ಶೇ.45 ಕೈಗಾರಿಕೆಗಳು ಪುನಾರಂಭ
Team Udayavani, May 19, 2020, 4:58 AM IST
ಧಾರವಾಡ: ಜಿಲ್ಲೆಯಲ್ಲಿ ಶೇ.45 ಮತ್ತು ರಾಜ್ಯದಲ್ಲಿ ಶೇ.40 ರಷ್ಟು ಕೈಗಾರಿಕೆಗಳು ಈಗಾಗಲೇ ಆರಂಭವಾಗಿವೆ. ಮುಂದಿನ ದಿನಗಳಲ್ಲಿ ಎಲ್ಲ ಕೈಗಾರಿಕೆಗಳು ಪುನರಾರಂಭಗೊಳ್ಳುವ ಭರವಸೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಕೈಗೊಂಡು ಅವರು ಮಾತನಾಡಿದರು. ಸಕಾಲಕ್ಕೆ ಬೀಜ, ಗೊಬ್ಬರ ರೈತರಿಗೆ ತಲುಪುವಂತೆ ಕೃಷಿ ಇಲಾಖೆ ಕ್ರಮ ಕೈಗೊಳ್ಳಬೇಕು. ಹೂವು ಬೆಳೆಗಾರರಿಗೆ ಪ್ರತಿ ಎಕರೆಗೆ 10 ಸಾವಿರ ಅಥವಾ ಒಂದು ಹೆಕ್ಟೆರಿಗೆ 25 ಸಾವಿರ ಸಬ್ಸಿಡಿ ನೀಡಲು ಸರಕಾರ ತೀರ್ಮಾನಿಸಿದೆ. ಮೇ 25 ರೊಳಗೆ ಅರ್ಹರಿಂದ ಅರ್ಜಿ ಸ್ವೀಕರಿಸಿ ಸಬ್ಸಿಡಿ ಹಣ ಅವರಿಗೆ ತಲುಪುವಂತೆ ತೋಟಗಾರಿಕೆಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಅರ್ಹ ಆಟೊ ಚಾಲಕರಿಗೆ 5 ಸಾವಿರ ಸಹಾಯಧನ ಪ್ರಕಟಿಸಿಲಾಗಿದ್ದು, ಆರ್‌ಟಿಒ ಅ ಧಿಕಾರಿಗಳು ಸೇವಾಸಿಂಧು ಆ್ಯಪ್ ಮೂಲಕ ಚಾಲಕರು ಅರ್ಜಿ ಸಲ್ಲಿಸುವಂತೆ ಮಾಹಿತಿ ನೀಡಿ, ಸೌಲಭ್ಯ ಅವರಿಗೆ ತಲುಪುವಂತೆ ಮಾಡಬೇಕು. ಅಂತರ್‌ಜಿಲ್ಲೆ ಹಾಗೂ ಜಿಲ್ಲೆಯೊಳಗೆ ಸಾರಿಗೆ ಸಂಚಾರಕ್ಕೆ ರಾಜ್ಯ ಸರ್ಕಾರ ಮೇ 19ರಿಂದ ಅನುಮತಿ ನೀಡಿದೆ. ಅಂತರ್ಜಿಲ್ಲಾ ಪ್ರಯಾಣಿಕರ ಬಗ್ಗೆ ಜಾಗೃತಿ ವಹಿಸಿ ಕೋವಿಡ್ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.
ಡಿಸಿ ದೀಪಾ ಚೋಳನ್ ಮಾತನಾಡಿ, ಮೇ 18ರ ವರೆಗೆ ಒಟ್ಟು 8,534 ಸ್ಯಾಂಪಲ್ ಸಂಗ್ರಹಿಸಿದ್ದು, ಅದರಲ್ಲಿ 7,315 ನೆಗೆಟಿವ್ ಆಗಿದ್ದು, 26 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 7 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಉಳಿದ 19 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. 1,193 ಜನರ ವರದಿ ಬರಬೇಕಿದೆ. ವಿವಿಧ ರಾಜ್ಯಗಳಿಂದ ಕಾರ್ಮಿಕರು ಸೇರಿದಂತೆ ಮೇ 18ರ ವರೆಗೆ 1,180 ಪ್ರಯಾಣಿಕರು ಜಿಲ್ಲೆಗೆ ಆಗಮಿಸಿದ್ದಾರೆ. ಎಲ್ಲರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ ಎಂದು ಮಾಹಿತಿ ನೀಡಿದರು. ಶಾಸಕ ಸಿ.ಎಂ. ನಿಂಬಣ್ಣವರ, ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಮಾತನಾಡಿದರು. ಮಹಾನಗರ ಪೊಲೀಸ್ ಆಯುಕ್ತ ಆರ್. ದಿಲೀಪ್, ಎಸ್‌ಪಿ ವರ್ತಿಕಾ ಕಟಿಯಾರ, ಜಿಪಂ ಸಿಇಒ ಡಾ| ಬಿ.ಸಿ. ಸತೀಶ, ಅಪರ ಜಿಲ್ಲಾಧಿ ಕಾರಿ ಶಿವಾನಂದ ಕರಾಳೆ, ಮಹಾನಗರ ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ಕಿಮ್ಸ್ ನಿರ್ದೇಶಕ ಡಾ| ರಾಮಲಿಂಗಪ್ಪ ಅಂಟರತಾನಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಯಶವಂತ ಮದೀನಕರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರೂರಿ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಸುಮೇರು ಪರ್ವತ ಉದ್ಘಾಟಿಸಿದ ಉಪರಾಷ್ಟ್ರಪತಿ ಧನಕರ್
Dharwad: ಕೃಷಿ ಸದೃಢವಾದರೆ ಮಾತ್ರ ಭಾರತ ಶಕ್ತಿಶಾಲಿಯಾಗಲು ಸಾಧ್ಯ: ಉಪರಾಷ್ಟ್ರಪತಿ ಧನಕರ್
Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ
Dharwad: ಕಟಾವಿಗೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು
MUDA Case: ಸಿಎಂ ಸಿದ್ದು ಮುಡಾ ಹಗರಣ… ಜ.27ಕ್ಕೆ ಮುಂದೂಡಿದ ಧಾರವಾಡ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Saif Ali Khan ಬೆನ್ನುಮೂಳೆಯಿಂದ ಚಾಕು ತೆಗೆದ ವೈದ್ಯರು; ಅಪಾಯದಿಂದ ಪಾರು
Thirthahalli: ನೇಣಿಗೆ ಶರಣಾದ ಹೋಟೆಲ್ ಉದ್ಯಮಿ… ಕಾರಣ ನಿಗೂಢ
ಬಸ್ಸಿನಲ್ಲಿ ಬಿಟ್ಟು ಹೋದ ಹಣದ ಚೀಲವನ್ನು ಮಹಿಳೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ
Just Married: ಮಚ್ಚನಿಗೆ ಕಿಚ್ಚನ ಸಾಥ್; ʼಜಸ್ಟ್ ಮ್ಯಾರೀಡ್ʼನಿಂದ ಹಾಡು ಬಂತು
800 ಕೋಟಿ ಮೌಲ್ಯ, 150 ಕೊಠಡಿ.. ʼಪಟೌಡಿ ಅರಮನೆʼಯ ನವಾಬನಾಗಿರುವ ಸೈಫ್ ಅಲಿ ಆಸ್ತಿ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.