ಕೋವಿಡ್ 19 ತಡೆಗೆ ಇನ್ಫೋಸಿಸ್ ಪ್ರತಿಷ್ಠಾನದಿಂದ 20 ಲಕ್ಷ ರೂ.
Team Udayavani, Mar 29, 2020, 12:44 PM IST
ಧಾರವಾಡ : ಕೋವಿಡ್ 19 ಸಂಕಷ್ಟ ನಿಯಂತ್ರಣಕ್ಕಾಗಿ ಮತ್ತು ಅಗತ್ಯ ಸೌಲಭ್ಯ ಒದಗಿಸಲು ಇನ್ಫೋಸಿಸ್ ಫೌಂಡೇಶನ್ ಮುಂದಾಗಿದ್ದು ಧಾರವಾಡ ಜಿಲ್ಲೆ ಮತ್ತು ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿಗೆ ಸೇರಿ ಒಟ್ಟು 20 ಲಕ್ಷ ರೂ. ನೆರವು ನೀಡಿದೆ.
ಪ್ರತಿಷ್ಠಾನದ ಮುಖ್ಯಸ್ಥರಾದ ಸುಧಾಮೂರ್ತಿ ಅವರು ಕೋವಿಡ್ 19 ತಡೆಗೆ ಹರಸಾಹಸ ಪಡುತ್ತಿರುವ ಸಿಬ್ಬಂದಿಗೆ ಅಗತ್ಯ ವಸ್ತುಗಳ ಪೂರೈಕೆಗೆ ಹೆಚ್ಚು ಒತ್ತು ನೀಡಲು ಮುಂದಾಗಿದ್ದು, ಧಾರವಾಡದ ಸಾಫಲ್ಯ ಪ್ರತಿಷ್ಠಾನ ಮತ್ತು ಗ್ರಾಮ ವಿಕಾಸ ಸೊಸೈಟಿ ಮೂಲಕ ಪರಿಹಾರ ಸಾಮಗ್ರಿ ವಿತರಿಸಲು ಮುಂದಾಗಿದ್ದಾರೆ. ಮೊದಲ ಹಂತದಲ್ಲಿ ಅವಳಿ-ನಗರ ಸೇರಿದಂತೆ ಧಾರವಾಡ ಜಿಲ್ಲೆ ಹಾಗೂ ಶಿಗ್ಗಾವಿ ತಾಲೂಕುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಪೌರಾಡಳಿತ ಸಂಸ್ಥೆಗಳ ಸ್ವತ್ಛತಾ ಕರ್ಮಿಗಳಿಗೆ 20 ಸಾವಿರ ಮಾಸ್ಕ್ ಮತ್ತು ಪ್ರತಿಯೊಬ್ಬರಿಗೆ ವೈಯಕ್ತಿಕ ಉಪಯೋಗಕ್ಕಾಗಿ ಸ್ಯಾನಿಟೈಜರ್ ಬಾಟಲಿ ಹಂಚಲಾಗುವುದು. ವೈದ್ಯಕೀಯ ಸಿಬ್ಬಂದಿಗೆ ಉನ್ನತ ಮಟ್ಟದ ಎನ್-95 ಮಾಸ್ಕ್ ಮತ್ತು ಸ್ಯಾನಿಟೈಜರ್ ಒದಗಿಸಲಾಗುವುದು. ಧಾರವಾಡ ನಗರ ಹಾಗೂ ಹುಬ್ಬಳ್ಳಿಯ ಗೋಕುಲ ಸುತ್ತಲಿನ ಪ್ರದೇಶದಲ್ಲಿ ವಾಸವಾಗಿರುವ ಗೋಸಾವಿ, ಹರಿಣಶಿಕಾರಿ,ಕೊಂಚಿಕೊರವ ಸಮಾಜದ ಬಡ ಕುಟುಂಬಗಳಿಗೆ 10 ದಿನಗಳಿಗೆ ಆಗುವಷ್ಟು ದಿನಸಿ ಸಾಮಾಗ್ರಿಗಳನ್ನು ಕೂಡ ಒದಗಿಸಲು ಉದ್ದೇಶಿಸಲಾಗಿದೆ.
ಹಿರಿಯ ನ್ಯಾಯವಾದಿ ಅರುಣ ಜೋಶಿ, ಮೃಣಾಲ ಜೋಶಿ, ಜಗದೀಶ ನಾಯ್ಕ ಹಾಗೂ ಶಾಸಕ ಅರವಿಂದ ಬೆಲ್ಲದ ಅವರ ಪ್ರಯತ್ನದಿಂದ ಈ ನೆರವು ದೊರೆತಿದ್ದು, ಶೀಘ್ರವೇ ಈ ಕಾರ್ಯಗಳನ್ನು ಜಿಲ್ಲಾಧಿಕಾರಿ ದೀಪಾ ಚೋಳನ್ ನೇತೃತ್ವದಲ್ಲಿ ನಿರ್ವಹಿಸಲಾಗುವುದು ಎಂದು ಅರುಣ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.