ರಸ್ತೆ-ಸೇತುವೆ ದುರಸ್ತಿಗೆ 2.68 ಕೋಟಿ ಬಿಡುಗಡೆ
•ಜಿಲ್ಲಾ ಪಂಚಾಯ್ತಿ ಮಾಸಿಕ ಕೆಡಿಪಿ ಸಭೆ•ಮಳೆ ಹಾನಿ ವರದಿ ಸಲ್ಲಿಸಲು ಸೂಚನೆ
Team Udayavani, Aug 18, 2019, 10:15 AM IST
ಧಾರವಾಡ: ಅತಿಯಾದ ಮಳೆಯಿಂದಾಗಿ ಜಿಲ್ಲೆಯಲ್ಲಿ ಆಗಿರುವ ಹಾನಿ ಕುರಿತ ವರದಿಯನ್ನು ಎಲ್ಲ ಜನಪ್ರತಿನಿಧಿಗಳಿಗೆ ನೀಡಬೇಕು ಎಂದು ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ ಹೇಳಿದರು.
ಜಿಪಂ ಸಭಾಂಗಣದಲ್ಲಿ ಶನಿವಾರ ಜರುಗಿದ ಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಸ್ವತ್ತುಗಳ ಹಾನಿ ಪರಿಶೀಲನೆ ಹಾಗೂ ಕಾಮಗಾರಿಗಳ ವೀಕ್ಷಣೆಗೆ ತೆರಳುವಾಗ ಆಯಾ ಭಾಗದ ಜನಪ್ರತಿನಿಧಿಗಳಿಗೆ ಮಾಹಿತಿ ನೀಡಬೇಕು. ಸರ್ಕಾರಕ್ಕೆ ಮಳೆಹಾನಿ ವರದಿ ಸಲ್ಲಿಸುವಾಗ ನಿಖರವಾದ ವರದಿ ನೀಡಬೇಕು ಎಂದು ಸೂಚಿಸಿದರು.
ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ ಮಾತನಾಡಿ, ಅಧಿಕಾರಿಗಳು ಜಿಪಂ ಸದಸ್ಯರಿಗೆ ತಮ್ಮ ಕ್ಷೇತ್ರ ವ್ಯಾಪ್ತಿಯಾಗಿರುವ ಸಾರ್ವಜನಿಕ ಸ್ವತ್ತು ಹಾನಿ, ಮನೆಹಾನಿ ಬಗ್ಗೆ ಮತ್ತು ವಿತರಿಸಿದ ಪರಿಹಾರ ಮೊತ್ತದ ಬಗ್ಗೆ ವರದಿ ನೀಡಬೇಕು ಎಂದರು.
ಜಿಪಂ ಸಿಇಒ ಡಾ| ಬಿ.ಸಿ. ಸತೀಶ ಮಾತನಾಡಿ, ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಅಂಕಿ-ಅಂಶಗಳನ್ನು ಸ್ವತಃ ಕ್ಷೇತ್ರ ಭೇಟಿ ಮಾಡಿ ಖಚಿತಪಡಿಸಿಕೊಂಡು ನೀಡಬೇಕು ಎಂದು ಸೂಚಿಸಿದರು.
2.68 ಕೋಟಿ ಬಿಡುಗಡೆ: ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತ ಮನೋಹರ ಮಂಡೊಲಿ ಮಾತನಾಡಿ, ಅತಿಯಾದ ಮಳೆಯಿಂದಾಗಿ ಜಿಲ್ಲೆಯಲ್ಲಿ ತಮ್ಮ ಇಲಾಖೆ ಅಧೀನದ ರಸ್ತೆ-ಸೇತುವೆಗಳು ಸೇರಿದಂತೆ ಅಂದಾಜು 13.29 ಕೋಟಿ ಮೊತ್ತದ ಸ್ವತ್ತು ಹಾನಿ ಆಗಿದೆ. ಜಿಲ್ಲಾಧಿಕಾರಿಗಳು ತುರ್ತು ಕಾಮಗಾರಿಗಾಗಿ 685.34 ಕಿಮೀ ರಸ್ತೆ ಹಾಗೂ ಸೇತುವೆಗಳ ದುರಸ್ತಿಗಾಗಿ 2.68 ಕೋಟಿ ಮೊತ್ತ ಬಿಡುಗಡೆ ಮಾಡಿದ್ದಾರೆ ಎಂದು ಹೇಳಿದರು.
ಕೃಷಿ ಇಲಾಖೆ ಜಂಟಿನಿರ್ದೇಶಕ ಎಸ್.ಎಸ್. ಆಬೀದ್ ಮಾತನಾಡಿ, ಜಿಲ್ಲೆಯಲ್ಲಿ 2.29 ಲಕ್ಷ ಹೆಕ್ಟೇರ್ ಬಿತ್ತನೆಯಾಗಿತ್ತು. ಅತಿ ಮಳೆ ಹಾಗೂ ನೆರೆಯಿಂದಾಗಿ 1.43 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದೆ. ಅಂದಾಜು 98 ಕೋಟಿ ಮೊತ್ತದ ಹಾನಿಯಾಗಿದೆ ಎಂದು ಹೇಳಿದರು.
ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಡಾ| ರಾಮಚಂದ್ರ ಕೆ. ಮಡಿವಾಳ ಮಾತನಾಡಿ, ಅತಿ ಮಳೆಯಿಂದಾಗಿ ಜಿಲ್ಲೆಯಲ್ಲಿ 38,367 ಹೆಕ್ಟೇರ್ ತೋಟಗಾರಿಕೆ ಬೆಳೆ ನಾಶವಾಗಿದ್ದು, ಸುಮಾರು 26 ಕೋಟಿ ರೂ. ಹಾನಿಯಾಗಿದೆ ಎಂದರು.
ಉಪ ಅರಣ್ಯಸಂರಕ್ಷಣಾಧಿಕಾರಿ ಡಿಸೋಜಾ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ರೈತರಿಗೆ ವಿತರಿಸಲು ವಿವಿಧ ಜಾತಿಯ 4,93,346 ಸಸಿಗಳನ್ನು ಬೆಳೆಸಲಾಗಿತ್ತು. ಅವುಗಳಲ್ಲಿ 3,21,098 ಸಸಿಗಳು ಮಾರಾಟವಾಗಿದ್ದು, 1,21,000 ಸಸಿಗಳು ಬಾಕಿ ಉಳಿದಿವೆ ಎಂದು ತಿಳಿಸಿದರು.
ಸಭೆಯಲ್ಲಿ ಎಲ್ಲ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿ ಇಲಾಖಾವಾರು ಮಾಹಿತಿ ಸಲ್ಲಿಸಿದರು. ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರಾದ ಚನ್ನಮ್ಮ ಬಸನ್ನಗೌಡರ, ನಿಂಗಪ್ಪ ಘಾಟಿನ, ಕಲ್ಲಪ್ಪ ಪುಡಲಕಟ್ಟಿ ಇದ್ದರು. ಜಿಪಂ ಉಪಕಾರ್ಯದರ್ಶಿ ಎಸ್.ಜಿ. ಕೊರವರ ಸ್ವಾಗತಿಸಿ, ಸಭೆ ನಿರ್ವಹಿಸಿದರು. ಮುಖ್ಯ ಯೋಜನಾ ಅಧಿಕಾರಿ ದೀಪಕ್ ಮಡಿವಾಳರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.