ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್
ನಿಗದಿತ ಅವಧಿಯೊಳಗೆ ಪ್ರಗತಿ ಸಾಧಿಸಿವಿಶೇಷ ಘಟಕ-ಗಿರಿಜನ ಉಪಯೋಜನೆ ಪ್ರಗತಿ ಪರಿಶೀಲನೆ
Team Udayavani, Oct 20, 2019, 12:35 PM IST
ದಾವಣಗೆರೆ: ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಯಾವುದೇ ತೊಂದರೆಯಾಗದಂತೆ ಸೌಲಭ್ಯ ತಲುಪಿಸಿ, ನಿಗದಿತ ಸಮಯದೊಳಗೆ ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಜಿ. ಬೀಳಗಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಶನಿವಾರ ಜಿಲ್ಲೆಯ ವಿವಿಧ ಇಲಾಖೆಯಲ್ಲಿ ಪ.ಜಾತಿ ಉಪಯೋಜನೆ/ಗಿರಿಜನ ಯೋಜನೆಯಡಿ ಅನುಷ್ಠಾನಗೊಳಿಸುತ್ತಿರುವ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ತಮ್ಮ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಸಭೆಗೆ ಯೋಜನೆ ಪ್ರಗತಿ ಕುರಿತಾದ ಸಂಪೂರ್ಣ ಮಾಹಿತಿಯೊಂದಿಗೆ ಬರಬೇಕು. ಇಲಾಖಾವಾರು ಮಾಹಿತಿ ನೀಡುವಾಗ ಎಲ್ಲವನ್ನೂ ವಿವರವಾಗಿ ಹೇಳಬೇಕು. ಸಭೆಗೆ ಬರಲು ಆಗದಿದ್ದರೆ ಸಕಾರಣದೊಂದಿಗೆ ಮುಂಚಿತವಾಗಿ ಅನುಮತಿ ಪಡೆದು, ನಿಯೋಜಿತ ಅಧಿಕಾರಿಗೆ ಸಮರ್ಪಕ ಮಾಹಿತಿಯೊಂದಿಗೆ ಕಳುಹಿಸಿಕೊಡಬೇಕು ಎಂದರು.
ಸರಿಯಾದ ಮಾಹಿತಿ ಇಲ್ಲದೇ ವ್ಯರ್ಥ ಸಭೆ ನಡೆಸುವುದರಲ್ಲಿ ಅರ್ಥವಿಲ್ಲ. ಆದ್ದರಿಂದ ಎಲ್ಲ ಅಧಿಕಾರಿಗಳು ನಿರ್ಲಕ್ಷ್ಯ ಮನೋಭಾವ ಬಿಟ್ಟು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ತಿಳಿಸಿದರು.
ಸೆಪ್ಟೆಂಬರ್ ಅಂತ್ಯದವರೆಗೆ ಕೃಷಿ ಇಲಾಖೆ ಎಸ್‌ಸಿಪಿ ಯೋಜನೆಯಡಿ ಶೇ. 94.57 ಹಾಗೂ ಟಿಎಸ್‌ಪಿ ಯೋಜನೆಯಡಿ ಶೇ.96.86 ಪ್ರಗತಿ ಸಾಧಿಸಿದೆ. ತೋಟಗಾರಿಕೆ ಇಲಾಖೆಯಲ್ಲಿ ಎಸ್‌ಸಿಪಿ ಶೇ. 51.76 ಮತ್ತು ಟಿಎಸ್‌ಪಿ ಶೇ.79.71, ರೇಷ್ಮೆ ಇಲಾಖೆ ಎಸ್‌ಸಿಪಿ ಶೇ.45, ಟಿಎಸ್‌ಪಿ ಶೇ.71.78 ಹಾಗೂ ಆಹಾರ ಇಲಾಖೆಯಲ್ಲಿ ಎಸ್‌ಸಿಪಿ ಮತ್ತು ಟಿಎಸ್‌ಪಿ ಶೇ.100 ಪ್ರಗತಿ ಸಾ ಧಿಸಲಾಗಿದೆ. ಅನುದಾನ ಬಿಡುಗಡೆಯಾಗದೇ ಇರುವ, ಪ್ರಗತಿ ಕುಂಠಿತವಾಗಿರುವ ಇಲಾಖೆಗಳು ಪ್ರಗತಿ ಸಾಧಿಸಲು ಕ್ರಮ ಕೈಗೊಳ್ಳಬೇಕು ಎಂದರು.
ರೇಷ್ಮೆ ಇಲಾಖೆಯಲ್ಲಿ ಸಾಕಷ್ಟು ಅಧಿಕಾರಿ/ ಸಿಬ್ಬಂದಿಗಳಿದ್ದು, ವಾರ್ಷಿಕ ಅನುದಾನ ಲಭ್ಯವಿದೆ. ಆದರೆ ಜಿಲ್ಲೆಯಲ್ಲಿ ಕೇವಲ 290 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ರೇಷ್ಮೆ ಬೆಳೆ ಇದ್ದು, ಪ್ರದೇಶ ವಿಸ್ತರಣೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಸಲಹೆ ನೀಡಿದರು.
ಮಾಯಕೊಂಡ ಶಾಸಕ ಪ್ರೊ.ಎನ್.ಲಿಂಗಣ್ಣ ಮಾತನಾಡಿ, ನಮ್ಮ ಕ್ಷೇತ್ರದಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ ಸೇರಿದಂತೆ ಇತರೆ ಇಲಾಖೆಗಳ ಎಸ್‌ಸಿಪಿ/
ಟಿಎಸ್‌ಪಿ ಯೋಜನೆಯಡಿ ಇರುವ ಸೌಲಭ್ಯಗಳ ಕುರಿತು ಫಲಾನುಭವಿಗಳಿಗೆ ಮಾಹಿತಿ ಇಲ್ಲ.
ಈ ಯೋಜನೆಗಳ ಕುರಿತು ಅಧಿಕಾರಿಗಳು ಸಮರ್ಪಕವಾಗಿ ಪ್ರಚಾರ, ಮಾಹಿತಿ ನೀಡಿಲ್ಲ. ಇನ್ನು ಮುಂದೆ ಅರ್ಹರಿಗೆ ಈ ಯೋಜನೆಯ ಮಾಹಿತಿ ತಿಳಿಯುವಂತೆ ಕ್ರಮ ವಹಿಸಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಬರುವ ಉದ್ಯೋಗಿನಿ ಯೋಜನೆಗೆ ಬೇಡಿಕೆ ಇದ್ದು, ಇದಕ್ಕೆ ನಿಗದಿಪಡಿಸಿರುವ ಗುರಿ ಪ್ರಮಾಣ ಹೆಚ್ಚಿಸಲು ಆ ಇಲಾಖೆ ಉಪನಿರ್ದೇಶಕರು ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದರು.
ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಸಹಾಯಕ ಅಭಿಯಂತರರು ಎಸ್ ಸಿಪಿ/ಟಿಎಸ್‌ಪಿ ಯೋಜನೆಯಡಿ ನಿರ್ಮಿಸಲಾದ ಚೆಕ್‌ಡ್ಯಾಮ್‌ಗಳ ಬಗ್ಗೆ ಸಮರ್ಪಕ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಜಿಲ್ಲಾಧಿಕಾರಿಗಳು, ಈ ಸಭೆಗೆ ಸಂಬಂಧಿಸಿದ ಅಧಿಕಾರಿ ಗೈರಾಗಿದ್ದಾರೆ. ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡುವಂತೆ ಸೂಚಿಸಿದರಲ್ಲದೇ, ಯಾವುದೇ ಜಿಲ್ಲಾಮಟ್ಟದ ಅಧಿಕಾರಿಗಳು ಇಂತಹ ಮುಖ್ಯವಾದ ಸಭೆಗಳಿರುವಾಗ ಅನುಮತಿ ಪಡೆಯದೇ ಗೈರು ಹಾಜರಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ. ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಲೋಕೋಪಯೋಗಿ ಇಲಾಖೆಯ ಎಇ ಸಹ ಅನುಮತಿ ಪಡೆಯದೇ ಗೈರು ಹಾಜರಾಗಿದ್ದನ್ನು ಕಂಡ ಜಿಲ್ಲಾ ಧಿಕಾರಿಗಳು, ಅವರಿಗೆ ನೋಟಿಸ್ ನೀಡುವಂತೆ ಸೂಚಿಸಿದರಲ್ಲದೆ, ಸಂಬಂಧಿಸಿದ ಅಧಿಕಾರಿಗಳು ಜವಾಬ್ದಾರಿಯಿಂದ ನಡೆದುಕೊಂಡು ನಿಗದಿತ ಗುರಿ ತಲುಪಲು ಶ್ರಮಿಸಬೇಕು. ಜಿ.ಪಂ ಸಿಇಒ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಕರೆದು ಪರಿಶೀಲಿಸಬೇಕೆಂದು ಹೇಳಿದರು.
ಹರಿಹರ ಶಾಸಕ ಎಸ್.ರಾಮಪ್ಪ ಮಾತನಾಡಿ, ಎಸ್‌ಸಿಪಿ/ಟಿಎಸ್‌ಪಿ ಪ್ರಗತಿ ಪರಿಶೀಲನೆ ಸಭೆಗಳಿಗೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಾಗಬೇಕು. ಅರ್ಹರಿಗೆ ಈ ಸೌಲಭ್ಯಗಳ ಕುರಿತು ಮಾಹಿತಿ ನೀಡಬೇಕು ಎಂದರು.
ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಪದ್ಮಾ ಬಸವಂತಪ್ಪ ಮಾತನಾಡಿ, ಎಸ್‌ಸಿಪಿ/ ಟಿಎಸ್‌ಪಿ ಸೇರಿದಂತೆ ವಿವಿಧ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವಲ್ಲಿ ಮಾನದಂಡಗಳಲ್ಲಿ ಯಾವುದಾದರೂ ತೊಡಕುಗಳು, ಬದಲಾವಣೆಗಳಿದ್ದರೆ ಆ ಬಗ್ಗೆ ಜಿಲ್ಲಾಮಟ್ಟದ ಅಧಿಕಾರಿಗಳು ಪಟ್ಟಿ ಮಾಡಿ ಜಿಲ್ಲಾಧಿಕಾರಿಗಳು ಅ.21ರಂದು ನಡೆಸುವ ಕೆಡಿಪಿ ಪೂರ್ವಭಾವಿ ಸಭೆಗೆ ಸಲ್ಲಿಸಿದಲ್ಲಿ, ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗುವುದು ಎಂದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶಿವಾನಂದ ಕುಂಬಾರ್, ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ ಬಳ್ಳಾರಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.