ಹಿಂದೂ ಶ್ರದ್ಧಾ ಕೇಂದ್ರಗಳ ಪುನರ್ ಪ್ರತಿಷ್ಠಾಪಿಸಲಿ
ಕೇಂದ್ರ ಸರ್ಕಾರಕ್ಕೆ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಒತ್ತಾಯ
Team Udayavani, Dec 2, 2019, 11:27 AM IST
ದಾವಣಗೆರೆ: ಅಯೋಧ್ಯೆ ಮಾತ್ರವಲ್ಲದೆ ಕಾಶಿ, ಮಥುರಾ ದೇವಸ್ಥಾನಗಳ ಪುನರ್ ಪ್ರತಿಷ್ಠಾಪನೆ ಸಂಬಂಧ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಗಮನ ಹರಿಸಬೇಕಿದೆ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಒತ್ತಾಯಿಸಿದ್ದಾರೆ.
ನಗರದ ಹೋಟೆಲ್ ಶಾಂತಿ ಪಾರ್ಕ್ ರಾಯಲ್ ಸಭಾಂಗಣದಲ್ಲಿ ಭಾನುವಾರ ಸಂಜೆ ನಡೆದ ಶ್ರೀರಾಮಸೇನೆಯ ರಾಜ್ಯ ಕಾರ್ಯಕಾರಿಣಿ ಸಭೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಸರ್ಕಾರದ ಅವ ಧಿಯಲ್ಲೇ ಆಗಿನ ಗೃಹಮಂತ್ರಿಯಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಸಂಸತ್ ಒಪ್ಪಿಗೆ ಪಡೆದು ಗುಜರಾತಿನ ಸೋಮನಾಥ ಮಂದಿರ ಜೀರ್ಣೋದ್ಧಾರ ಮಾಡಿದ್ದರು. ಇದೇ ಮಾದರಿಯಲ್ಲಿ ಈಗಿನ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಹ ಅಯೋಧ್ಯೆ, ಕಾಶಿ, ಮಥುರಾ ಸೇರಿದಂತೆ ಇತರೆ ಹಿಂದೂ ಶ್ರದ್ಧಾಕೇಂದ್ರಗಳನ್ನು ಪುನರ್ ಪ್ರತಿಷ್ಠಾಪನೆ ಮಾಡಬೇಕೆಂದು ಆಗ್ರಹಿಸಿದರು.
ರಾಮ ಜನ್ಮಭೂಮಿ ಹೋರಾಟ ಇಂದು, ನಿನ್ನೆಯದಲ್ಲ. 500 ವರ್ಷಗಳ ಕಾಲ ನಡೆದಿರುವ ದೀರ್ಘಾವ ಧಿ ಹೋರಾಟದಲ್ಲಿ ಸುಮಾರು 36 ಲಕ್ಷ ಜನರ ಬಲಿದಾನವಾಗಿದೆ. ಬ್ರಿಟೀಷರ ಕಾಲದಿಂದಲೂ ಈ ಪ್ರಕರಣ ನ್ಯಾಯಾಲಯದಲ್ಲಿತ್ತು. ಆದರೆ, ನ್ಯಾಯದಾನ ವಿಳಂಬವಾಗಿದ್ದರಿಂದ ಜನಾಕ್ರೋಶಕ್ಕೆ ಸಿಲುಕಿ ಬಾಬರಿ ಮಸೀದಿ ಧ್ವಂಸವಾಯಿತು. 1992 ಡಿಸೆಂಬರ್ 6ರಂದು 7 ಲಕ್ಷ ಮಂದಿ ಕರಸೇವಕರು ನಾಲ್ಕು ಗಂಟೆಯಲ್ಲಿ 400 ವರ್ಷಗಳ ಕಳಂಕ ತೊಡೆದುಹಾಕಿದ್ದು ಐತಿಹಾಸಿಕ ಘಟನೆಯಾಗಿದೆ.
ಇಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದ್ದರೆ ಅದು ಲಕ್ಷಾಂತರ ಕರಸೇವಕರ ತ್ಯಾಗ-ಬಲಿದಾನದ ಫಲ ಎಂದು ಹೇಳಿದರು. 1997ರಿಂದಲೂ ಚಿಕ್ಕಮಗಳೂರಿನ ದತ್ತಪೀಠ ವಿಚಾರವಾಗಿ ಹಿಂದೂಗಳು ಹೋರಾಟ ನಡೆಸುತ್ತಿದ್ದರೂ ನ್ಯಾಯ ಸಿಕ್ಕಿಲ್ಲ. ದತ್ತಪೀಠವನ್ನು ಹಿಂದೂಗಳಿಗೆ ಮುಕ್ತಗೊಳಿಸುವ ಮೂಲಕ ಸರ್ಕಾರ ಹೋರಾಟಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ ಅವರು, ಪಿಎಫ್‌ಐ ಕಾರ್ಯಕರ್ತರ ಮೇಲಿನ 300 ಕೇಸ್ ಹಿಂಪಡೆದ ಸರ್ಕಾರ ಹಿಂದೂ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನೂ ಹಿಂಪಡೆಯಬೇಕು ಎಂದರು. ಭಾರತೀಯ ಸಂಸ್ಕೃತಿಯಲ್ಲಿ ಗೋವನ್ನು ತಾಯಿ ಎಂಬುದಾಗಿ ಪೂಜಿಸುತ್ತೇವೆ. ಆದರೆ, ಇಂತಹ ಗೋಮಾಂಸವನ್ನು ವಿದೇಶಕ್ಕೆ ರಫ್ತು ಮಾಡುವುದರಿಂದ ಸರ್ಕಾರಕ್ಕೆ 30 ಸಾವಿರ ಕೋಟಿ ರೂ. ಆದಾಯ ಬರುತ್ತಿದೆ. ಇದೊಂದು ದೊಡ್ಡ ಮಾಫಿಯಾ ಆಗಿದ್ದು, ಇದನ್ನು ತಡೆಯಲು ಹಿಂದೂ ಸಮಾಜ ಸಂಘಟಿತವಾಗಬೇಕು ಎಂದು ಅವರು ಮನವಿ ಮಾಡಿದರು.
ದಾವಣಗೆರೆಯ ಆಜಾದ್ ನಗರವೊಂದರಲ್ಲೇ 100ಕ್ಕೂ ಅಧಿಕ ಅನಧಿಕೃತ ಕಸಾಯಿಖಾನೆಗಳಿವೆ. ಇವುಗಳನ್ನು ತೆರವು ಗೊಳಿಸುವಂತೆ ಒತ್ತಾಯಿಸಿ ಜಿಲ್ಲಾಡಳಿತಕ್ಕೆ ದೂರು ನೀಡಿದರೆ, ನಮ್ಮ ವಿರುದ್ಧವೇ ಕೇಸ್ ಹಾಕುತ್ತಾರೆ. ಅನಧಿಕೃತ ಕಸಾಯಿಖಾನೆಗಳಿಂದ ಅಧಿಕಾರಿಗಳ ಜೇಬಿಗೆ ದುಡ್ಡು ಹೋಗುತ್ತಿದೆ ಎಂದು ಆರೋಪಿಸಿದರು.
ಕಾರ್ಯಕ್ರಮದಲ್ಲಿ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಶ್ರೀಸಿದ್ಧಲಿಂಗ ಸ್ವಾಮೀಜಿ, ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, ರಾಜ್ಯ ಉಪಾಧ್ಯಕ್ಷ ಮಹೇಶಕುಮಾರ್ ಕಟ್ಟಿಮನಿ, ರಾಜ್ಯ ಸಂಘಟನಾ ಪ್ರಮುಖ್ ಪರಶುರಾಮ ನಡುಮನಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ.ಆರ್.ಆನಂದ್, ರಾಜ್ಯ ಕಾರ್ಯದರ್ಶಿ ಹರೀಶ್, ಗುತ್ತಿಗೆದಾರರಾದ ಹನುಮಂತ ನಾಯ್ಕ, ರವಿ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ಶ್ರೀರಾಮಸೇನೆಯ ಜಿಲ್ಲಾ ಘಟಕಕ್ಕೆ ನೂತನ ಪದಾಧಿ ಕಾರಿಗಳನ್ನು ಆಯ್ಕೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.