ನಗರದಲ್ಲಿ ಸುಸಜ್ಜಿತ ರಂಗಮಂದಿರ ನಿರ್ಮಾಣವಾಗಲಿ

ರೈಲ್ವೆ ಹಳಿ ಬಳಿ ನಿರ್ಮಿಸಲಾಗಿರುವ ಜಿಲ್ಲಾ ರಂಗಮಂದಿರವು ನಯಾ ಪೈಸೆಗೂ ಯೋಗ್ಯವಿಲ್ಲ

Team Udayavani, Apr 10, 2019, 1:21 PM IST

10-April-15

ದಾವಣಗೆರೆ: ಶಿವಸಂಚಾರ ನಾಟಕೋತ್ಸವ-19ರ ಸಮಾರೋಪ ಕಾರ್ಯಕ್ರಮದಲ್ಲಿ ಹಿರಿಯ ರಂಗತಜ್ಞ ಬಸವಲಿಂಗಯ್ಯ ಮಾತನಾಡಿದರು.

ದಾವಣಗೆರೆ: ರಂಗಭೂಮಿಗೆ ಹೆಸರಾದ ದಾವಣಗೆರೆಯಲ್ಲಿ ಜನಪ್ರತಿನಿಧಿಗಳು, ದಾನಿಗಳ ಸಹಕಾರದಿಂದ ಸುಸಜ್ಜಿತ ರಂಗಮಂದಿರ ನಿರ್ಮಾಣಕ್ಕೆ ಎಲ್ಲಾ ಹಿರಿಯ ನಾಗರಿಕರು
ಒತ್ತಾಯಿಸಿ ಎಂದು ಹಿರಿಯ ರಂಗತಜ್ಞ ಬಸವಲಿಂಗಯ್ಯ ಸಲಹೆ ನೀಡಿದರು.

ವಿದ್ಯಾನಗರದ ಕಾವ್ಯ ಮಂಟಪದಲ್ಲಿ ಮಂಗಳವಾರ ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘ ಹಾಗೂ ಗ್ರಂಥ ಸರಸ್ವತಿ ಪ್ರತಿಭಾರಂಗ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ
ಶಿವಸಂಚಾರ ನಾಟಕೋತ್ಸವ-19ರ ಸಮಾರೋಪ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ದಾವಣಗೆರೆಯ ಅರುಣಾ ಚಿತ್ರಮಂದಿರ ಸಮೀಪದ ರೈಲ್ವೆಹಳಿ ಬಳಿ ಈಗಾಗಲೇ
ನಿರ್ಮಿಸಲಾಗಿರುವ ಜಿಲ್ಲಾ ರಂಗ ಮಂದಿರವು ನಾಟಕ ಪ್ರದರ್ಶಕ್ಕೆ ಅಗತ್ಯವಿರುವ ಸೂಕ್ತ ವಾತಾವರಣವನ್ನು ಹೊಂದಿಲ್ಲ. ಅದರ
ನಿರ್ಮಾಣಕ್ಕೆ ಬಳಸಿದ ಮಾನವ ಶಕ್ತಿ ಹಾಗೂ ಹಣ ಎಲ್ಲವೂ ವ್ಯರ್ಥವಾಗಿದ್ದು, ನಯಾ ಪೈಸೆಗೂ ಯೋಗ್ಯವಿಲ್ಲ. ಅದು ಕೇವಲ ಶಾದಿಮಹಲ್‌ ನಂತಿದೆ. ಅಲ್ಲಿ ಕೇವಲ ಮದುವೆ ಮುಂತಾದ
ಕಾರ್ಯಕ್ರಮಗಳನ್ನು ಮಾಡಬಹುದು ವಿನಃ ಉತ್ತಮ ನಾಟಕ ಪ್ರದರ್ಶನ ಮಾಡಲು ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಈಗಿರುವ ಜಿಲ್ಲಾ ರಂಗಮಂದಿರ ನಾಟಕ ಪ್ರದರ್ಶನಕ್ಕೆ ಸೂಕ್ತವಾಗಿರದ ಕಾರಣ ನಗರದ ಹಿರಿಯ ನಾಗರಿಕರು ಸಂಸದರ 25ಕೋಟಿ ಅನುದಾನದಲ್ಲಿ 5ಕೋಟಿ ಅನುದಾನ ಕೇಳಿ.
ಇತರೆ ದಾನಿಗಳ ಮೊರೆ ಹೋಗಿ. ನಾಟಕ ಪ್ರದರ್ಶನಕ್ಕೆ ಬೇಕಾದ ಸುಸಜ್ಜಿತ ರಂಗಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ ಎಂದರು.

ರಾಜಕೀಯ, ವಾಣಿಜ್ಯವಾಗಿ ದಾವಣಗೆರೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಆದರೆ ಸಾಂಸ್ಕೃತಿಕವಾಗಿ ಬಡವಾಗಿದೆ. ದೇಶದಲ್ಲಿ ಯಾವ ಇಲಾಖೆಗೂ ಸಿಗದಷ್ಟು ಅನುದಾನ ರಾಜ್ಯದ ಕನ್ನಡ ಸಂಸ್ಕೃತಿ ಇಲಾಖೆಗೆ ದೊರೆಯುತ್ತಿದೆ. ಅದು ಕಲಾವಿದರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಇನ್ನಷ್ಟು ಸದ್ಬಳಕೆ ಆಗಬೇಕು ಎಂದರು.

ಸಾಣೇಹಳ್ಳಿ ಶಿವಸಂಚಾರ ರಂಗ ತಂಡವು ದೇಶದುದ್ದಕ್ಕೂ ಉತ್ತಮ ಸಾಮಾಜಿಕ, ಪೌರಾಣಿಕ ನಾಟಕಗಳನ್ನು ಪ್ರದರ್ಶಿಸುತ್ತಿದ್ದು,
ಅಂತಹ ನಾಟಕಗಳನ್ನು ಇಂತಹ ಸಾರ್ವಜನಿಕರ ಬಳಕೆಯ ಪಾರ್ಕ್‌ನ ಕಾವ್ಯ ಮಂಟಪದಲ್ಲಿ ಪ್ರದರ್ಶನ ಮಾಡುವುದು ಕಲಾವಿದರಿಗೆ ಮಾಡುವ ಅವಮಾನ. ಈ ಹಿನ್ನೆಲೆಯಲ್ಲಿ ಹಿರಿಯ
ನಾಗರಿಕರು ದಾವಣಗೆರೆಯಲ್ಲಿ ಸುಸಜ್ಜಿತ ರಂಗಮಂದಿರ ನಿರ್ಮಾಣಕ್ಕೆ ಮುಂದಾಗಿ ಬಸವಲಿಂಗಯ್ಯ ಒತ್ತಾಯಿಸಿದರು.

ಸಾಹಿತಿ ಬಾ.ಮಾ. ಬಸವರಾಜಯ್ಯ ಮಾತನಾಡಿ, ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘದ ಶಿವಸಂಚಾರ ರಂಗತಂಡವು
ರಾಷ್ಟ್ರವ್ಯಾಪಿ ಮನರಂಜನೆ ಜೊತೆ ಜೊತೆಗೆ ಜನರಲ್ಲಿ ಪ್ರಜ್ಞಾವಂತಿಕೆ, ವೈಚಾರಿಕ ಮನೋಭಾವ ಬಿತ್ತುವ ಅವಿಸ್ಮರಣೀಯ ಕೆಲಸ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ವೇಳೆ ಸಾಣೇಹಳ್ಳಿಯ ಪೀಠದ ಶ್ರೀ ಪಂಡಿತಾರಾಧ್ಯ ಸ್ವಾಮೀಜಿ ರಚಿಸಿದ ಗುರುಮಾತೆ ಅಕ್ಕನಾಗಲಾಂಬಿಕೆ ನಾಟಕವನ್ನು ಶಿವಸಂಚಾರ ತಂಡದ ಕಲಾವಿದರು ಪ್ರದರ್ಶನ ಮಾಡಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎನ್‌.ಟಿ. ಮಂಜುನಾಥ್‌, ಪ್ರತಿಮಾ ಸಭಾ ಅಧ್ಯಕ್ಷ ಎಸ್‌. ಹಾಲಪ್ಪ ಉಪಸ್ಥಿತರಿದ್ದರು. ಡಾ| ಶಿವಕುಮಾರ ಕುರ್ಕಿ ಕಾರ್ಯಕ್ರಮ ನಿರೂಪಿಸಿದರು.

ಸಾಮಾಜಿಕ ಪಿಡುಗುಗಳ ಜಾಗೃತಿ ಹೆಚ್ಚಾಗಲಿ ವೈಚಾರಿಕ ಮತ್ತು ಪೌರಾಣಿಕ ನಾಟಕ ಪ್ರದರ್ಶನಗಳು ಸಮಾಜಕ್ಕೆ ಉತ್ತಮ ಕೊಡುಗೆ ನೀಡುತ್ತಿದ್ದು, ಇದರ ಜೊತೆ ಜೊತೆಗೆ ಸಮಾಜದಲ್ಲಿ ವ್ಯಾಪಕವಾಗಿ
ಬೇರೂರಿರುವ ಬಾಲ್ಯವಿವಾಹ, ವರದಕ್ಷಿಣೆ, ಭ್ರೂಣಹತ್ಯೆಯಂತಹ
ಸಾಮಾಜಿಕ ಪಿಡುಗುಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ರಂಗ ತಂಡಗಳು ಮಾಡಬೇಕು. ಆಗ ಸಮಾಜದಲ್ಲಿನ ಶೋಷಣೆ ನಿವಾರಿಸಲು ಸಾಧ್ಯವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ
ನ್ಯಾಯಾಧೀಶ ಅಂಬಾದಾಸ್‌ ಕುಲಕರ್ಣಿ ಜಿ ಅಭಿಪ್ರಾಯ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.