ಕೊಯ್ನಾದಿಂದ 52 ಸಾವಿರ ಕ್ಯುಸೆಕ್‌ ನೀರು ಬಿಡುಗಡೆ


Team Udayavani, Aug 17, 2018, 3:59 PM IST

17-agust-18.jpg

ಚಿಕ್ಕೋಡಿ: ಕೆಲ ದಿನಗಳಿಂದ ಬಿಡದೆ ಸುರಿಯುತ್ತಿರುವ ಮಳೆಯಿಂದ ರಾಜ್ಯದ ಗಡಿ ಭಾಗದಲ್ಲಿರುವ ಕೊಯ್ನಾ ಜಲಾಶಯ ಭರ್ತಿಯಾಗಿದ್ದು, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಗುರುವಾರ ಸಂಜೆ 52 ಸಾವಿರ ಕ್ಯುಸೆಕ್‌ ನೀರನ್ನು ಹೊರಬಿಟ್ಟಿದ್ದರಿಂದ ನದಿಗಳಿಗೆ ಅಪಾರ ಪ್ರಮಾಣದ ನೀರು ರಾಜ್ಯಕ್ಕೆ ಹರಿದು ಬರುತ್ತಿದೆ. ಗಡಿ ಭಾಗದಲ್ಲಿ ಕೃಷ್ಣಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ.

ಕೊಯ್ನಾ ಜಲಾಶಯವು 105 ಟಿಎಂಸಿ ಅಡಿ ನೀರಿನ ಸಂಗ್ರಹ ಹೊಂದಿದ್ದು, ಈಗಾಗಲೇ 103 ಟಿಎಂಸಿ ನೀರು ಜಲಾಶಯದಲ್ಲಿ ಸಂಗ್ರಹವಾಗಿದೆ. ಜಲಾಶಯವು 659 ಅಡಿ ಗರಿಷ್ಟ ನೀರಿನ ಮಟ್ಟ ಹೊಂದಿದ್ದು, ಗುರುವಾರ 558 ಅಡಿ ನೀರಿನ ಮಟ್ಟ ತಲುಪಿರುವುದರಿಂದ ಕೃಷ್ಣಾ ನದಿಗೆ ಜಲಾಶಯದಿಂದ ಗುರುವಾರ ಸಂಜೆ ಸುಮಾರು 52 ಸಾವಿರ ಕ್ಯುಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಮಳೆ ನೀರು ಮತ್ತು ಜಲಾಶಯದ ನೀರು ಸೇರಿ ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ ಕೃಷ್ಣಾ ನದಿಗೆ ಸುಮಾರು 1 ಲಕ್ಷ ಕ್ಯುಸೆಕ್‌ ನೀರು ಹರಿದು ಬರುತ್ತಿದೆ. ಮತ್ತೆ ಕೊಯ್ನಾದಿಂದ ಹೆಚ್ಚಿನ ನೀರು ಹರಿ ಬಿಟ್ಟರೆ ಕೃಷ್ಣಾ ನದಿ ನೀರಿನಮಟ್ಟ ಹೆಚ್ಚಳವಾಗುವ ಸಾಧ್ಯತೆ ಇದೆ. ಕೃಷ್ಣಾ, ದೂಧಗಂಗಾ ನದಿಗಳ ನೀರಿನ ಮಟ್ಟ ಗುರುವಾರ ಮತ್ತೆ ಎರಡು ಅಡಿಯಷ್ಟು ಹೆಚ್ಚಳವಾಗಿದೆ. ಇದರಿಂದ ಚಿಕ್ಕೋಡಿ ತಾಲೂಕಿನಲ್ಲಿ ನಾಲ್ಕು ಸೇತುವೆಗಳು ಮುಳುಗಡೆಗೊಂಡು ಸಂಚಾರ ಕಡಿತಗೊಂಡಿದೆ. ಕಲ್ಲೋಳ- ಯಡೂರ, ಮಲಿಕವಾಡ- ದತ್ತವಾಡ, ಕಾರದಗಾ- ಭೋಜ, ಭೋಜವಾಡಿ- ಕುನ್ನೂರ ಸೇತುವೆಗಳು ಮುಳುಗಡೆಯಾಗಿವೆ.

ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ ಮೂಲಕ ಕೃಷ್ಣಾ ನದಿಗೆ 79,730 ಕ್ಯುಸೆಕ್‌ ನೀರು ಹರಿದು ಬರುತ್ತಿದೆ. ದೂಧಗಂಗಾ ನದಿ ಮೂಲಕ 21,120 ಕ್ಯುಸೆಕ್‌ ನೀರು ಹರಿದು ಕೃಷ್ಣಾ ನದಿಗೆ ಸೇರುತ್ತಿದೆ. ಇದರಿಂದ ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ ಕೃಷ್ಣಾ ನದಿಗೆ 10,350 ಕ್ಯುಸೆಕ್‌ ನೀರು ಹರಿದು ಬರಲಾರಂಭಿಸಿದೆ. ಹಿಪ್ಪರಗಿ ಬ್ಯಾರೇಜ್‌ ಮೂಲಕ 93 ಸಾವಿರ ಕ್ಯುಸೆಕ್‌ ನೀರು ಹರಿದು ಆಲಮಟ್ಟಿ ಜಲಾಶಯಕ್ಕೆ ಹೋಗುತ್ತಿದೆ ಎಂದು ತಹಶೀಲ್ದಾರ ಸಿ.ಎಸ್‌.ಕುಲಕರ್ಣಿ ತಿಳಿಸಿದರು. ಮಹಾರಾಷ್ಟ್ರದ ಮಳೆ ವಿವರ: ಕೊಯ್ನಾ-109 ಮಿಮೀ, ನವಜಾ-98 ಮಿಮೀ, ಮಹಾಬಳೇಶ್ವರ-106 ಮಿಮೀ, ವಾರಣಾ-27 ಮಿಮೀ, ಸಾಂಗಲಿ-04 ಮಿಮೀ, ಕೊಲ್ಲಾಪೂರ- 08ಮಿಮೀ, ಕಾಳಮ್ಮವಾಡಿ- 34ಮಿಮೀ, ರಾಧಾನಗರಿ-63 ಮಿಮೀ, ಪಾಟಗಾಂವ-154ಮಿಮೀ ಮಳೆಯಾಗಿದೆ.

ಟಾಪ್ ನ್ಯೂಸ್

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.