1975 ಪ್ರಕರಣ ರಾಜಿಯಲ್ಲಿ ಇತ್ಯರ್ಥ
Team Udayavani, Dec 15, 2019, 2:18 PM IST
ಧಾರವಾಡ: ಜಿಲ್ಲಾ ನ್ಯಾಯಾಲಯದ ಅಧೀನದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾ ಧೀಶರಾದ ಈಶಪ್ಪ ಕೆ. ಭೂತೆ ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಶನಿವಾರ ನಡೆಸಲಾಯಿತು.
ಧಾರವಾಡದಲ್ಲಿ 14, ಹುಬ್ಬಳ್ಳಿಯಲ್ಲಿ 18, ಕುಂದಗೋಳದಲ್ಲಿ 2 ಪೀಠಗಳನ್ನು, ನವಲಗುಂದ ಮತ್ತು ಕಲಘಟಗಿಯಲ್ಲಿ ತಲಾ 1 ಪೀಠ ಸ್ಥಾಪಿಸಿ ಸುಮಾರು 7,009ಕ್ಕಿಂತ ಹೆಚ್ಚು ಪ್ರಕರಣಗಳನ್ನು ವಿಚಾರಣೆಗೆ ತೆಗೆದುಕೊಳ್ಳಲಾಗಿತ್ತು. ಅದರಲ್ಲಿ 1,666 ಚಾಲ್ತಿ ಇರುವ ಪ್ರಕರಣಗಳನ್ನು ಹಾಗೂ 309 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನ ಮಾಡಿಸಲಾಯಿತು. ಸುಮಾರು 17 ಕೋಟಿ ಮೊತ್ತವನ್ನು ವಸೂಲು ಮಾಡಲಾಯಿತು. ಲೋಕ ಅದಾಲತ್‌ನಲ್ಲಿ ಜಿಲ್ಲೆಯ ಎಲ್ಲ ನ್ಯಾಯಾಧೀಶರು, ವಿವಿಧ ವಿಮೆ ಕಂಪನಿ ಅಧಿಕಾರಿಗಳು, ವಿಮೆ ಕಂಪನಿ ಪ್ಯಾನಲ್ ವಕೀಲರುಗಳು, ಅರ್ಜಿದಾರರ ಪರ ವಕೀಲರು, ವಾಕರಸಾಸಂ ಅಧಿಕಾರಿಗಳು, ಕಕ್ಷಿದಾರರು, ಜಿಲ್ಲೆಯ ವಕೀಲ ಸಂಘದ ಸದಸ್ಯರು ಪಾಲ್ಗೊಂಡಿದ್ದರು.
ಹೈಕೋರ್ಟ್: ಇಲ್ಲಿಯ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಲೋಕ ಅದಾಲತ್‌ಗಾಗಿ ಸ್ಥಾಪಿಸಿದ್ದ ಮೂರು ಪೀಠದಲ್ಲಿ ಸುಮಾರು 1,825 ಪ್ರಕರಣಗಳನ್ನು ತೆಗೆದುಕೊಂಡು ಒಟ್ಟು 380 ಮೊಟಾರು ವಾಹನ ಪ್ರಕರಣಗಳನ್ನು ರಾಜಿ ಮಾಡಿಸಲಾಯಿತು. ಒಟ್ಟು ಪರಿಹಾರ 6,58,82,890 ರೂ. ಕೊಡಿಸಲಾಯಿತು. ನ್ಯಾಯಮೂರ್ತಿಗಳಾದ ಎಚ್.ಟಿ. ನರೇಂದ್ರ ಪ್ರಸಾದ್, ಅಶೋಕ ಜಿ. ನಿಜಗಣ್ಣನವರ್, ಪಿ.ಜಿ.ಎಂ. ಪಾಟೀಲ, ಎನ್.ಎಸ್. ಸಂಜಯಗೌಡ ಮತ್ತು ನಟರಾಜ್ ರಂಗಸ್ವಾಮಿ, ರವಿ ಎಸ್. ಬಾಳಿಕಾಯಿ, ಜೆ.ಎಸ್. ಶೆಟ್ಟಿ, ಎಸ್.ಎಸ್. ಬಡವಡಗಿ, ಎಂ.ಸಿ. ಹುಕ್ಕೇರಿ, ರಾಘವೇಂದ್ರ ಪುರೋಹಿತ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.