ಉಕ್ರೇನ್‌ನಲ್ಲಿ ರಾಜ್ಯದ 200 ವಿದ್ಯಾರ್ಥಿಗಳು ಸುರಕ್ಷಿತ: ಸಿಎಂ
Team Udayavani, Mar 7, 2022, 6:55 AM IST
ಹುಬ್ಬಳ್ಳಿ: ಯುದ್ಧಪೀಡಿತ ಉಕ್ರೇನ್‌ನಲ್ಲಿ ಕರ್ನಾಟಕದ ಇನ್ನೂ 200 ವಿದ್ಯಾರ್ಥಿಗಳು ಇದ್ದು, ಅವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರುವ ಪ್ರಯತ್ನ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಕ್ರೇನ್‌ನಲ್ಲಿ ಬಹಳಷ್ಟು ವಿದ್ಯಾರ್ಥಿಗಳು ಸಿಲುಕಿದ್ದರು. ಅವರನ್ನು ಹಂತ ಹಂತವಾಗಿ ಕರೆ ತರಲಾಗುತ್ತಿದೆ. ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ನೆರವಾಗಿದ್ದಾರೆ. ಉಕ್ರೇನ್‌ನಲ್ಲಿ ಸಿಲುಕಿರುವ ರಾಜ್ಯದ ಎಲ್ಲ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ.
ಎಂಬಿಬಿಎಸ್ ಓದುತ್ತಿರುವ ಕುಂದಗೋಳ ತಾಲೂಕು ಯರಗುಪ್ಪಿ ಗ್ರಾಮದ ಚೈತ್ರಾ ಗಂಗಾಧರ ಸಂಶಿ ಕೂಡ ಸಿಎಂ ಜತೆ ಬೆಂಗಳೂರಿನಿಂದ ಒಂದೇ ವಿಮಾನದಲ್ಲಿ ಆಗಮಿಸಿದರು. ನಿಲ್ದಾಣದಲ್ಲಿ ಚೈತ್ರಾಗೆ ಸಿಎಂ ಹೂಗುತ್ಛ ನೀಡಿ ಬರಮಾಡಿಕೊಂಡರು.
ಪ್ರಧಾನಿ ಖುದ್ದು ಕಾರ್ಯನಿರ್ವಹಣೆ
ಅನಂತರ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರೇ ಖುದ್ದು ವಿದ್ಯಾರ್ಥಿಗಳನ್ನು ಕರೆ ತರುವ ಕಾರ್ಯನಿರ್ವಹಣೆ ನೋಡಿಕೊಳ್ಳುತ್ತಿದ್ದಾರೆ. ಅವರು ಗಡಿಯ ನಾಲ್ಕೈದು ದೇಶಗಳ ಜತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಬಹಳ ದೊಡ್ಡ ಪ್ರಮಾಣದಲ್ಲಿ ಏರ್ ಲಿಫ್ಟ್ ಕಾರ್ಯ ಆಗುತ್ತಿದೆ. ಯಾರೂ ಆತಂಕ, ಭಯಗೊಳ್ಳುವ ಅವಶ್ಯಕತೆ ಇಲ್ಲ. ನವೀನ್ ಮೃತದೇಹ ತರುವ ಪ್ರಯತ್ನ ನಡೆಯುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.