ವಾರ್ಡ್‌ಗೆ 50 ಲಕ್ಷ ಕನ್ನಡಿಯೊಳಗಿನ ಗಂಟು?ನಾಲ್ಕು ತಿಂಗಳಾದರೂ ಬಿಡಿಗಾಸಿಲ್ಲ
ಪಾಲಿಕೆ ಸಾಮಾನ್ಯ ಸಭೆಗೂ ಮಹಾಪೌರರು ಗೌನ್ ಧರಿಸದೆ ಬರಲು ನಿರ್ಧರಿಸಿದ್ದಾರೆ
Team Udayavani, Oct 26, 2022, 12:56 PM IST
ಹುಬ್ಬಳ್ಳಿ: ಪ್ರತಿ ವಾರ್ಡ್‌ಗೆ 50 ಲಕ್ಷ ರೂ.ನಂತೆ ಅಭಿವೃದ್ಧಿ ಕಾರ್ಯಕ್ಕೆ ನೀಡುವುದಾಗಿ ಮಹಾಪೌರರು ಘೋಷಿಸಿ ನಾಲ್ಕು ತಿಂಗಳು ಕಳೆದರೂ ಇದುವರೆಗೂ ಬಿಡಿಕಾಸು ಬಿಡುಗಡೆಯಾಗಿಲ್ಲ. ಅ. 28ರಂದು ನಡೆಯುವ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಈ ವಿಷಯ ಅನುಮೋದನೆಗೆ ಬರಲಿದೆ ಎಂದು ಹೇಳಲಾಗುತ್ತಿದ್ದು, ಆ ಸಭೆಯಲ್ಲಿಯಾದರೂ ಅನುಮೋದನೆಗೊಂಡು ವಾರ್ಡ್ ಅಭಿವೃದ್ಧಿಗೆ ಹಣ ಬಂದೀತೆ ಎಂಬ ನಿರೀಕ್ಷೆ ಎಲ್ಲ ಸದಸ್ಯರದ್ದಾಗಿದೆ. ಆದರೆ, ಸದ್ಯದ ಸ್ಥಿತಿಯಲ್ಲಿ ಅದು ಕಷ್ಟಸಾಧ್ಯ ಎಂಬುದನ್ನು ವಾಸ್ತವದ ಸ್ಥಿತಿ ಹೇಳುತ್ತಿದೆ.
ಮಹಾಪೌರ ಈರೇಶ ಅಂಚಟಗೇರಿ ಅವರು ಮಹಾಪೌರರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಸಾಮಾನ್ಯ ಸಭೆಯಲ್ಲಿ ಮಾಡಿದ ಭಾಷಣದಲ್ಲಿ ಪ್ರತಿ ವಾರ್ಡ್‌ಗೆ 50 ಲಕ್ಷ ರೂ. ನೀಡುವುದಾಗಿ ಘೋಷಿಸಿದ್ದರು. ವಿಪಕ್ಷ-ಆಡಳಿತ ಪಕ್ಷದ ಸದಸ್ಯರು ಮೇಜು ತಟ್ಟುವ ಮೂಲಕ ಸ್ವಾಗತಿಸಿದ್ದರು. ಆದಷ್ಟು ಶೀಘ್ರದಲ್ಲಿಯೇ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಲಾಗಿತ್ತು. ನಾಲ್ಕು ತಿಂಗಳು ಕಳೆಯುತ್ತಿದ್ದರೂ ಅನುದಾನ ವಿಚಾರದಲ್ಲಿ ಯಾವುದೇ ಪ್ರಗತಿ ಕಾಣದಾಗಿದೆ.
ಪಾಲಿಕೆ ಸಭೆಯಲ್ಲಿ ಮಹಾಪೌರರೇ ಘೋಷಿಸಿದಂತೆ ಪ್ರತಿ ವಾರ್ಡ್‌ಗೆ 50 ಲಕ್ಷ ರೂ. ಅನುದಾನ ನೀಡಿಕೆಗೆ ಕ್ರಮ ಕೈಗೊಳ್ಳಬೇಕಾದ ಪಾಲಿಕೆ ಆಯುಕ್ತರು, ಇದನ್ನು ನೇರವಾಗಿ ಅನುಷ್ಠಾನಕ್ಕೆ ಮುಂದಾಗದೆ ವಿಷಯವನ್ನು ಪಾಲಿಕೆ ಸಾಮಾನ್ಯ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದ ನಂತರ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
28ರಂದು ಮಂಡನೆ-ಅನುಮೋದನೆ?: ಅ.28ರಂದು ನಡೆಯುವ ಪಾಲಿಕೆ ಸಾಮಾನ್ಯ ಸಭೆಯಲ್ಲಿ ವಾರ್ಡ್‌ಗೆ 50 ಲಕ್ಷ ರೂ. ನೀಡಿಕೆಯ ಮಹಾಪೌರರ ಘೋಷಣೆಯನ್ನು ಮಂಡಿಸಿ ಅನುಮೋದನೆ ಪಡೆಯಲು ಪಾಲಿಕೆ ಆಯುಕ್ತರು ಮುಂದಾಗಿದ್ದಾರೆಯಾದರೂ, ಸಭೆ ನಡೆಯುವುದೇ ಎಂಬ ಶಂಕೆ ವ್ಯಕ್ತವಾಗಿದೆ.
ಮಹಾಪೌರರು ಗೌನ್ ಧರಿಸದಿರಲು ನಿರ್ಧರಿಸಿದ್ದು, ವಿಪಕ್ಷ ಸದಸ್ಯರು ಇದನ್ನು ವಿರೋಧಿಸಿದ ಪರಿಣಾಮ ಹಿಂದಿನ ಸಭೆಯೇ ಮೊಟಕುಗೊಂಡಿತ್ತು. ಅ.28ರಂದು ಧಾರವಾಡದಲ್ಲಿ ನಡೆಯುವ ಪಾಲಿಕೆ ಸಾಮಾನ್ಯ ಸಭೆಗೂ ಮಹಾಪೌರರು ಗೌನ್ ಧರಿಸದೆ ಬರಲು ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಮಹಾಪೌರರು ಗೌನ್ ಧರಿಸದಿದ್ದರೆ ಸಭೆ ನಡೆಸಲು ಬಿಡುವುದಿಲ್ಲ ಎಂಬುದು ವಿಪಕ್ಷದವರ ಸ್ಪಷ್ಟ ನಿಲುವಾಗಿದೆ. ಇದರಿಂದ ಅ. 28ರಂದು ಸಾಮಾನ್ಯ ಸಭೆಯಲ್ಲಿ ಗದ್ದಲವಾಗಿ ಸಭೆ ಮುಂದೂಡಿಕೆಯಾದರೆ ವಾರ್ಡ್‌ಗೆ 50 ಲಕ್ಷ ರೂ. ನೀಡಿಕೆ ವಿಷಯ ಮಂಡನೆಯೂ ಸಾಧ್ಯವಾಗದು. ಅಲ್ಲಿಗೆ ವಿಷಯ ಮಂಡನೆ ಮತ್ತೂಂದು ತಿಂಗಳಿಗೆ
ಮುಂದೂಡಿಕೆಯಾದಂತಾಗಲಿದೆ.
ಮಂಡನೆಯಾದರೂ ಹಣ ದೊರಕೀತೇ?
ಸಾಮಾನ್ಯ ಸಭೆಯಲ್ಲಿ ಮಂಡನೆಯಾಗಿ ಅನುಮೋದನೆ ಪಡೆದರೂ ಹಣ ನೀಡಿಕೆ ಸಾಧ್ಯವೇ? ಪ್ರತಿ ವಾರ್ಡ್‌ಗೆ 50 ಲಕ್ಷ ರೂ.ನಂತೆ ಒಟ್ಟು 82 ವಾರ್ಡ್ ಗಳಿಗೆ ಅಂದಾಜು 41 ಕೋಟಿ ರೂ. ಹಣ ಬೇಕಾಗುತ್ತದೆ. ಸದ್ಯದ ಪಾಲಿಕೆ ಆರ್ಥಿಕ ಸ್ಥಿತಿಯಲ್ಲಿ ಇಷ್ಟೊಂದು ದೊಡ್ಡ ಮೊತ್ತದ ಹಣವನ್ನು ಎಲ್ಲಿಂದ ಹೊಂದಿಕೆ ಮಾಡುವುದು ಎಂಬುದು ಯಕ್ಷಪ್ರಶ್ನೆಯಾಗಿದೆ. ಕೆಲ ಮೂಲಗಳ ಪ್ರಕಾರ ಪಾಲಿಕೆಗೆ ಇಲ್ಲಿವರೆಗೆ ಅಂದಾಜು 30 ಕೋಟಿ ರೂ. ಆದಾಯ ಸಂಗ್ರಹವಾಗಿದ್ದು, ಡಿಸೆಂಬರ್-ಜನವರಿ ವೇಳೆಗೆ ಇನ್ನು 100 ಕೋಟಿ ರೂ. ಆದಾಯ ಸಂಗ್ರಹವಾಗಬಹುದು ಎಂದು ಅಂದಾಜಿಸಲಾಗಿದೆ. ಒಟ್ಟಾರೆ 130 ಕೋಟಿ ರೂ. ಬರಬಹುದು ಎಂಬ ನಿರೀಕ್ಷೆ ಇದೆ.
ಮತ್ತೊಂದು ಕಡೆ ಪಾಲಿಕೆಯಿಂದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಕಾರ್ಯಾದೇಶ (ವರ್ಕ್ ಆರ್ಡರ್) ನೀಡಿದ ಮೊತ್ತವೇ ಅಂದಾಜು 300 ಕೋಟಿ ರೂ. ಆಗಿದೆ. ಈಗಾಗಲೇ ಕಾರ್ಯಾದೇಶ ನೀಡಿದ ಕಾಮಗಾರಿಗಳಿಗೆ ನೀಡಬೇಕಾದ ಹಣದ ಅರ್ಧದಷ್ಟು ಆದಾಯ ಪಾಲಿಕೆ ಬರುವುದಿಲ್ಲ ಎಂದಾದರೆ, ಪ್ರತಿ ವಾರ್ಡ್‌ಗೆ 50 ಲಕ್ಷ ರೂ. ಯಾವ ಬಾಬತ್ತಿನಿಂದ ನೀಡಲಾಗುತ್ತದೆ ಎಂಬ ಪ್ರಶ್ನೆ ಕಾಡತೊಡಗಿದೆ.
ಗುತ್ತಿಗೆದಾರರ ಹಿಂದೇಟು
ಪಾಲಿಕೆಯಿಂದ ಬರಬೇಕಾದ ಬಾಕಿ ಹಣದ ಹಿನ್ನೆಲೆಯಲ್ಲಿ ಪಾಲಿಕೆ ಅಭಿವೃದ್ಧಿ ಕಾಮಗಾರಿಗಳ ಗುತ್ತಿಗೆ ಪಡೆಯಲು ಗುತ್ತಿಗೆದಾರರು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ. ಇದೇ ಸ್ಥಿತಿ ಮುಂದುವರಿದರೆ ಪಾಲಿಕೆ ಕಾಮಗಾರಿ ಗುತ್ತಿಗೆ ಪಡೆಯುವುದಕ್ಕೂ ಗುತ್ತಿಗೆದಾರರು ಸಿಗದ ಸ್ಥಿತಿ ನಿರ್ಮಾಣವಾಗಲಿದೆ ಎಂಬ ಆತಂಕ ಅನೇಕರದ್ದಾಗಿದೆ.
ಗೊಂದಲ-ಶಂಕೆ
ರಾಷ್ಟ್ರಪತಿ ಪೌರಸನ್ಮಾನಕ್ಕಾಗಿ ಕೈಗೊಂಡ ಕಾರ್ಯಗಳ ಹಣವನ್ನೇ ಇನ್ನು ನೀಡಿಲ್ಲ ಎಂದು ಹೇಳಲಾಗುತ್ತಿದೆ. ಇಂತಹ ಸ್ಥಿತಿಯಲ್ಲಿ ಪ್ರತಿ ವಾರ್ಡ್‌ಗೆ 50 ಲಕ್ಷ ರೂ. ನೀಡಲು ಸಾಧ್ಯವೆ ಎಂಬ ಗೊಂದಲ-ಶಂಕೆ ಅನೇಕ ಸದಸ್ಯರನ್ನು ಕಾಡುತ್ತಿದೆ. ಈ ಬಗ್ಗೆ ಮಹಾಪೌರರು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದ್ದು, ತಾವು ಮಾಡಿದ ಘೋಷಣೆಯಂತೆ ಆದಷ್ಟು ಶೀಘ್ರ ವಾರ್ಡ್‌ಗಳಿಗೆ ತಲಾ 50 ಲಕ್ಷ ರೂ. ಬಿಡುಗಡೆ ಮಾಡಬೇಕು. ಇಲ್ಲವಾದರೆ, ಮಹಾಪೌರರ ಘೋಷಣೆ ನಮ್ಮ ಮೂಗಿಗೆ ಸವರಿದ ತುಪ್ಪದಂತಾಗಲಿದೆ ಎಂಬ ಅನಿಸಿಕೆ ಹಲವು ಸದಸ್ಯರದ್ದಾಗಿದೆ.
ಅಮರೇಗೌಡ ಗೋನವಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.