ಅಕ್ರಮ ಚಟುವಟಿಕೆಗಳಿಗೆ ಶೀಘ್ರ ಕಡಿವಾಣ
ಬೇರೆಡೆ ಹೋಗುವ ಸಂದರ್ಭದಲ್ಲಿ ಪೊಲೀಸರಿಗೆ ಮಾಹಿತಿ ನೀಡಿ ಸಹಕರಿಸುವಂತೆ ಎಸ್‌ಪಿ ವೇದಮೂರ್ತಿ ಮನವಿ
Team Udayavani, Jun 15, 2019, 11:09 AM IST
ದೇವದುರ್ಗ: ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮೊದಲ ಹಂತದ ಕ್ರಮ ಕೈಗೊಳ್ಳಲಾಗಿದೆ ಎಂದು ನೂತನ ಎಸ್‌ಪಿ ಡಾ| ಸಿ.ಎಸ್. ವೇದಮೂರ್ತಿ ತಿಳಿಸಿದರು.
ಪಟ್ಟಣದ ಪೊಲೀಸ್ ಠಾಣೆ ಮತ್ತು ವೃತ್ತ ನಿರೀಕ್ಷಕರ ಕಚೇರಿಗೆ ಶುಕ್ರವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಯಚೂರು ಗ್ರಾಮೀಣ, ಸಿರವಾರ ಮತ್ತು ಲಿಂಗಸುಗೂರು ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳಾಗಿವೆ. ಬೀಗ ಹಾಕಿದ ಮನೆಗಳನ್ನು ಗಮನಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ನಾಗರಿಕರು ಕೂಡ ಜಾಗೃತರಾಗಿ ಬ್ಯಾಂಕ್‌ಗಳಲ್ಲಿ ವ್ಯವಹಾರ ಇಟ್ಟುಕೊಳ್ಳುವುದರ ಜತೆಗೆ ಅನಿವಾರ್ಯವಾಗಿ ಬೇರೆಡೆ ಹೋಗುವ ಸಂದರ್ಭದಲ್ಲಿ ಪೊಲೀಸರಿಗೆ ಮಾಹಿತಿ ನೀಡಿ ಸಹಕರಿಸಬೇಕು. ಈ ತಾಲೂಕಿನಲ್ಲಿ ಮಟ್ಕಾ ಜೂಜಾಟ ಮತ್ತು ಅಕ್ರಮ ಮರಳು ದಂಧೆ ಕುರಿತು ಗಮನಿಸಿರುವೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ಸಂಬಂಧಿಸಿದ ಎಲ್ಲ ಇಲಾಖೆ ಸಹಯೋಗದೊಂದಿಗೆ ಕಡಿವಾಣ ಹಾಕಲು ಕಾರ್ಯಾಚರಣೆ ನಡೆಸಲಾಗುವುದು ಎಂದು ತಿಳಿಸಿದರು.
ತಾಲೂಕಿನಾದ್ಯಂತ ಅಕ್ರಮ ದಂಧೆಗಳಿಗೆ ಕಡಿವಾಣ ಹಾಕಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇಂಥ ದಂಧೆಯಲ್ಲಿ ಎಷ್ಟೇ ಪ್ರಭಾವಿಗಳಿದ್ದರೂ ಮುಲಾಜಿಲ್ಲಾದೇ ಕ್ರಮ ತೆಗೆದುಕೊಳ್ಳಲಾಗುವುದು. ಅಕ್ರಮ ದಂಧೆಯಲ್ಲಿ ಯಾರೇ ಇದ್ದರೂ ಪ್ರಭಾವಕ್ಕೆ ಒಳಗಾಗುವುದಿಲ್ಲ. ಪೊಲೀಸ್ ಇಲಾಖೆಯಲ್ಲಿ ಕೆಲವರು ಕೂಡ(ಮರಳು ಸಾಗಾಣಿಕೆಗೆ ಟಿಪ್ಪರ್ ಇಟ್ಟಿರುವುದು) ಭಾಗಿಯಾಗಿರುವ ಕುರಿತು ಮೊದಲ ಬಾರಿಗೆ ನನ್ನ ಗಮನಕ್ಕೆ ಬಂದಿದೆ. ಸೂಕ್ತ ತನಿಖೆ ಮಾಡಿ ಕ್ರಮಗೊಳ್ಳಲಾಗುವುದು ಎಂದು ತಿಳಿಸಿದರು.
ಮಟ್ಕಾ ದಂಧೆ ಅವ್ಯಾಹತವಾಗಿ ನಡೆಯುತ್ತಿವೆ ಎಂದು ಗಮನಸೆಳದಾಗ ಹಂತ ಹಂತವಾಗಿ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುತ್ತದೆ. ಮರಳು ಸಾಗಣೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ಚರ್ಚಿಸಿ ಕಡಿವಾಣ ಹಾಕಲು ಕ್ರಮಕೈಗೊಳ್ಳಲಾಗುವುದು. ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ಕೊರತೆ ಮಾಹಿತಿ ಪಡೆಯಲಾಗಿದೆ. ಸರಕಾರ ಮಟ್ಟದಲ್ಲಿ ನೇಮಕಾತಿ ನಡೆಯುತ್ತದೆ ಎಂದು ತಿಳಿಸಿದರು. ಸಿಪಿಐ ಲೋಕೇಶ, ಪಿಎಸ್‌ಐ ಎಲ್.ಬಿ. ಅಗ್ನಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.