಚಿಕೂನ್‌ಗುನ್ಯ ಸಂಶಯಾಸ್ಪದ ಪ್ರಕರಣಗಳ ಪೈಕಿ 38 ಪ್ರಕರಣ ದೃಢಪಟ್ಟಿದೆ. ಯಾವುದೇ ಸಾವು ಸಂಭವಿಸಿಲ್ಲ ಎಂದು ಹೇಳಿದರು.
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ| ಗಂಗಾಧರ್ ಮಾತನಾಡಿ, ಜಿಲ್ಲೆಯಲ್ಲಿ ಈ ತಿಂಗಳಲ್ಲಿ ಒಟ್ಟು 1344 ರೋಗಿಗಳಿಗೆ ಕಫ ಪರೀಕ್ಷೆ ನಡೆಸಲಾಗಿದ್ದು, 82 ಧನಾತ್ಮಕ ವರದಿ ಬಂದಿದೆ. ಇತರೆ ಕ್ಷಯ ರೋಗಿಗಳು 62 ಸೇರಿ ಒಟ್ಟು 141 ಕ್ಷಯ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ತಾಯಿ ಮತ್ತು ಮಗು ಮರಣ ಪ್ರಮಾಣ, ಕುಷ್ಟರೋಗ ನಿಯಂತ್ರಣ ಸೇರಿದಂತೆ ಆರೋಗ್ಯ ಕಾರ್ಯಕ್ರಮಗಳ ವಿವಿಧ ಯೋಜನೆಗಳ ಪ್ರಗತಿ ಪರಿಶೀಲಿಸಿದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ಆರೋಗ್ಯ ಕಾರ್ಯಕ್ರಮಗಳನ್ನು ಸಂಬಂಧಿಸಿದ ಅಧಿಕಾರಿಗಳು ಇತರೆ ಇಲಾಖೆಗಳ ಸಹಯೋಗದೊಂದಿಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಪಂ ಸಿಇಓ ಪದ್ಮ ಬಸವಂತಪ್ಪ, ಡಿಯುಡಿಸಿ ಯೋಜನಾ ನಿರ್ದೇಶಕಿ ನಜ್ಮಾ, ಡಿಎಚ್ಓ ಡಾ| ರಾಘವೇಂದ್ರಸ್ವಾಮಿ, ಜಿಲ್ಲಾಸ್ಪತ್ರೆ ಅಧಿಧೀಕ್ಷಕ ಡಾ| ನಾಗರಾಜ್, ತಾಲ್ಲೂಕಿನ ವೈದ್ಯಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವಿಜಯಕುಮಾರ್, ಡಿಡಿಪಿಐ ಪರಮೇಶ್ವರಪ್ಪ, ಇತರೆ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.