37.10 ಕೋಟಿ ಜಲಧನ ಬಳಕೆಗೆ ಅನುಮೋದನೆ

Team Udayavani, May 31, 2019, 1:26 PM IST

Udayavani Kannada Newspaper

ಧಾರವಾಡ: ಪ್ರಸಕ್ತ ಸಾಲಿನ ಗ್ರಾಮೀಣ ಕುಡಿಯುವ ನೀರು ಯೋಜನೆಯಡಿ ಸರ್ಕಾರವು ಜಿಲ್ಲೆಗೆ ನಿಗದಿಪಡಿಸಿರುವ 37.10 ಕೋಟಿ ರೂ. ಅನುದಾನ ಬಳಕೆಗೆ ಜಿಪಂದಲ್ಲಿ ಗುರುವಾರ ಜರುಗಿದ ಸಭೆಯಲ್ಲಿ ಅನುಮೋದನೆ ದೊರೆಯಿತು.

ಕ್ರಿಯಾ ಯೋಜನೆ ತಯಾರಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ ಮಾತನಾಡಿ, ಸರ್ಕಾರದ ನಿಯಮಾವಳಿಗಳ ಪ್ರಕಾರ ಪ್ರತಿ ವ್ಯಕ್ತಿಗೆ ಕನಿಷ್ಠ 55 ಲೀಟರ್‌ ನೀರು ಪ್ರತಿನಿತ್ಯ ಬೇಕಾಗುತ್ತದೆ. ಈಗಾಗಲೇ ಈ ಪ್ರಮಾಣದಲ್ಲಿ ನೀರು ಸರಬರಾಜು ಆಗುತ್ತಿರುವ ಗ್ರಾಮಗಳನ್ನು ಹೊರತುಪಡಿಸಿ ತೀವ್ರ ಸಂಕಷ್ಟದಲ್ಲಿರುವ ಜನವಸತಿಗಳನ್ನು ಗುರುತಿಸಿ, ವಿವರಗಳನ್ನು ಜೂ. 1ರೊಳಗೆ ಎಲ್ಲಾ ಸದಸ್ಯರು ಒದಗಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯ ಸಂಶಿ ಹಾಗೂ ಕುಂದಗೋಳ ಭಾಗದ ಗ್ರಾಮಗಳಲ್ಲಿ, ನವಲಗುಂದ ತಾಲೂಕು ಬೆನ್ನೂರು ಸೇರಿದಂತೆ ಬಹುತೇಕ ಕಡೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಇವುಗಳ ನಿರ್ವಹಣೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದರು.

ಜಿಪಂ ಸಿಇಒ ಡಾ| ಬಿ.ಸಿ. ಸತೀಶ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 458 ಶುದ್ಧ ಕುಡಿಯುವ ನೀರು ಘಟಕಗಳು ಇವೆ. ಅವುಗಳಲ್ಲಿ 398 ಕಾರ್ಯ ನಿರ್ವಹಿಸುತ್ತಿದ್ದು, 60 ದುರಸ್ತಿಯಲ್ಲಿವೆ. ಆರ್‌ಒ ಘಟಕಗಳ ನಿರ್ವಹಣೆ ಗ್ರಾಪಂಗಳ ವ್ಯಾಪ್ತಿಗೆ ಬರುತ್ತದೆ. ಗ್ರಾಪಂಗಳ ವ್ಯಾಪ್ತಿಯಲ್ಲಿ ನುರಿತ ಕುಶಲಕರ್ಮಿಗಳು ಲಭ್ಯವಾಗದೇ ಎಲ್ಲೆಡೆ ಸಮಸ್ಯೆ ತಲೆದೋರುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ನಿರ್ವಹಣೆ ಹೊಣೆಯನ್ನು ಮಹಾನಗರ ಪಾಲಿಕೆಗಳ ಮಾದರಿಯಲ್ಲಿ ಖಾಸಗಿ ಏಜೆನ್ಸಿಗಳಿಗೆ ವಹಿಸಲು ಈಗಾಗಲೇ ಟೆಂಡರ್‌ ಕರೆಯಲಾಗಿದೆ ಎಂದು ತಿಳಿಸಿದರು.

ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ ಆರ್‌.ವಿ. ಮುನವಳ್ಳಿ ಮಾತನಾಡಿ, 2019-20ನೇ ಸಾಲಿನಲ್ಲಿ ಜಿಲ್ಲೆಗೆ ರಾಷ್ಟ್ರೀಯ ಗಾಮೀಣ ಕುಡಿಯುವ ನೀರು ಸರಬರಾಜು ಕಾರ್ಯಕ್ರಮದಡಿ 32.35 ಕೋಟಿ ಹಾಗೂ ಡಾ| ಡಿ.ಎಂ. ನಂಜುಂಡಪ್ಪ ವರದಿ ಆಧರಿಸಿ ರೂಪಿಸಲಾಗಿರುವ ವಿಶೇಷ ಅಭಿವೃದ್ಧಿ ಯೋಜನೆಯಡಿ 4.75 ಕೋಟಿ ರೂ. ಸೇರಿ ಒಟ್ಟು 37.10 ಕೋಟಿ ರೂ. ಅನುದಾನವನ್ನು ಸರ್ಕಾರ ನಿಗದಿಪಡಿಸಿದೆ ಎಂದರು. ವಿವಿಧ ಕ್ಷೇತ್ರದ ಜಿಪಂ ಸದಸ್ಯರು ತಮ್ಮ ಸಲಹೆ-ಸೂಚನೆ ನೀಡಿದರು. ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ, ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರಾದ ಚನ್ನಮ್ಮ ಶಿವನಗೌಡರ, ಕಲ್ಲಪ್ಪ ಪುಡಕಲಕಟ್ಟಿ, ನಿಂಗಪ್ಪ ಘಾಟಿನ್‌, ಉಪಕಾರ್ಯದರ್ಶಿ ಎ.ಎಂ. ಪಾಟೀಲ ಇದ್ದರು.

ಟಾಪ್ ನ್ಯೂಸ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗದ್ಗೀತೆಯ ಪ್ರಸ್ತುತತೆ ವಿಶೇಷ ಸಂವಾದ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.