ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣಕ್ಕೆ 1536 ಕೋಟಿ


Team Udayavani, Aug 16, 2020, 3:30 PM IST

ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣಕ್ಕೆ  1536 ಕೋಟಿ

ಧಾರವಾಡ: ಜಿಲ್ಲೆಯಲ್ಲಿ ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣಕ್ಕೆ 1536 ಕೋಟಿ ರೂ. ವೆಚ್ಚದ ವಿವರವಾದ ಯೋಜನಾ ವರದಿ ಸಿದ್ಧಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು.

ಆರ್‌.ಎನ್‌. ಶೆಟ್ಟಿ ಕ್ರೀಡಾಂಗಣದಲ್ಲಿ 74ನೇ ಸ್ವಾತಂತ್ರ್ಯೊತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಬೆಣ್ಣೆಹಳ್ಳದಲ್ಲಿ ಸಾಕಷ್ಟು ನೀರು ವ್ಯರ್ಥವಾಗಿ ಹೋಗುತ್ತಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ಈ ಹಳ್ಳದ ಉಪ ಹಳ್ಳವಾಗಿರುವ ತುಪ್ಪರಿಹಳ್ಳ ಪ್ರವಾಹ ನಿಯಂತ್ರಣಕ್ಕೆ ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಪೊಲ್ಲಾವರಂ ಸ್ಕೀಮಿನಡಿ ನವಲಗುಂದ ತಾಲೂಕಿನ ಸುಮಾರು 10 ಸಾವಿರ ಹೆಕ್ಟೇರ್‌ ಜಮೀನಿಗೆ ನೀರಾವರಿ ಸೌಲಭ್ಯ ಕಲ್ಪಿಸಲು 1 ಟಿಎಂಸಿ ನೀರು ಹಂಚಿಕೆಯಾಗಿದೆ. ಏತ ನೀರಾವರಿ, ಕೆರೆ ತುಂಬುವ ಯೋಜನೆ ಮತ್ತಿತರ ಕಾಮಗಾರಿಗಳಿಗೆ 400 ಕೋಟಿ ರೂ. ಸಂಯೋಜಿತ ವರದಿ ಅನುಮೋದನೆಯಾಗಿದೆ. ಕರ್ನಾಟಕ ನೀರಾವರಿ ನಿಗಮವು ಡ್ರೋಣ್‌ ಕ್ಯಾಮರಾ ಹಾಗೂ ಡಿಜಿಟಲ್‌ ಜಿಪಿಎಸ್‌ ತಂತ್ರಜ್ಞಾನ ಬಳಸಿ ವಿಸ್ತೃತ ಯೋಜನಾ ವರದಿ ತಯಾರಿಸಲು 50 ಲಕ್ಷ ರೂ. ವೆಚ್ಚದಲ್ಲಿ ಸರ್ವೇ ಕಾರ್ಯ ನಡೆಸುತ್ತಿದೆ ಎಂದರು.

ಕಳಸಾ ಬಂಡೂರಿ ನಾಲಾ ತಿರುವು ಯೋಜನೆ ಕುರಿತು ಮಹದಾಯಿ ನ್ಯಾಯಾಧೀಕರಣವು ಫೆಬ್ರವರಿಯಲ್ಲಿ ಅಂತಿಮ ತೀರ್ಪನ್ನು ಪ್ರಕಟಿಸಿದೆ. ಯೋಜನೆಯ ಸರ್ವೇ, ಅಂದಾಜು ಪತ್ರಿಕೆ ತಯಾರಿಕೆ, ಲೈಯೆಜನಿಂಗ್‌ ಕಾಮಗಾರಿಯ ಒಪ್ಪಂದವನ್ನು ಈಗಾಗಲೇ ಖಾಸಗಿ ಸಂಸ್ಥೆಯೊಂದಿಗೆ ಮಾಡಿಕೊಳ್ಳಲಾಗಿದೆ. 2020-21ರ ಆರ್ಥಿಕ ವರ್ಷದಲ್ಲಿ 463.40 ಕೋಟಿ ರೂ. ಅನುದಾನ್ನ ಉಪಯೋಗಿಸಲು ಯೋಜಿಸಲಾಗಿದೆ. ಕಳಸಾ ನಾಲಾ ತಿರುವು ಯೋಜನೆಗೆ 885.80 ಕೋಟಿ ಮತ್ತು ಬಂಡೂರಿ ನಾಲಾ ತಿರುವು ಯೋಜನೆಗೆ 791.50 ಕೋಟಿ ವಿನಿಯೋಗಿಸಲು ಕರ್ನಾಟಕ ಸರ್ಕಾರವು ತಾತ್ವಿಕ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ತಿಳಿಸಿದರು.

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ ನಿಧಿ ಯೋಜನೆಯಡಿ ಜಿಲ್ಲೆಯ ಅರ್ಹ ರೈತ ಕುಟುಂಬಗಳಿಗೆ ಕೇಂದ್ರದಿಂದ 92.97 ಕೋಟಿ, ರಾಜ್ಯ ಸರ್ಕಾರ 21.81 ಕೋಟಿ ಸಂದಾಯ ಮಾಡಿದೆ. ಜಿಲ್ಲೆಯಲ್ಲಿ 1,61,887 ರೈತರಿದ್ದು, ಇಲ್ಲಿಯವರೆಗೂ 1,24,682 ರೈತರಿಗೆ ಕೇಂದ್ರ ಸರ್ಕಾರದಿಂದ 92.97 ಕೋಟಿ ರೂ. ನೀಡಲಾಗಿದೆ. 1,09,063 ರೈತರಿಗೆ 21.81 ಕೋಟಿ ರೂ.ವನ್ನು ರಾಜ್ಯ ಸರ್ಕಾರದಿಂದ ಜಮೆ ಮಾಡಲಾಗಿದೆ ಎಂದರು.

ಕೋವಿಡ್ ತಡೆಗೆ ಯತ್ನ: ಜಿಲ್ಲೆಯಲ್ಲಿ ಕೋವಿಡ್‌ ತಪಾಸಣೆಗಾಗಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಒಟ್ಟು 63 ಸ್ವಾ ಬ್‌ ಸಂಗ್ರಹಣಾ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ ಗುಣಮುಖವಾಗುತ್ತಿರುವವರ ಪ್ರಮಾಣವೂ ಅಧಿಕವಾಗಿದೆ. ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಈಗಾಗಲೇ ಕೋವಿಡ್‌ ನಿಂದ ಗುಣಮುಖರಾದ 16 ಜನರು ಪ್ಲಾಸ್ಮಾವನ್ನು ದಾನ ಮಾಡಿದ್ದು, ಅವರಿಗೆ ತಲಾ 5 ಸಾವಿರ ರೂ. ಗೌರವ ಧನ ನೀಡಿ ಪುರಸ್ಕರಿಸಲಾಗುತ್ತಿದೆ ಎಂದು ಹೇಳಿದರು.

ಸ್ಮಾರ್ಟ್‌ಸಿಟಿಗೆ ಹೆಚ್ಚಿನ ಒತ್ತು: ಹು-ಧಾ ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಒಟ್ಟು 58 ಯೋಜನೆಗಳನ್ನು 1 ಸಾವಿರ ಕೋಟಿ ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಇಲ್ಲಿಯವರೆಗೆ 15.192 ಕೋಟಿ ರೂ. ಮೊತ್ತದ 10 ಯೋಜನೆಗಳ ಕಾಮಗಾರಿಗಳು ಮುಕ್ತಾಯಗೊಂಡಿವೆ. ಇ-ಶೌಚಾಲಯ, ಈಜುಗೊಳ, ಸ್ಮಾರ್ಟ್ ಸ್ಕೂಲ್‌, ಸ್ಮಾರ್ಟ್‌ಹೆಲ್ತ್‌, ಇಂದಿರಾ ಗಾಜಿನಮನೆ ಆವರಣದ ಸಂಗೀತ ಕಾರಂಜಿ ಕಾಮಗಾರಿಗಳು ಪೂರ್ಣಗೊಂಡಿವೆ. 645.17 ಕೋಟಿ ರೂ. ಮೊತ್ತದ 40 ಯೋಜನೆಗಳ ಕಾಮಗಾರಿಗಳು ಅನುಷ್ಠಾನ ಹಂತದಲ್ಲಿವೆ. ಅದರಲ್ಲಿ ಸ್ಮಾರ್ಟ್‌ರಸ್ತೆಗಳ ನಿರ್ಮಾಣ, ತೋಳನಕೆರೆ ಹಾಗೂ ಉಣಕಲ್‌ ಕೆರೆ ಅಭಿವೃದ್ಧಿ, ಕಮಾಂಡ್‌ ಮತ್ತು ಕಂಟ್ರೋಲ್‌ ಸೆಂಟರ್‌ ಸ್ಥಾಪನೆ, ನೆಹರು ಮೈದಾನ ಹಾಗೂ ಚಿಟಗುಪ್ಪಿ ಆಸ್ಪತ್ರೆ ನಿರ್ಮಾಣ, ಮಹಾತ್ಮಾಗಾಂ ಧಿ ಉದ್ಯಾನವನ ಅಭಿವೃದ್ಧಿ ಒಳಗೊಂಡಿವೆ. 10 ಕೋಟಿ ಮೊತ್ತದ ಎರಡು ಯೋಜನೆಗಳ ಟೆಂಡರ್‌ ಪ್ರಕ್ರಿಯೆ ಜಾರಿಯಲ್ಲಿದೆ. ಉಳಿದ 5 ಯೋಜನೆಗಳನ್ನು 250 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ. ಇದರಲ್ಲಿ ಸಮಗ್ರ ಕ್ರೀಡಾ ಸಂರ್ಕಿರ್ಣ, ಹಳೇ ಬಸ್‌ ನಿಲ್ದಾಣ ಅಭಿವೃದ್ಧಿ, ಉಣಕಲ್‌ ಕೆರೆ ಅಭಿವೃದ್ಧಿ ಮತ್ತು ವಾಣಿವಿಲಾಸ ವೃತ್ತದ ಅಭಿವೃದ್ಧಿ ಯೋಜನೆಗಳು ಸೇರಿವೆ ಎಂದು ಸಚಿವ ಶೆಟ್ಟರ ವಿವರಿಸಿದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.