ಅತಿಕ್ರಮಣ ತೆರವಿಗೆ 15 ದಿನ ಗಡುವು
•ಜಿಲ್ಲಾಧಿಕಾರಿ-ಪಾಲಿಕೆ ಆಯುಕ್ತರಿಗೆ ದೇಶಪಾಂಡೆ ಸೂಚನೆ•ಎಪಿಎಂಸಿ ಸ್ಥಳಾಂತರಕ್ಕೂ ಸಮಯ ಮಿತಿ
Team Udayavani, Jun 15, 2019, 9:21 AM IST
ಧಾರವಾಡ: ಅವಳಿ ನಗರದಲ್ಲಿ ರಸ್ತೆಗಳ ಅತಿಕ್ರಮಣ ಕುರಿತು ಮಾಜಿ ಸಿಎಂ ಜಗದೀಶ ಶೆಟ್ಟರ ಸಚಿವ ದೇಶಪಾಂಡೆ ಅವರ ಗಮನ ಸೆಳೆದರು.
ಧಾರವಾಡ: ಅವಳಿ ನಗರ ಸೇರಿದಂತೆ ಜಿಲ್ಲೆಯ ಎಲ್ಲ ಹೆದ್ದಾರಿ, ರಸ್ತೆಗಳು ಮತ್ತು ಸರ್ಕಾರಿ ಸ್ವಾಮ್ಯದ ಜಮೀನು ಅತಿಕ್ರಮಣ ಗುರುತಿಸಿ 15 ದಿನಗಳ ಒಳಗಾಗಿ ತೆರವಿಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಜಿಲ್ಲಾಧಿಕಾರಿ ಮತ್ತು ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದರು.
ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲೆಯ 4ನೇ ತ್ತೈಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಹೆಚ್ಚಿನ ಹೆದ್ದಾರಿಗಳು, ಕಿರುರಸ್ತೆಗಳು ಮತ್ತು ಸರ್ಕಾರದ ಒಡೆತನದ ಜಾಗ ಅತಿಕ್ರಮಣಗೊಂಡ ಬಗ್ಗೆ ಅನೇಕರು ದೂರು ನೀಡಿದ್ದಾರೆ. ಕೂಡಲೇ ಈ ಬಗ್ಗೆ ಜಿಲ್ಲಾಧಿಕಾರಿ ಸಭೆ ಕರೆದು ತಂಡ ರಚಿಸಿ ಅತಿಕ್ರಮಣದ ಮಾಹಿತಿ ಪಡೆದು ಅದನ್ನು ಶೀಘ್ರ ತೆರವುಗೊಳಿಸಿ ಅಲ್ಲಿ ಸರ್ಕಾರಿ ಜಾಗ ಎಂದು ಫಲಕ ಹಾಕುವಂತೆ ಸೂಚಿಸಿದರು.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಮಾತನಾಡಿ, ಹುಬ್ಬಳ್ಳಿ ಅಮರಗೋಳದ ಬಸವೇಶ್ವರ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣವು ಏಷ್ಯಾದಲ್ಲಿಯೇ ಅತಿದೊಡ್ಡದಾಗಿದೆ. ಆದರೆ ನಗರದ ಹಳೆ ಮಾರುಕಟ್ಟೆಯಲ್ಲಿ ಇರುವ ವರ್ತಕರನ್ನು ಸ್ಥಳಾಂತರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಧಾರವಾಡ ಎಪಿಎಂಸಿ ಸ್ಥಳಾಂತರಕ್ಕೂ ಒತ್ತು ನೀಡಬೇಕು ಎಂದು ಆಗ್ರಹಿಸಿದರು.
ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ಹಿರೇಪೇಟ, ಅಕ್ಕಿಹೊಂಡ ಮತ್ತಿತರ ಪ್ರದೇಶಗಳಲ್ಲಿ ಲಾರಿಗಳನ್ನು ಅನಿಯಮಿತವಾಗಿ ಬಿಡುವುದು, ಅವೈಜ್ಞಾನಿಕವಾಗಿ ನಿಲುಗಡೆ ಮಾಡುವುದರಿಂದ ಸಂಚಾರ ವ್ಯವಸ್ಥೆಗೆ ಅಡಚಣೆಯಾಗುತ್ತಿದೆ. ಇದರ ಪರಿಹಾರಕ್ಕೆ ಪೊಲೀಸರು ಕಠಿಣ ಕಾರ್ಯಾಚರಣೆ ನಡೆಸಬೇಕು. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸೂಚಿಸಿದರು.
ಕೊಳಚೆ ಪ್ರದೇಶಗಳಲ್ಲಿ ರಸ್ತೆ, ಒಳಚರಂಡಿ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಇರುವ ಯೋಜನೆಗಳ ಸದುಪಯೋಗ ಜನರಿಗೆ ದೊರೆಯುವಂತೆ ಮಾಡಲು ಅಧಿಕಾರಿಗಳಿಗೆ ಸಲಹೆ ನೀಡಿದರು.
ಕುಂದಗೋಳ ಶಾಸಕಿ ಕುಸುಮಾವತಿ ಶಿವಳ್ಳಿ, ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಕೆಂಪೇಗೌಡ ಪಾಟೀಲ, ಉಪಾಧ್ಯಕ್ಷ ಶಿವಾನಂದ ಕರಿಗಾರ, ಜಿಲ್ಲಾಧಿಕಾರಿ ದೀಪಾ ಚೋಳನ್, ಜಿಪಂ ಸಿಇಒ ಡಾ| ಬಿ.ಸಿ. ಸತೀಶ, ಎಸ್ಪಿ ಜಿ. ಸಂಗೀತಾ ಮತ್ತಿತರರು ಇದ್ದರು.
ಎಲ್ಲಿಯೂ ನೀರಿನ ಅಭಾವ ಉಂಟಾಗದಂತೆ ಎಚ್ಚರ ವಹಿಸಿ:
ಅವಳಿ ನಗರದಲ್ಲಿ ಅಗತ್ಯವಿರುವೆಡೆ ಕೊಳವೆಬಾವಿ ಕೊರೆದು ನೀರು ಕೊಡಿ. ಮಹಾನಗರದ ಎಲ್ಲ ಪ್ರದೇಶಗಳಿಗೆ ಕನಿಷ್ಟ 6-7 ದಿನಗಳಿಗೆ ಒಮ್ಮೆ ನೀರು ಪೂರೈಸಬೇಕು. ಅಗತ್ಯವಿರುವ 27 ಕಡೆಗಳಲ್ಲಿ ಕೊಳವೆಬಾವಿ ಕೊರೆದು ನೀರು ಪೂರೈಸಲು ಉದ್ದೇಶಿಸಲಾಗಿದೆ. ಸರ್ಕಾರ ಹಣ ಒದಗಿಸಲಿದೆ. ಎಲ್ಲಿಯೂ ನೀರಿನ ಅಭಾವ ಉಂಟಾಗದಂತೆ ಎಚ್ಚರ ವಹಿಸಿ. ಅವಶ್ಯವಿದ್ದರೆ ಟ್ಯಾಂಕರ್ ಮೂಲಕವೂ ನೀರು ಪೂರೈಸಿ ಎಂದು ಸಚಿವರು ನಗರ ನೀರು ಸರಬರಾಜು ಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.