ಯಲ್ಲಾಪುರ ತಾಲೂಕಿನ ಶಿರ್ಲೇ ಫಾಲ್ಸ್ ವೀಕ್ಷಣೆಗೆ ತೆರಳಿ ನಾಪತ್ತೆಯಾಗಿದ್ದ 6 ಯುವಕರು ಪತ್ತೆ
Team Udayavani, Jul 23, 2021, 3:18 PM IST
ಹುಬ್ಬಳ್ಳಿ : ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಶಿರ್ಲೇ ಫಾಲ್ಸ್ ವೀಕ್ಷಣೆಗೆ ತೆರಳಿ, ಗುರುವಾರ ಕಾಣೆಯಾಗಿದ್ದ, ಇಲ್ಲಿನ ನವನಗರದ ಆರು ಯುವಕರು ಶುಕ್ರವಾರ ಪತ್ತೆಯಾಗಿದ್ದಾರೆ.
ನವವನಗರದ ಆಸೀಫ್ ಮಕಬುಲ್ ಸಾಬ್, ಅಹ್ಮದ್ ಸೈಯದ್ ಶೇಖ್, ಅಬತಾಬ್ ಸದ್ದಾಂ, ಮಾಬುಸಾಬ್ ಶಿರಹಟ್ಟಿ, ಶಾನು ಬಿಜಾಪುರ, ಇಮ್ತಿಯಾಜ್ ಮಿಲ್ಲಾನವರ ಫಾಲ್ಸ್ ವೀಕ್ಷಣೆಗೆ ತೆರಳಿ ಕಾಣೆಯಾಗಿದ್ದರು.
ಸ್ಥಳದಲ್ಲಿದ್ದ ವಾಹನ ಗಮನಿಸಿ ಸ್ಥಳಿಯರು ಕಾಣೆಯಾದವರು ಹುಬ್ಬಳ್ಳಿಯವರೆಂದು ಭಾವಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದರು.
ಹಡುಕಾಟ ಕೈಗೊಂಡಾಗ ಯುವಕರು ಅರಣ್ಯದಲ್ಲಿ ಪತ್ತೆಯಾಗುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿದೆ.
ಇಲ್ಲಿನ ನವನಗರದಿಂದ ಪ್ರವಾಸ ಸ್ಥಳ ನೋಡಲು ಬಂದಿದ್ದ ಆರು ಯುವಕರು ಗುರುವಾರದಿಂದ ನಾಪತ್ತೆಯಾಗಿದ್ದು, ಶುಕ್ರವಾರ ಪತ್ತೆಯಾಗಿದ್ದಾರೆ. ಯಲ್ಲಾಪುರ ತಾಲೂಕಿನಲ್ಲಿ ಬರುವ ಶಿರ್ಲೇ ಫಾಲ್ಸ್ ನೋಡಲು ಬಂದು ಅಲ್ಲಿಂದ ಕಣ್ಮರೆಯಾಗಿದ್ದರು. ಅಲ್ಲಿ ನಿಂತಿರುವ ವಾಹನಗಳನ್ನು ನೋಡಿ ಹುಬ್ಬಳ್ಳಿಯವರು ಎಂದು ಗುರುತಿಸಲಾಗಿತ್ತು. ಆದರೆ ಅವರುಗಳ ಮಾಹಿತಿ ಲಭ್ಯವಾಗಿರಲಿಲ್ಲ.
ಶುಕ್ರವಾರ ಯುವಕರು ಅರಣ್ಯದಲ್ಲಿ ಪತ್ತೆಯಾಗಿದ್ದು, ನವನಗರದ ಆಸೀಫ ಮಕಬುಲಸಾಬ ಡಾಲಾಯಿತ್, ಅಹ್ಮದ ಸೈಯ್ಯದ ಶೇಖ, ಅಬತಾಬ್ ಸದ್ದಾಂ ಶಿರಹಟ್ಟಿ, ಮಾಬುಸಾಬ ಮಕಬುಲಸಾಬ ಶಿರಹಟ್ಟಿ, ಶಾನು ಬಿಜಾಪುರಿ ಹಾಗೂ ಇಮ್ತಿಯಾಜ್ ನೀರಸಾಬ ಮುಲ್ಲಾನವರ ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.