ಧಾರವಾಡ ಕಟ್ಟಡ ಕುಸಿತ: 2 ಸಾವು;30 ಮಂದಿ ರಕ್ಷಣೆ
Team Udayavani, Mar 19, 2019, 10:57 AM IST
ಧಾರವಾಡ:ನಿರ್ಮಾಣ ಹಂತದ ಬೃಹತ್ ಕಾಂಪ್ಲೆಕ್ಸ್ ನೋಡ, ನೋಡುತ್ತಿದ್ದಂತೆಯೇ ಸಂಪೂರ್ಣವಾಗಿ ಕುಸಿದು ಬಿದ್ದ ಘಟನೆ ಮಂಗಳವಾರ ಧಾರವಾಡದಲ್ಲಿ ನಡೆದಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಕೆಲವರನ್ನು ಸ್ಥಳೀಯರು ರಕ್ಷಿಸಿದ್ದಾರೆ. ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ವರದಿ ತಿಳಿಸಿದೆ.
ಐದು ಅಂತಸ್ತಿನ ಕಟ್ಟಡದ ನಿರ್ಮಾಣ ನಡೆಯುತ್ತಿದ್ದು, ಕೆಳ ಅಂತಸ್ತಿನಲ್ಲಿ ಹಲವಾರು ಅಂಗಡಿಗಳಿದ್ದವು. ಕಟ್ಟಡ ಕುಸಿತದ ಘಟನೆಯಲ್ಲಿ ನೂರಾರು ಮಂದಿ ಸಿಲುಕಿದ್ದಾರೆ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ, ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿದ್ದಾರೆ.
ಅವಶೇಷಗಳಡಿ ಸಿಲುಕಿದವರು ಕಾಪಾಡಿ, ಕಾಪಾಡಿ ಎಂದು ಕೂಗಾಡುತ್ತಿರುವುದು ಕೇಳಿಸುತ್ತಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಟ್ಟಡ ಕುಸಿತದ ಅವಶೇಷಗಳಡಿ ಸಿಲುಕಿದವರಲ್ಲಿ ಕೆಲವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿರುವುದಾಗಿ ಮಾಧ್ಯಮಗಳ ವರದಿ ತಿಳಿಸಿದೆ.
ಗಾಯಾಳುಗಳನ್ನು ಸಾಗಿಸಲು ಹತ್ತು ಆ್ಯಂಬುಲೆನ್ಸ್ ಗಳ ವ್ಯವಸ್ಥೆ ಮಾಡಲಾಗಿದೆ. 3 ಅಗ್ನಿಶಾಮಕ ವಾಹನ, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.