ಈ ವರ್ಷ 337 ನವಜಾತ ಶಿಶುಗಳ ಮರಣ


Team Udayavani, Jan 29, 2021, 5:42 PM IST

337 newborn deaths this year

ಧಾರವಾಡ: ಕಳೆದ ಡಿಸೆಂಬರ್‌ ಅಂತ್ಯದವರೆಗೆ ಜಿಲ್ಲೆಯಲ್ಲಿ 24549 ಜನನಗಳಾಗಿದ್ದು, ಇದರಲ್ಲಿ 57 ಜನ ತಾಯಂದಿರು ಹಾಗೂ 337 ನವಜಾತ ಶಿಶುಗಳು ಮರಣ ಹೊಂದಿವೆ ಎಂದು ಡಿಸಿ ನಿತೇಶ ಪಾಟೀಲ ಹೇಳಿದರು. ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸಂತಾನೋತ್ಪತ್ತಿ ಹಾಗೂ ಮಕ್ಕಳ ಆರೋಗ್ಯ ಕಾರ್ಯಕ್ರಮಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನವಜಾತ ಶಿಶುಗಳ ಮತ್ತು ತಾಯಂದಿರಮರಣ ಪ್ರಮಾಣ ಕಡಿಮೆಗೊಳಿಸಲು ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

ವೈದ್ಯಕೀಯ ನಿರ್ಲಕ್ಷéದಿಂದ ಜೀವಹಾನಿ ಆಗಬಾರದು. ತೀವ್ರ ಚಿಕಿತ್ಸೆ ಅಗತ್ಯವಿರುವ ಪ್ರಕರಣಗಳನ್ನು ಮುಂಚಿತವಾಗಿಯೇ ಗುರುತಿಸಿ ಸುಸಜ್ಜಿತ ಆಸ್ಪತ್ರೆಗಳಿಗೆ ಶಿಫಾರಸು ಮಾಡಬೇಕೆಂದರು. ಜನನ ಸಂದರ್ಭದಲ್ಲಿ ನೀಡುವ ಲಸಿಕೆ, ಬಿಸಿಜಿ, ಓಪಿವಿ, ಪೆಂಟಾ-3, ಎಂಆರ್‌-1, ಓಪಿವಿ ಹಾಗೂ ಡಿಪಿಟಿ ಬೂಸ್ಟರ್‌ಗಳು ಸೇರಿದಂತೆ ಎಲ್ಲ ಲಸಿಕೆಗಳನ್ನು ಶೇ.97 ನೀಡಲಾಗಿದೆ. ವೈದ್ಯಕೀಯ ನಿರ್ಲಕ್ಷದಿಂದ ತಾಯಿ ಮತ್ತು ನವಜಾತ ಶಿಶುಗಳ ಪ್ರಕರಣಗಳು ಸಂಭವಿಸಬಾರದು.

ಇದನ್ನೂ ಓದಿ:ಕೋವಿಡ್‌ ಕಾರಣ ಹೇಳಬೇಡಿ, ಕಾರ್ಯಪ್ರವೃತ್ತರಾಗಿ

ಕೈಮೀರುವ ಹಂತದಲ್ಲಿ ಬೇರೆ ಕಡೆ ಸ್ಥಳಾಂತರಕ್ಕೆ ಶಿಫಾರಸ್ಸು ಮಾಡುವ ಪ್ರಕರಣಗಳು ಅ ಧಿಕವಾಗಿ ವರದಿಯಾಗುತ್ತಿವೆ. ಮಗುವಿನ ತೂಕ, ತಾಯಿಯ ಆರೋಗ್ಯ ಮತ್ತಿತರ ದೌರ್ಬಲ್ಯಗಳನ್ನು ಪೂರ್ವ ಹಂತದ ಭೇಟಿಗಳಲ್ಲಿಯೇ ಅಧ್ಯಯನ ಮಾಡಿ ಹೆಚ್ಚಿನ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆ ಅಗತ್ಯ ಕಂಡು ಬಂದರೆ ಹೆರಿಗೆ ಮುನ್ನವೇ ಸುಸಜ್ಜಿತ ಆಸ್ಪತ್ರೆಗಳಿಗೆ ಶಿಫಾರಸು ಮಾಡಬೇಕು. ಹೆರಿಗೆಯ ನಂತರ ಕೊನೆ ಘಳಿಗೆಯಲ್ಲಿ ಯಾವುದೇ ಅಪಾಯಕ್ಕೆ ಅವಕಾಶ ಮಾಡಿಕೊಡಬಾರದು ಎಂದರು.

ಕಿಮ್ಸ್‌ ನಿರ್ದೇಶಕ ಡಾ|ರಾಮಲಿಂಗಪ್ಪ ಅಂಟರತಾಣಿ ಮಾತನಾಡಿದರು. ಇದೇ ಸಂದರ್ಭದಲ್ಲಿ ತಾಯಂದಿರು ಹಾಗೂ ನವಜಾತ ಶಿಶುಗಳ ಮರಣ ಸಂಭವಿಸಿದ ಕುಟುಂಬಗಳ ಸದಸ್ಯರ, ಚಿಕಿತ್ಸೆ ನೀಡಿದ ವೈದ್ಯರ ಜತೆ ನೇರ ಸಮಾಲೋಚನೆ ನಡೆಸಲಾಯಿತು. ಜಿಲ್ಲಾ ಆರ್‌ಸಿಎಚ್‌ ಅ ಧಿಕಾರಿ ಡಾ|ಎಸ್‌. ಎಂ. ಹೊನಕೇರಿ ಮಾಹಿತಿ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ|ಯಶವಂತ ಮದೀನಕರ, ಡಿವೈಎಸ್‌ಪಿ ರಾಮನಗೌಡ ಹಟ್ಟಿ ಇದ್ದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.