“ಜಲಜೀವನ’ಕ್ಕೆ 3 ಜಿಲ್ಲೆಗೆ 5406 ಕೋಟಿ
ವಿಜಯಪುರಕ್ಕೆ 2385 ಕೋಟಿರಾಯಚೂರಿಗೆ 1,988-ಧಾರವಾಡಕ್ಕೆ 1032 ಕೋಟಿ ಅನುದಾನ
Team Udayavani, Jun 16, 2021, 2:54 PM IST
ವರದಿ: ಅಮರೇಗೌಡ ಗೋನವಾರ
ಹುಬ್ಬಳ್ಳಿ: ಗ್ರಾಮೀಣ ಹಾಗೂ ನಗರ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆಯ ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಉತ್ತರ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಅಂದಾಜು 5,406.49 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಮುಂದಿನ 30 ತಿಂಗಳಲ್ಲಿ ಮೂರು ಜಿಲ್ಲೆಗಳ ಸುಮಾರು 2,847 ಗ್ರಾಮೀಣ ಜನವಸತಿ ಹಾಗೂ ಅನೇಕ ನಗರ ಸ್ಥಳೀಯ ಸಂಸ್ಥೆ ಪ್ರದೇಶಗಳು ಜಲಭಾಗ್ಯ ಪಡೆಯಲಿವೆ.
ಧಾರವಾಡ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ನಬಾರ್ಡ್ ನಿಡಾ ಸಹಾಯಧನ ಹಾಗೂ ಕೇಂದ್ರ ಮತ್ತು ರಾಜ್ಯಗಳ ಸರಕಾರಗಳ ಅನುದಾನದೊಂದಿಗೆ ಜಲಜೀವನ ಮಿಷನ್‌ದಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಅನುಮೋದನೆ ದೊರೆತಿದೆ. ಮೂರು ಜಿಲ್ಲೆಗಳಿಗೆ ಎಷ್ಟು ಅನುದಾನ ಎಂಬುದನ್ನು ಸಹ ಹಂಚಿಕೆ ಮಾಡಲಾಗಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿವೆ. ಕೆಲವೊಂದು ಕಡೆಗಳಲ್ಲಂತೂ ಬೇಸಿಗೆ ಆರಂಭಕ್ಕೆ ಮುನ್ನವೇ ಟ್ಯಾಂಕರ್ ನೀರು ಪೂರೈಕೆ ಮಾಡಬೇಕಾದ ಸ್ಥಿತಿ ಇದೆ. ಅನೇಕ ಗ್ರಾಮಗಳಿಗೆ ಕೆರೆ-ಹಳ್ಳಗಳು ಆಸರೆಯಾಗಿದ್ದರೆ, ಇನ್ನು ಕೆಲವು ಕಡೆ ಕೊಳವೆ ಬಾವಿಗಳು ನೀರಿನ ಪೂರೈಕೆ ಮಾಡುತ್ತಿವೆ.
ಜನರಿಗೆ ಶುದ್ಧ ಹಾಗೂ ಸಮರ್ಪಕ ಕುಡಿಯುವ ನೀರು ನೀಡುವ ಉದ್ದೇಶದೊಂದಿಗೆ ಬಹುಗ್ರಾಮ ಕುಡಿಯುವ ನೀರು ಯೋಜನೆ ಕೈಗೊಳ್ಳಲಾಗುತ್ತಿದೆ. ಕೇಂದ್ರ ಸರಕಾರದ ಜಲಜೀವನ ವಿಷನ್ ಇದಕ್ಕೆ ಮಹತ್ವದ ಸಾಥ್ ನೀಡುತ್ತಿದೆ. ಜಲಜೀವನ ಮಿಷನ್ ಅಡಿಯಲ್ಲಿ ಮೂರು ಜಿಲ್ಲೆಗಳಿಗೆ ನೀಡಲಾದ ಅಂದಾಜು ಒಟ್ಟು 5,406 ಕೋಟಿ ರೂ.ಗಳಲ್ಲಿ ವಿಜಯಪುರ ಜಿಲ್ಲೆ ಹೆಚ್ಚಿನ ಅನುದಾನ ಪಡೆದಿದ್ದು, ಎರಡು ಪ್ಯಾಕೇಜ್‌ಗಳಲ್ಲಿ ಒಟ್ಟು 2,385.99 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
MUST WATCH
ಹೊಸ ಸೇರ್ಪಡೆ
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.