ಗೃಹ ಬಂಧನ ಮೀರಿದವರಿಗೆ 14 ದಿನ ಸರ್ಕಾರಿ ಆತಿಥ್ಯ!
Team Udayavani, May 19, 2020, 9:23 AM IST
ಧಾರವಾಡ: ಜಿಲ್ಲೆಯಲ್ಲಿ ಮೇ 14ರಿಂದ 18ರ ವರೆಗೆ 353 ಜನರು ಹೋಂ ಕ್ವಾರಂಟೈನ್ ಉಲ್ಲಂಘಿಸಿದ್ದು, ಅವರನ್ನು ಪುನಃ 14 ದಿನಗಳ ಸರ್ಕಾರಿ ಕ್ವಾರಂಟೈನ್‌ಗೆ ಒಳಪಡಿಸಲಾಗುವುದು ಎಂದು ಡಿಸಿ ದೀಪಾ ಚೋಳನ್ ಹೇಳಿದ್ದಾರೆ.
ಈಗಾಗಲೇ ಕೋವಿಡ್ ಸೋಂಕು ದೃಢಪಟ್ಟಿರುವ ವ್ಯಕ್ತಿಗಳೊಂದಿಗೆ ಎರಡನೇ ಹಂತದ (ಸೆಕೆಂಡರಿ) ಸಂಪರ್ಕ ಹೊಂದಿರುವವರನ್ನು ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಈ ಪೈಕಿ ಮೇ 14ರಂದು 76, ಮೇ 15ರಂದು 63, ಮೇ 16ರಂದು 65, ಮೇ 17ರಂದು 75 ಹಾಗೂ ಮೇ 18ರಂದು 74 ಸೇರಿ ಒಟ್ಟು 353 ಜನರು ಹೋಂ ಕ್ವಾರಂಟೈನ್ ಉಲ್ಲಂಘಿಸಿರುವುದು ದಾಖಲಾಗಿದೆ. ಅಂತಹ ವ್ಯಕ್ತಿಗಳನ್ನು ಪುನಃ ಸರ್ಕಾರದ 14 ದಿನಗಳ ಕ್ವಾರಂಟೈನ್‌ಗೆ ಒಳಪಡಿಸಲಾಗುವುದು. ಕ್ವಾರಂಟೈನ್ ನಲ್ಲಿರುವ ವ್ಯಕ್ತಿಗಳು ಮನೆಗಳಿಂದ ಹೊರಬಂದರೆ ಸುತ್ತಮುತ್ತಲಿನ ಸಾರ್ವಜನಿಕರೂ ಸಹಾಯವಾಣಿ 1077 ಅಥವಾ ವಾಟ್ಸ್‌ಆ್ಯಪ್: 9449847641/46 ಮೂಲಕ ಮಾಹಿತಿ ನೀಡಬಹುದು.
ಕೋವಿಡ್ ಸೋಂಕಿತರೊಂದಿಗೆ ದ್ವಿತೀಯ ಹಂತದ ಸಂಪರ್ಕ ಹೊಂದಿರುವವರು ಹಾಗೂ ರಾಜ್ಯದ ಬೇರೆ ಜಿಲ್ಲೆಗಳಿಂದ ಆಗಮಿಸಿರುವವರನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಆಧುನಿಕ ತಂತ್ರಜ್ಞಾನದ ಜಿಯೋ ಫೆನ್ಸಿಂಗ್ ಅಳವಡಿಸಿ ಇವರ ಮೇಲೆ ಕಣ್ಗಾವಲು ಇರಿಸಲಾಗಿದೆ. ಯಾರಾದರೂ ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಹೊರಬಂದರೆ ತಕ್ಷಣ ಮಾಹಿತಿ ಲಭ್ಯವಾಗುತ್ತಿದೆ. ಅಂತಹ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಂಡು ಕಡ್ಡಾಯವಾಗಿ ಸರ್ಕಾರಿ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಹೊರ ರಾಜ್ಯಗಳಿಂದ ಆಗಮಿಸುವ ಎಲ್ಲರೂ ಕಡ್ಡಾಯವಾಗಿ ಕೃಷಿ ವಿವಿ ಆವರಣದಲ್ಲಿನ ನೋಂದಣಿ ಮತ್ತು ವೈದ್ಯಕೀಯ ತಪಾಸಣೆ ಕೇಂದ್ರಕ್ಕೆ ಭೇಟಿ ನೀಡಿ ಸರ್ಕಾರದ ಸಾಂಸ್ಥಿಕ ಕ್ವಾರಂಟೈನ್‌ಗೆ ಅಥವಾ ಸ್ವಂತ ವೆಚ್ಚದಲ್ಲಿ ಹೋಟೆಲ್ ಕ್ವಾರಂಟೈನ್ ಆಯ್ದುಕೊಳ್ಳಬಹುದು. ಇದನ್ನು ಉಲ್ಲಂಘಿಸುವವರ ವಿರುದ್ಧ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ
MUST WATCH
ಹೊಸ ಸೇರ್ಪಡೆ
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.